ಕರಾವಳಿಯಲ್ಲಿ Orange Alert ಘೋಷಣೆ.

ರಾಜ್ಯದ ಹಲವೆಡೆ ಮಳೆ ಕೊರತೆ ಮುಂದುವರಿದಿದ್ದರೂ, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂದಿನ ಕೆಲ ದಿನಗಳು ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ರಾಜ್ಯದ ಹಲವೆಡೆ ಮಳೆ ಕೊರತೆ
ರಾಜ್ಯದ ಕರಾವಳಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕಲ್ಯಾಣ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇನ್ನೂ ಮಳೆ ಕೊರತೆ ಎದುರಾಗಿದೆ.
ಜೂನ್ ತಿಂಗಳ ಕೊನೆಯ ಎರಡು ವಾರಗಳಲ್ಲಿ ಒಣಹವೆ ಮುಂದುವರಿದಿದ್ದರೂ, ಇದೀಗ ಮಳೆ ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿವೆ.

ಆರೆಂಜ್ ಅಲರ್ಟ್ ಘೋಷಣೆ
ಜುಲೈ 3ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ (Orange Alert) ಘೋಷಿಸಲಾಗಿದೆ.
ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಇದನ್ನು ಓದಿ : Karnataka Weather : ಜು.3ರಂದು ದಕ್ಷಿಣ ಕನ್ನಡ ಶಾಲಾ-ಕಾಲೇಜುಗಳಿಗೆ ರಜೆ..!!

ಮಳೆ ಸಾಧ್ಯತೆ ಇರುವ ಜಿಲ್ಲೆಗಳು
- ಆರೆಂಜ್ ಅಲರ್ಟ್: ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ
- ಯೆಲ್ಲೋ ಅಲರ್ಟ್: ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ
- ಹಗುರ ಮಳೆ: ಬಾಗಲಕೋಟೆ, ಬೀದರ್, ಹಾವೇರಿ, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ
- ದಕ್ಷಿಣ ಒಳನಾಡು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಹಾಗೂ ವಿಜಯನಗರ
ಕೆಲವೆಡೆ ಅತಿಭಾರೀ ಮಳೆ
ದಕ್ಷಿಣ ಒಳನಾಡಿನಲ್ಲಿ ಜುಲೈ 4ರವರೆಗೆ ಒಂದೆರಡು ಕಡೆಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಜುಲೈ 5ರಿಂದ 8ರವರೆಗೆ ಮಳೆಯ ತೀವ್ರತೆ ಇನ್ನಷ್ಟು ಹೆಚ್ಚಾಗಲಿದ್ದು, ಕೆಲವೆಡೆ ಅತಿಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ
ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಕರಾವಳಿ ಭಾಗದಲ್ಲಿ ಜುಲೈ 8ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಮೀನುಗಾರರು, ಪ್ರವಾಸಿಗರು ಹಾಗೂ ಸಾರ್ವಜನಿಕರು ಹವಾಮಾನ ಇಲಾಖೆಯ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.
ಇದನ್ನು ನೋಡಿ : ಸಚಿವರ ಎದುರೇ ಕೈ-BJP ಶಾಸಕರ ಕಿತ್ತಾಟ – ಎತ್ತಿನಹೊಳೆ ಯೋಜನೆ ವಿಚಾರಕ್ಕೆ ವಾಗ್ವಾದ




