ಮಧುಗಿರಿಯಲ್ಲಿ Rajendra Rajanna ರಿಂದ 73 ಕೋಟಿ ವೆಚ್ಚದ ಕಾಮಗಾರಿಗೆ ಗುದ್ದಲಿ ಪೂಜೆ

ಮಧುಗಿರಿ ತಾಲ್ಲೂಕಿನಲ್ಲಿ ಕೌಶಲ್ಯಾಭಿವೃದ್ಧಿಗೆ ಮತ್ತೊಂದು ಮಹತ್ವದ ಹೆಜ್ಜೆ ಇಡಲಾಗಿದೆ. ಸುಮಾರು ₹73 ಕೋಟಿ 75 ಲಕ್ಷ ವೆಚ್ಚದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (GTTC) ಕಾಲೇಜು ಕಟ್ಟಡ ನಿರ್ಮಾಣಕ್ಕೆ ಇಂದು MLC ರಾಜೇಂದ್ರ ರಾಜಣ್ಣ ಭೂಮಿ ಪೂಜೆ ನೆರವೇರಿಸಿದರು.
ಕಾಮಗಾರಿಗೆ ಮಧುಗಿರಿಯಲ್ಲಿ ಚಾಲನೆ
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಮಂಜೂರಾದ ಸುಮಾರು ₹73.75 ಕೋಟಿ ವೆಚ್ಚದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (GTTC) ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ ಮಧುಗಿರಿಯಲ್ಲಿ ಚಾಲನೆ ನೀಡಲಾಯಿತು.
ಇದನ್ನು ಓದಿ : ದಿಲ್ಲಿಯಲ್ಲಿ ಅಮಿತ್ ಶಾ ಭೇಟಿಯಾದ ರಾಜೇಂದ್ರ ರಾಜಣ್ಣ

ಉದ್ಯೋಗಾವಕಾಶಗಳಿಗೂ ಉತ್ತೇಜನ
ಶಾಸಕ ರಾಜೇಂದ್ರ ರಾಜಣ್ಣ ಅವರು ಉಪವಿಭಾಗಾಧಿಕಾರಿ ಗೊಟೂರು ಶಿವಪ್ಪ ಹಾಗೂ ಸ್ಥಳೀಯ ಮುಖಂಡರೊಂದಿಗೆ ಭೂಮಿ ಪೂಜೆ ನೆರವೇರಿಸಿ, ಕಾಮಗಾರಿಗೆ ಅಧಿಕೃತ ಚಾಲನೆ ನೀಡಿದರು. ಈ ಕಾಲೇಜು ನಿರ್ಮಾಣದಿಂದ ಮಧುಗಿರಿ ಹಾಗೂ ಸುತ್ತಮುತ್ತಲಿನ ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣ ಮತ್ತು ಕೌಶಲ್ಯ ತರಬೇತಿ ಪಡೆಯಲು ಉತ್ತಮ ಅವಕಾಶ ದೊರೆಯಲಿದ್ದು, ಉದ್ಯೋಗಾವಕಾಶಗಳಿಗೂ ಉತ್ತೇಜನ ಸಿಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ಕಾರ್ಯಕ್ರಮದಲ್ಲಿ ತಾಲ್ಲೂಕು ಮಟ್ಟದ ಹಿರಿಯ ಅಧಿಕಾರಿಗಳು, ವಿವಿಧ ಜನಪ್ರತಿನಿಧಿಗಳು, ಗ್ರಾಮ ಪಂಚಾಯಿತಿ ಸದಸ್ಯರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಇದನ್ನು ನೋಡಿ : DRUG ADDICT ಆಗಿದ್ದ ಪ್ರಿಯಕರನಿಂದಲೇ ಕೊ*ಯಾದಳಾ ಯುವತಿ? – ಮೃತಳ ತಾಯಿಯ ಗೋಳಾಟ ಹೇಗಿತ್ತು?




