Rain Alert : ಇಂದು ಕರಾವಳಿ ಹಾಗೂ ಬೆಂಗಳೂರಿನಲ್ಲಿ ಭಾರೀ ಮಳೆ

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಆರ್ಭಟ ಹೆಚ್ಚಾಗುವ ಸಾಧ್ಯತೆಯಿದ್ದು, ಮುಂದಿನ ಐದು ದಿನಗಳ ಕಾಲ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಹಾಗೂ ಭಾರತೀಯ ಹವಾಮಾನ ಇಲಾಖೆ (IMD) ಜಂಟಿಯಾಗಿ ಮುನ್ನೆಚ್ಚರಿಕೆ ನೀಡಿವೆ.
ಯೆಲ್ಲೋ ಅಲರ್ಟ್ ಘೋಷಣೆ
ವಿಶೇಷವಾಗಿ ಇಂದಿನಿಂದ (ಮೇ 29) ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೆಂಗಳೂರಿನಲ್ಲೂ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಕರ್ನಾಟಕದ ಈ ಜಿಲ್ಲೆಗಳಲ್ಲಿ ವರುಣನ ಆರ್ಭಟ
ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ 64.5 ಮಿ.ಮೀ ರಿಂದ 115.5 ಮಿ.ಮೀ ವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಮೇ 29 ಮತ್ತು 30ರಂದು ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದ್ದು, ಮೇ 31ರಿಂದ ಜೂನ್ 2ರವರೆಗೆ ಗಾಳಿಯ ವೇಗ 30ರಿಂದ 40 ಕಿ.ಮೀ ಇರಲಿದೆ ಎಂದು ಎಚ್ಚರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.
ಇದನ್ನು ಓದಿ : ನಾಳೆಯಿಂದ 3 ದಿನ ರಾಜ್ಯಾದ್ಯಂತ ಭಾರಿ ಗುಡುಗು, ಸಿಡಿಲು ಸಹಿತ ಮಳೆ

Rain Alert – ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಮಳೆ
ಇತ್ತ ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಮೇ 29ರಿಂದ ಜೂನ್ 2ರವರೆಗೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದಲ್ಲೂ ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಮೀನುಗಾರರು ಹಾಗೂ ನದಿ ತೀರದ ಪ್ರದೇಶದ ನಿವಾಸಿಗಳು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

ಇದನ್ನು ನೋಡಿ : ಯಾರ್ ಯಾರ್ಗೆ ಸಚಿವ ಸ್ಥಾನ ಸಿಗುತ್ತೆ ಗೊತ್ತಾ? ಸಿದ್ದು ಟೀಂನ 16 ಮಂದಿಗೆ ಶುರುವಾಯ್ತು ಢವಢವ




