
Bengaluru : ಮಳೆ ಕೈ ಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲಿ ಬೇಸಿಗೆಯಂತಹ ಬಿಸಿಲು
ರಾಜ್ಯದಲ್ಲಿ ಮಳೆ ಕೈಕೊಟ್ಟ ಬೆನ್ನಲ್ಲೇ ಬಿಸಿಲಿನ ತಾಪ ಹೆಚ್ಚಾಗುತ್ತಿದೆ. ಸೆಪ್ಟೆಂಬರ್ ತಿಂಗಳಲ್ಲೇ ಬೇಸಿಗೆಯ ಅನುಭವವಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ತಾಪಮಾನ ಏರಿಕೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಬಿಸಿಲಿನ ತೀವ್ರತೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ ಇದೆ.
ಬಿಸಿಲಿನ ತೀವ್ರತೆ ಹೆಚ್ಚಲು ಕಾರಣವೇನು?
ರಾಜ್ಯದಲ್ಲಿ ಮುಂಗಾರು ಮಳೆ ದುರ್ಬಲವಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗುತ್ತಿದೆ. ಎಲ್ ನಿನೋ ಪರಿಣಾಮದಿಂದ ಮಳೆ ಕೊರತೆ ಉಂಟಾಗಿದೆ ಎನ್ನಲಾಗಿದ್ದು, ಮಳೆ, ಮೋಡ ಹಾಗೂ ಭೂಮಿಯ ತೇವಾಂಶ ಕಡಿಮೆಯಾಗಿರುವುದು ಬಿಸಿಲಿನ ತೀವ್ರತೆ ಹೆಚ್ಚಲು ಕಾರಣವಾಗುತ್ತಿದೆ ಎಂದು ಹವಾಮಾನ ತಜ್ಞ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ.
READ THIS : ಕೈ ಕೊಟ್ಟ ಮುಂಗಾರು – ಅನ್ನ, ನೀರಿಗೆ ಸಂಕಷ್ಟ: ಕೋಡಿಮಠಶ್ರೀ ಭವಿಷ!

ಕಲಬುರಗಿಯಲ್ಲಿ ಹಚ್ಚಾದ ಉಷ್ಣಾಂಶ
ಕಲಬುರಗಿಯಲ್ಲಿ 36 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದರೆ, ಬೆಂಗಳೂರಿನಲ್ಲಿ 32 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ ಸುಮಾರು 4ರಿಂದ 5 ಡಿಗ್ರಿವರೆಗೆ ತಾಪಮಾನ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
Bengaluru – ತಾಪಮಾನ ಏರಿಕೆ
ಮುಂದಿನ ಒಂದು ವಾರ ಬೆಂಗಳೂರಿನಲ್ಲಿ ತಾಪಮಾನ 34 ಡಿಗ್ರಿ ಸೆಲ್ಸಿಯಸ್ವರೆಗೆ ಏರಿಕೆಯಾಗುವ ಸಾಧ್ಯತೆ ಇದೆ. ಇನ್ನು ಕಲಬುರಗಿಯಲ್ಲಿ 36ರಿಂದ 37 ಡಿಗ್ರಿ ಸೆಲ್ಸಿಯಸ್ವರೆಗೆ ತಾಪಮಾನ ತಲುಪುವ ನಿರೀಕ್ಷೆ ಇದೆ ಎಂದು ತಿಳಿಸಲಾಗಿದೆ.

ಭೂಮಿಯ ತೇವಾಂಶ ಕುಸಿತ – ತಾಪಮಾನ ಏರಿಕೆ! Bengaluru
ಸಾಮಾನ್ಯವಾಗಿ ಬೇಸಿಗೆಯಲ್ಲಿ ಅನುಭವವಾಗುವಂತಹ ಬಿಸಿಲಿನ ವಾತಾವರಣ ಸೆಪ್ಟೆಂಬರ್ನಲ್ಲೇ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಮಳೆಯ ಕೊರತೆ, ಮೋಡಗಳ ಪ್ರಮಾಣ ಕಡಿಮೆಯಾಗಿರುವುದು ಹಾಗೂ ಭೂಮಿಯ ತೇವಾಂಶ ಕುಸಿದಿರುವ ಹಿನ್ನೆಲೆಯಲ್ಲಿ ಭೂಮಿಯ ತೇವಾಂಶ ಕುಸಿಗುತ್ತಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
MUST WATCH : SIDDARAMAIAH ಅಹಿಂದ ಸಮಾವೇಶ – ನನ್ನನ್ನ ಕಡೆಗಣಿಸುತ್ತಿದ್ದೀರಿ ಅನ್ನೋ ಸಂದೇಶ





