Rain Alert : ನಾಳೆ ಈ ಜಿಲ್ಲೆಗಳಿಗೆ ಯೊಲ್ಲೋ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ನೈರುತ್ಯ ಮುಂಗಾರು ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ನಿರಂತರ ವರ್ಷಧಾರೆಯಾಗುತ್ತಿದ್ದು, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆಯಾದ ಪರಿಣಾಮ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ.
ನಾಳೆ ಯೆಲ್ಲೋ ಅಲರ್ಟ್ ಘೋಷಣೆ
ರಾಜ್ಯದ ಬಹುತೇಕ ಜಿಲ್ಲೆಗಳಿಗೆ ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಹಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಜಿಲ್ಲೆಗಳಲ್ಲಿ ಭಾರೀ ಮಳೆ
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯ ನಿರೀಕ್ಷೆಯಿದೆ. ಮಲೆನಾಡು ಭಾಗದ ಶಿವಮೊಗ್ಗ ಜಿಲ್ಲೆಯಲ್ಲಿ ಗಂಟೆಗೆ 40 ರಿಂದ 50 ಕಿ.ಮೀ. ವೇಗದ ಗಾಳಿ ಸಹಿತ ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದೆ.
ಮಳೆ ಸಾಧ್ಯತೆಯಿರುವ ಜಿಲ್ಲೆಗಳು
ಇದಲ್ಲದೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನು ಓದಿ : ಕರಾವಳಿ, ಮಲೆನಾಡು ಸೇರಿ ರಾಜ್ಯದ ಹಲವೆಡೆ ಮುಂದಿನ 7 ದಿನ ಮಳೆ ನಿರೀಕ್ಷೆ!
ಹೊನ್ನಾವರದಲ್ಲಿ ಅತಿ ಹೆಚ್ಚು ಮಳೆ ದಾಖಲು
ಕಳೆದ 24 ಗಂಟೆಗಳ ಅವಧಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ನಗರಬಸ್ತಿಕೇರಿ ಪ್ರದೇಶದಲ್ಲಿ 121 ಮಿ.ಮೀ. ಮಳೆ ದಾಖಲಾಗಿದ್ದು, ರಾಜ್ಯದಲ್ಲೇ ಅತಿ ಹೆಚ್ಚು ಮಳೆಯಾದ ಸ್ಥಳವಾಗಿದೆ.
ಇನ್ನು:
- ಉಡುಪಿ ಜಿಲ್ಲೆಯ ಕಾರ್ಕಳದ ನೀರೆಯಲ್ಲಿ 109.5 ಮಿ.ಮೀ.
- ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಆಗುಂಬೆಯಲ್ಲಿ 91 ಮಿ.ಮೀ.
- ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಂಜಿಕಲ್ಲುವಿನಲ್ಲಿ 78.5 ಮಿ.ಮೀ.
- ಬೀದರ್ ದಕ್ಷಿಣದಲ್ಲಿ 62.2 ಮಿ.ಮೀ.
- ಶೃಂಗೇರಿ ಬೇಗಾರು ಹಾಗೂ ಯಾದಗಿರಿಯ ಜೈಗ್ರಾಮ್ನಲ್ಲಿ ತಲಾ 57 ಮಿ.ಮೀ.
ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮುಂಗಾರು ಚುರುಕು
ಮುಂಗಾರು ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಕರಾವಳಿ, ಮಲೆನಾಡು ಹಾಗೂ ನದಿ ತೀರ ಪ್ರದೇಶಗಳ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಇದನ್ನು ನೋಡಿ : ಈ ಬಾರಿ ಯುವ ಶಾಸಕರಿಗೆ ಹೆಚ್ಚು ಪ್ರಾತಿನಿಧ್ಯ ಸಂಪುಟ ವಿಸ್ತರಣೆ ಬಗ್ಗೆ ಪರಂ ಗುಡ್ ನ್ಯೂಸ್




