Haveri ಯಲ್ಲಿ ಮೋಡ ಬಿತ್ತನೆಗೆ ಚಾಲನೆ – ಅಗತ್ಯವಿದ್ದರೆ ರಾಜ್ಯದೆಲ್ಲೆಡೆ ವಿಸ್ತರಿಸಲು ಚಿಂತನೆ: ಸತೀಶ್ ಜಾರಕಿಹೊಳಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ಕೊಂಚ ನಿರಾಳತೆ ಸಿಕ್ಕಿದೆ. Haveri ಜಿಲ್ಲೆಯಲ್ಲಿ ಮೋಡ ಬಿತ್ತನೆ ಕಾರ್ಯಕ್ಕೆ ಅಧಿಕೃತ ಚಾಲನೆ ನೀಡಲಾಗಿದ್ದು, ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಚಾಲನೆ ನೀಡಿದರು.
ಕೃತಕ ಮಳೆ ಸುರಿಸುವ ಪ್ರಯತ್ನ
ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯ ಕೊರತೆ ತೀವ್ರವಾಗಿರುವ ಹಿನ್ನೆಲೆಯಲ್ಲಿ ಮೋಡ ಬಿತ್ತನೆ ಮೂಲಕ ಕೃತಕ ಮಳೆ ಸುರಿಸುವ ಪ್ರಯತ್ನಕ್ಕೆ ಚಾಲನೆ ನೀಡಲಾಗಿದೆ. ಸೂಕ್ತ ಮೋಡಗಳಿರುವ ಸಂದರ್ಭದಲ್ಲೇ ಈ ಕಾರ್ಯಾಚರಣೆ ನಡೆಸಲಾಗುತ್ತದೆ.

ಇದನ್ನು ಓದಿ : ರಾಜ್ಯದಲ್ಲಿ ಕೈಕೊಟ್ಟ ಮಳೆರಾಯ – ಶೇ.21ರಷ್ಟು ಮಳೆ ಕೊರತೆ
ವಿಜ್ಞಾನಿಗಳ ಸಲಹೆಗೆ ಆದ್ಯತೆ ನೀಡಿ
ಈ ವೇಳೆ ಮಾತನಾಡಿದ ಮಾಜಿ ಸಚಿವ ಹೆಚ್.ಕೆ. ಪಾಟೀಲ್, ಉತ್ತರ ಕರ್ನಾಟಕದಲ್ಲಿ ಮಳೆಯ ಅಭಾವ ಗಂಭೀರ ಸಮಸ್ಯೆಯಾಗಿದೆ. ಅಧಿಕಾರಿಗಳ ಅಭಿಪ್ರಾಯಕ್ಕಿಂತ ವಿಜ್ಞಾ ನಿಗಳ ಸಲಹೆಗೆ ಆದ್ಯತೆ ನೀಡಿ ರಾಜ್ಯ ಸರ್ಕಾರ ಕೂಡಲೇ ಮೋಡ ಬಿತ್ತನೆ ಕಾರ್ಯಕ್ರಮವನ್ನು ವಿಸ್ತರಿಸಬೇಕು ಎಂದು ಆಗ್ರಹಿಸಿದರು.
Haveri ಯಲ್ಲಿ ಮೋಡ ಬಿತ್ತನೆ – ರಾಜ್ಯದೆಲ್ಲೆಡೆ ವಿಸ್ತರಿಸಲು ಚಿಂತನೆ
ಇನ್ನೊಂದೆಡೆ ಸಚಿವ ಸತೀಶ್ ಜಾರಕಿಹೊಳಿ, ಹಾವೇರಿಯಲ್ಲಿ ಮೋಡ ಬಿತ್ತನೆಗೆ ಚಾಲನೆ ನೀಡಲಾಗಿದೆ. ಇದರ ಫಲಿತಾಂಶವನ್ನು ಪರಿಶೀಲಿಸಿ ರಾಜ್ಯದ ಇತರ ಭಾಗಗಳಿಗೂ ಸರ್ಕಾರಿ ಕಾರ್ಯಕ್ರಮವಾಗಿ ವಿಸ್ತರಿಸುವ ಕುರಿತು ಮುಖ್ಯಮಂತ್ರಿ ಗಮನಕ್ಕೆ ತರಲಾಗುವುದು ಎಂದರು.

ಇದನ್ನು ನೋಡಿ : ಹೆಂಡ್ತಿ, ಅತ್ತಿಗೆಯನ್ನ ಕೊಂದ ಕಿರಾತಕ – ಕತ್ತು ಕೊಯ್ದು ಬರ್ಬರ ಹತ್ಯೆ ಮಾಡಿದ ಗಂಡ




