ಅಸಮಾಧಾನಗೊಂಡಿದ್ದೇನೆ, ಕೊಟ್ಟ ಮಾತು ತಪ್ಪಿದ್ದಕ್ಕೆ ಮಂತ್ರಿ ಸ್ಥಾನಕ್ಕೆ ರಾಜೀನಾಮೆ – ಡಿಕೆಶಿಗೆ Ramalinga Reddy ಶಾಕ್.

ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ವಹಿಸಿಕೊಂಡ ಕೇವಲ ಎರಡೇ ದಿನಕ್ಕೆ ಸರ್ಕಾರಕ್ಕೆ ಬಂಡಾಯದ ಬಿಸಿ ತಟ್ಟಿದೆ. ತಮಗೆ ಇಷ್ಟವಿಲ್ಲದ ಜಲಸಂಪನ್ಮೂಲ ಖಾತೆ ಹಂಚಿಕೆ ಮಾಡಿರುವುದಕ್ಕೆ ತೀವ್ರ ಆಕ್ರೋಶ ಹೊರಹಾಕಿರುವ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರು ಕೋರಮಂಗಲದ ತಮ್ಮ ಕಚೇರಿಯಲ್ಲಿ ಕಾರ್ಯಕರ್ತರ ಮುಂದುಗಡೆ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಘೋಷಿಸಿದ್ದಾರೆ.
ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡುವುದಾಗಿ ಭರವಸೆ
ರಾಜೀನಾಮೆ ನಿರ್ಧಾರದ ಕುರಿತು ಮಾತನಾಡಿದ ಅವರು, ಖಾತೆ ಹಂಚಿಕೆ ಮಾತ್ರವಲ್ಲದೆ ಹಿಂದೆ ನೀಡಲಾಗಿದ್ದ ಭರವಸೆ ಈಡೇರದಿರುವುದೂ ತಮ್ಮ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಹೇಳಿದ್ದಾರೆ. 2023ರಲ್ಲಿ ಸಚಿವ ಸಂಪುಟ ರಚನೆಯ ವೇಳೆ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡುವುದಾಗಿ ಭರವಸೆ ನೀಡಲಾಗಿತ್ತು. ಆದರೆ ನಂತರ ಸಾರಿಗೆ ಖಾತೆ ನೀಡಲಾಯಿತು. ಮುಂದಿನ ದಿನಗಳಲ್ಲಿ ಅವಕಾಶ ಸಿಕ್ಕರೆ ಬೆಂಗಳೂರು ನಗರಾಭಿವೃದ್ಧಿ ಇಲಾಖೆಯನ್ನೇ ನೀಡಲಾಗುವುದು ಎಂದು ಮುಖ್ಯಮಂತ್ರಿ D. K. Shivakumar ಭರವಸೆ ನೀಡಿದ್ದರು ಎಂದು ರೆಡ್ಡಿ ಆರೋಪಿಸಿದ್ದಾರೆ.
ಇದನ್ನು ಓದಿ : ಸಿಎಂ ಆದ ಮೊದಲ ದಿನವೇ ಸಚಿವರಿಗೆ DK Shivakumar ಖಡಕ್ ಎಚ್ಚರಿಕೆ..!!

ನನ್ನ ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲು ಸಾಧ್ಯವಿಲ್ಲ
ಈ ಬಾರಿ ಸಚಿವ ಸಂಪುಟದಲ್ಲಿ ಜಲಸಂಪನ್ಮೂಲ ಖಾತೆ ನೀಡಿರುವುದರಿಂದ ತಮ್ಮ ಮನಸ್ಸಿಗೆ ಒಪ್ಪುತ್ತಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. “ನಾನು ನನ್ನ ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲು ಸಾಧ್ಯವಿಲ್ಲ. ಆದ್ದರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ” ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿರುವುದಾಗಿ ತಿಳಿಸಲಾಗಿದೆ.
ನನ್ನ ನಿರ್ಧಾರ ಅಂತಿಮ – Ramalinga Reddy
ಕಚೇರಿಯಲ್ಲಿ ರಾಜೀನಾಮೆ ಪತ್ರ ಸಿದ್ಧಪಡಿಸುವ ವೇಳೆ ಕೆಲ ನಾಯಕರು ಅವರನ್ನು ಮನವೊಲಿಸಲು ಪ್ರಯತ್ನಿಸಿದರೂ, ತಮ್ಮ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ರೆಡ್ಡಿ ಕಟ್ಟುನಿಟ್ಟಾಗಿ ಹೇಳಿದ್ದಾರೆ. “53 ವರ್ಷಗಳಿಂದ ಪಕ್ಷದೊಂದಿಗೆ ಇದ್ದೇನೆ. ಒಂಬತ್ತು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ನಾನಾಗಿಯೇ ಯಾರ ಬಳಿಗೂ ಹೋಗಿ ರಾಜೀನಾಮೆ ಪತ್ರ ಕೊಡುವುದಿಲ್ಲ, ಇಲ್ಲಿಂದಲೇ ಘೋಷಿಸುತ್ತಿದ್ದೇನೆ” ಎಂದು ಖಡಕ್ ಆಗಿ ಹೇಳಿದ ಪ್ರಸಂಗ ನಡೆಯಿತು.

ಆರಂಭದಲ್ಲೇ ಆಪ್ತ ವಲಯದ ಅಸಮಾಧಾನ
ಹಿರಿಯ ನಾಯಕನೇ ಹೀಗೆ ಬಹಿರಂಗವಾಗಿ ಬಂಡಾಯದ ಬಾವುಟ ಹಾರಿಸಿರುವುದು ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ದೊಡ್ಡ ಹಿನ್ನಡೆಯಾಗಿದೆ. ಆರಂಭದಲ್ಲೇ ಆಪ್ತ ವಲಯದ ಈ ಅಸಮಾಧಾನ ಇತರ ಸಚಿವರಿಗೂ ಹರಡಿದರೆ ಸರ್ಕಾರದ ಮೇಲೆ ಹಿಡಿತ ಸಾಧಿಸುವುದು ಕಷ್ಟವಾಗಬಹುದು ಎಂಬ ಆತಂಕ ಹೈಕಮಾಂಡ್ ಅನ್ನು ಕಾಡಲಾರಂಭಿಸಿದೆ. ವರಿಷ್ಠರು ಸಚಿವ Ramalinga Reddy ಅವರನ್ನು ಹೇಗೆ ತಣ್ಣಗಾಗಿಸುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

ಇದನ್ನು ನೋಡಿ : ತುಮಕೂರಿನJDS ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ – ಯಾರ್ ಯಾರ್ ಆಯ್ಕೆ ಆದ್ರು?




