ಕೈ ಕೊಟ್ಟ ಮಳೆ – ಸಾಲಬಾಧೆ ತಾಳಲಾರದೇ ಯುವ ರೈತ Suicide

ಸಾಲದ ಹೊರೆ ಮತ್ತು ಮಳೆ ಕೊರತೆಯಿಂದ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ಕರೂರು ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ರೈತನನ್ನು ಕರೂರು ಗ್ರಾಮದ ಶಿವಕುಮಾರ್ (30) ಎಂದು ಗುರುತಿಸಲಾಗಿದೆ. ಶಿವಕುಮಾರ್ ತಮ್ಮ ಜಮೀನಿನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನು ಓದಿ : NEET ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ತಮಿಳುನಾಡಿನಲ್ಲಿ ವಿದ್ಯಾರ್ಥಿನಿ Suicide..!

ಆಗಿದ್ದೇನು..?
ಶಿವಕುಮಾರ್ ಸುಮಾರು 1.56 ಎಕರೆ ಜಮೀನಿನಲ್ಲಿ ಕೃಷಿ ಮಾಡುತ್ತಿದ್ದರು. ಕೃಷಿಗಾಗಿ ಬ್ಯಾಂಕ್ ಹಾಗೂ ಖಾಸಗಿ ವ್ಯಕ್ತಿಗಳಿಂದ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದರು. ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ, ಜಮೀನಿನಲ್ಲಿ ಬಿತ್ತನೆ ಕಾರ್ಯವನ್ನೂ ಆರಂಭಿಸಲು ಸಾಧ್ಯವಾಗಿರಲಿಲ್ಲ.
ಬೆಳೆ ಇಲ್ಲ, ಆದಾಯ ಇಲ್ಲ ಎಂಬ ಪರಿಸ್ಥಿತಿಯಲ್ಲಿ ಸಾಲದ ಹೊರೆ ದಿನದಿಂದ ದಿನಕ್ಕೆ ಹೆಚ್ಚಾಗಿತ್ತು. ಒಂದೆಡೆ ಬಿತ್ತನೆ ಮಾಡಲು ಸಾಧ್ಯವಾಗದೆ, ಮತ್ತೊಂದೆಡೆ ಸಾಲವನ್ನು ತೀರಿಸಲಾಗದೆ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ರೈತ ಶಿವಕುಮಾರ್, ಕೊನೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Suicide – ಪ್ರಕರಣ ದಾಖಲು
ಇನ್ನು ಘಟನೆ ಸಂಬಂಧ ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಇದನ್ನು ನೋಡಿ : ಕ್ರಷರ್ ಲಾರಿಗಳಿಂದ ಜನರಿಗೆ ಗುಂಡಿ ಭಾಗ್ಯ – KESARAMADU ಜನರ ಗೋಳು ಕೇಳೊರು ಯಾರು?




