Rain Alert : ರಾಜ್ಯದಲ್ಲಿ ಇಂದಿನ ಹವಾಮಾನ ಹೇಗಿರಲಿದೆ? ಯಾವ ಜಿಲ್ಲೆಯಲ್ಲಿ ಭಾರಿ ಮಳೆ

Rain Alert : ರಾಜ್ಯದಲ್ಲಿ ಇಂದು ಮಳೆಯ ಅಬ್ಬರ ಮುಂದುವರಿಯಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಕರಾವಳಿ ಭಾಗದಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.
ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆ
ಉತ್ತರ ಒಳನಾಡು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಚದುರಿದ ಹಾಗೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಬೀದರ್, ವಿಜಯಪುರ, ರಾಯಚೂರು ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ನಿರೀಕ್ಷೆಯಿದೆ.
ಇದನ್ನು ಓದಿ : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ಈ ಜಿಲ್ಲೆಗಳಲ್ಲಿ ಮಳೆ!

ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆ
ದಕ್ಷಿಣ ಒಳನಾಡಿನಲ್ಲೂ ಮಳೆಯ ವಾತಾವರಣ ಮುಂದುವರಿಯಲಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.
ಈ ಜಿಲ್ಲೆಗಳಲ್ಲಿ ಭಾರೀ ಮಳೆ
ಇದಲ್ಲದೆ, ಬೆಳಗಾವಿ, ಧಾರವಾಡ, ಯಾದಗಿರಿ, ರಾಯಚೂರು ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದರೆ, ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕೊಪ್ಪಳ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯೊಂದಿಗೆ ಬಿರುಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.

ಹವಾಮಾನ ಇಲಾಖೆಯ ಪ್ರಕಾರ, ಜುಲೈ 29ರಿಂದ ಆಗಸ್ಟ್ 1ರವರೆಗೆ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ವಾತಾವರಣ ಮುಂದುವರಿಯಲಿದೆ. ಕರಾವಳಿ ಜಿಲ್ಲೆಗಳಲ್ಲಿ ಬಲವಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದ್ದು, ಒಳನಾಡಿನ ಬಹುತೇಕ ಜಿಲ್ಲೆಗಳಲ್ಲೂ ಸಾಧಾರಣ ಮಳೆಯ ನಿರೀಕ್ಷೆಯಿದೆ.
ಇದನ್ನು ನೋಡಿ : KPSC ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ – ತುಮಕೂರಲ್ಲಿ ಸರ್ಕಾರದ ವಿರುದ್ಧ ABVP PROTEST




