Rain Alert : ಮತ್ತೆ ಮಂಕಾದ ಮುಂಗಾರು: ತಲೆ ಮೇಲೆ ಕೈ ಹೊತ್ತು ಕುಳಿತ ರೈತ

ನಿರೀಕ್ಷೆಯಂತೆಯೇ ಎಲ್ ನಿನೋ ಭಾರತದಲ್ಲಿ ಪ್ರಭಾವ ಬೀರ ತೊಡಗಿದೆ. ದೇಶಾದ್ಯಂತ ಮಳೆ ಕೊರತೆ ಎದುರಾಗಿದ್ದು, ರಾಜ್ಯದಲ್ಲೂ ಸುಡು ಬಿಸಿಲಿನ ವಾತಾವರಣ ಕಂಡು ಬರುತ್ತಿದೆ. ರಾಜ್ಯದ ಕೆಲವು ಕಡೆ ಆಗೊಮ್ಮೆ-ಈಗೊಮ್ಮೆ ಮಳೆಯಾಗುವುದು ಬಿಟ್ಟರೆ ಪ್ರತಿ ವರ್ಷದ ಅಬ್ಬರದ ನಳೆ ಕಣ್ಮರೆಯಾಗಿದ್ದು, ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮತ್ತು ಬಿಸಿಲಿನ ವಾತಾವರಣ ಮುಂದುವರಿದಿದೆ.
ಈ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ
ಇಂದು (ಜುಲೈ 16) ಕೂಡ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಿದ್ದು, ಕರಾವಳಿಯ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಮಾತ್ರ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿಯ ಮೂರು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ
ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ, ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವೆಡೆ 30–40 ಕಿ.ಮೀ. ವೇಗದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಮಳೆ ಇಲ್ಲ, ತಾಪಮಾನ ಏರಿಕೆ
ಮುಂದಿನ 24 ಗಂಟೆಗಳ ಕಾಲ ಬೆಂಗಳೂರಿನಲ್ಲಿ ಮುಖ್ಯವಾಗಿ ಶುಭ್ರ ಆಕಾಶವೇ ಇರಲಿದೆ. ಕೆಲವೆಡೆ ಗಂಟೆಗೆ 30–40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 3ರಿಂದ 5 ಡಿಗ್ರಿ ಸೆಲ್ಸಿಯಸ್ ಹೆಚ್ಚು ದಾಖಲಾಗುವ ಸಾಧ್ಯತೆ ಇದೆ. ನಗರದಲ್ಲಿ ಕನಿಷ್ಠ 20°C ಹಾಗೂ ಗರಿಷ್ಠ 33°C ಉಷ್ಣಾಂಶ ದಾಖಲಾಗುವ ನಿರೀಕ್ಷೆಯಿದೆ.
ಇದನ್ನು ಓದಿ : ಕರ್ನಾಟಕದಲ್ಲಿ ಮುಂದಿನ 3 ದಿನ ಭಾರೀ ಮಳೆ ಎಚ್ಚರಿಕೆ.!

ಮುಂದಿನ ಐದು ದಿನ ಬಿಸಿಲಿನ ವಾತಾವರಣ
ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ ಐದು ದಿನಗಳವರೆಗೆ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 5 ಡಿಗ್ರಿ ಸೆಲ್ಸಿಯಸ್ವರೆಗೆ ಹೆಚ್ಚಾಗುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲೂ ಬಿಸಿ ವಾತಾವರಣ ಮುಂದುವರಿಯಲಿದೆ.
ಇಂದು ಎಲ್ಲೆಲ್ಲಿ ಮಳೆ?
- ಕರಾವಳಿ: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ.
- ಉತ್ತರ ಒಳನಾಡು: ಬೆಳಗಾವಿ, ಧಾರವಾಡ, ಗದಗ ಮತ್ತು ಬೀದರ್ ಜಿಲ್ಲೆಗಳಲ್ಲಿ ಹಗುರ ಮಳೆಯ ಸಾಧ್ಯತೆ.
- ದಕ್ಷಿಣ ಒಳನಾಡು: ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಲಘು ಮಳೆ.

ಬಲವಾದ ಗಾಳಿ ಬೀಸುವ ಜಿಲ್ಲೆಗಳು
ಬಳ್ಳಾರಿ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ.
ಜುಲೈ 17ರ ಮುನ್ಸೂಚನೆ
ಜುಲೈ 17ರಂದು ಕೂಡ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ ಹಾಗೂ ಗದಗ ಜಿಲ್ಲೆಗಳಲ್ಲೂ ತುಂತುರು ಮಳೆಯ ನಿರೀಕ್ಷೆ ಇದೆ. ಆದರೆ ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ, ಯಾದಗಿರಿ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.

ಹವಾಮಾನ ಇಲಾಖೆಯು ಸಾರ್ವಜನಿಕರು ಬಿಸಿಲಿನ ತೀವ್ರತೆಯಿಂದ ಎಚ್ಚರಿಕೆಯಿಂದ ಇರಬೇಕು ಹಾಗೂ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಸೂಚಿಸಿದೆ.
ಇದನ್ನು ನೋಡಿ : ನನಗೆ ಜೈಲಿಗೆ ಹೋಗೊದು ಏನು ಹೋಸದಲ್ಲ..!- HDK ಹೇಳಿಕೆಗೆ ಕೌಂಟರ್ ಕೊಟ್ಟ DKS




