Rain Alert : ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು, ಕಳೆದ ಕೆಲವು ದಿನಗಳಿಗೆ ಹೋಲಿಸಿದರೆ ಮಳೆಯ ಪ್ರಮಾಣ ಕಡಿಮೆಯಾಗಿದೆ.

ರಾಜ್ಯದಲ್ಲಿ ಮುಂಗಾರು ಚುರುಕು ದುರ್ಬಲಗೊಂಡಿದ್ದು, ಕಳೆದ ಕೆಲವು ದಿನಗಳಿಗೆ ಹೋಲಿಸಿದರೆ ಮಳೆಯ ಪ್ರಮಾಣ ಇಳಿಕೆಯಾಗಿದೆ. ಆದರೂ ಕರಾವಳಿ ಹಾಗೂ ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ರಾಜ್ಯದ ಕೆಲವೆಡೆ ಮಳೆ
ಹವಾಮಾನ ಇಲಾಖೆ ಪ್ರಕಾರ, ಜುಲೈ 14 ಮತ್ತು 15ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಇದೇ ವೇಳೆ, ಈ ಭಾಗಗಳಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಉತ್ತರ ಒಳನಾಡಿನಲ್ಲೂ ಗಾಳಿ ಎಚ್ಚರಿಕೆ
ಉತ್ತರ ಒಳನಾಡಿನ ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳ ಒಂದೆರಡು ಕಡೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆ ಇದ್ದರೂ, ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.
ಇದನ್ನು ಓದಿ : ಮುಂಗಾರು ಆರ್ಭಟ – ಮುಂದಿನ 3 ದಿನ ಈ ಜಿಲ್ಲೆಗಳಲ್ಲಿ ಭಾರೀ ಮಳೆ

ದಕ್ಷಿಣ ಒಳನಾಡಿನಲ್ಲೂ ಮಳೆಯ ಮುನ್ಸೂಚನೆ
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಬಲವಾದ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.
Rain Alert – ಜುಲೈ 15ಕ್ಕೂ ಮಳೆ ಮುಂದುವರಿಕೆ
ಜುಲೈ 15ರಂದು ಕೂಡ ಕರಾವಳಿ ಭಾಗದ ಮೂರು ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲೂ ಒಂದೆರಡು ಕಡೆ ಮಳೆಯಾಗುವ ನಿರೀಕ್ಷೆಯಿದೆ. ಉಳಿದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ರೈತರು, ವಾಹನ ಸವಾರರು ಹಾಗೂ ಹೊರಾಂಗಣ ಕೆಲಸ ಮಾಡುವವರು ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.
ಇದನ್ನು ನೋಡಿ : DKS – HDK ಬದ್ಧ ರಾಜಕೀಯ ವೈರಿಗಳು – ಹೀಗ್ಯಾಕಂದ್ರು ಶಾಸಕ SHIVALINGE GOWDA ?





