
Rain Alert : ಸೆ.11-12ರಂದು ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ: ಹವಾಮಾನ ಇಲಾಖೆ
ರಾಜ್ಯದಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿದ್ದು, ಕೆಲವೇ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ. ಈ ನಡುವೆ ಸೆಪ್ಟೆಂಬರ್ 11 ಮತ್ತು 12ರಂದು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸೆ.11ರಂದು ಎಲ್ಲೆಲ್ಲಿ ಮಳೆ?
ಸೆಪ್ಟೆಂಬರ್ 11ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಗದಗ, ಕೊಪ್ಪಳ, ಧಾರವಾಡ ಹಾಗೂ ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಶಿವಮೊಗ್ಗ, ಚಿಕ್ಕಮಗಳೂರು, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲೂ ಅಲ್ಲಲ್ಲಿ ಹಗುರ ಮಳೆಯಾಗಬಹುದು.

READ THIS : ರಾಜ್ಯದಲ್ಲಿ ಕೈ ಕೊಟ್ಟ ಮಳೆರಾಯ – ತಾಪಮಾನ ಏರಿಕೆ!
ಸೆ.12ರಂದು ಈ ಜಿಲ್ಲೆಗಳಲ್ಲಿ ಮಳೆ
ಸೆಪ್ಟೆಂಬರ್ 12ರಂದು ಕೂಡ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗಬಹುದು.
ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಕೆಲವೆಡೆ ಮಾತ್ರ ಮಳೆ ದಾಖಲು
ರಾಜ್ಯದಲ್ಲಿ ಮುಂಗಾರು ಚಟುವಟಿಕೆ ದುರ್ಬಲವಾಗಿದ್ದು, ಗುರುವಾರ ಸಂಜೆಗೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ಕೆಲವೇ ಪ್ರದೇಶಗಳಲ್ಲಿ ಮಳೆಯಾಗಿದೆ. ಪ್ರಮುಖವಾಗಿ:
- ಕಳಸ, ಚಿಕ್ಕಮಗಳೂರು: 3 ಸೆಂ.ಮೀ
- ನೀಲ್ಕುಂದ, ಉತ್ತರ ಕನ್ನಡ: 2 ಸೆಂ.ಮೀ
- ಹುಬ್ಬಳ್ಳಿ, ಧಾರವಾಡ: 2 ಸೆಂ.ಮೀ
- ಸಂತಹಳ್ಳಿ, ಕೊಡಗು: 2 ಸೆಂ.ಮೀ
- ಬೆಳ್ತಂಗಡಿ, ದಕ್ಷಿಣ ಕನ್ನಡ: 1 ಸೆಂ.ಮೀ
- ಸಿದ್ದಾಪುರ, ಉಡುಪಿ: 1 ಸೆಂ.ಮೀ
- ಅಗ್ರಹಾರ ಕೊಣಂದೂರು, ಶಿವಮೊಗ್ಗ: 1 ಸೆಂ.ಮೀ
- ಹುಂಚದಕಟ್ಟೆ, ಶಿವಮೊಗ್ಗ: 1 ಸೆಂ.ಮೀ
ಒಟ್ಟಾರೆ ರಾಜ್ಯದಲ್ಲಿ ಮಳೆ ಚಟುವಟಿಕೆ ದುರ್ಬಲವಾಗಿದ್ದರೂ, ಮುಂದಿನ ಎರಡು ದಿನಗಳಲ್ಲಿ ಕರಾವಳಿ ಹಾಗೂ ಒಳನಾಡಿನ ಆಯ್ದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.

MUST WATCH : ಪಾವಗಡದಲ್ಲಿ ನಕಲಿ ನಕ್ಸಲ್ ಪತ್ರ.? – ಪೊಲೀಸರಿಂದ ಶರುವಾಯ್ತು ತನಿಖೆ.




