Ramanagara ತಾಲೂಕಿನ ಹುಣಸನಹಳ್ಳಿ ಬಳಿ ಬೈಕ್ನಲ್ಲಿ ತೆರಳುತ್ತಿದ್ದ 19 ವರ್ಷದ ಯುವಕನ ಮೇಲೆ ಬೃಹತ್ ಮರ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

Ramanagara ಜಿಲ್ಲೆಯಲ್ಲಿ ಭಾರೀ ಮಳೆಯ ನಡುವೆ ದುರ್ಘಟನೆಯೊಂದು ಸಂಭವಿಸಿದ್ದು, ಬೈಕ್ನಲ್ಲಿ ಕೆಲಸಕ್ಕೆ ತೆರಳುತ್ತಿದ್ದ 19 ವರ್ಷದ ಯುವಕನ ಮೇಲೆ ಬೃಹತ್ ಮರ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಘಟನೆ ರಾಮನಗರ ತಾಲೂಕಿನ ಹುಣಸನಹಳ್ಳಿ ಗ್ರಾಮದ ಸಮೀಪ ನಡೆದಿದೆ.
ಕೆಲಸಕ್ಕೆ ತೆರಳುತ್ತಿದ್ದ ವೇಳೆ ದುರಂತ
ಮೃತ ಯುವಕನನ್ನು ರಾಮನಗರ ತಾಲೂಕಿನ ನಾಗೋಹಳ್ಳಿ ಗ್ರಾಮದ ನಿವಾಸಿ ಪ್ರಶಾಂತ್ (19) ಎಂದು ಗುರುತಿಸಲಾಗಿದೆ. ಸೋಮವಾರ ಮುಂಜಾನೆ ಆತ ಕೆಲಸಕ್ಕೆಂದು ಬೈಕ್ನಲ್ಲಿ ರಾಮನಗರದತ್ತ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.
MUST READ : ಮಾರಕಾಸ್ತ್ರಗಳಿಂದ ಸಿಕ್ಕ ಸಿಕ್ಕ ಕಡೆ ಕೊಚ್ಚಿ ರೌಡಿಶೀಟರ್ನ ಕೊಲೆ
ರಾತ್ರಿ ಸುರಿದ ಭಾರೀ ಮಳೆಯಿಂದ ಬೃಹತ್ ಮರ ಬುಡ ಸಮೇತ ಕಿತ್ತು ಬಂದು ರಸ್ತೆ ಮೇಲೆ ಉರುಳಿದೆ. ಇದೇ ವೇಳೆ ಅಲ್ಲಿಂದ ಬೈಕ್ನಲ್ಲಿ ಸಾಗುತ್ತಿದ್ದ ಪ್ರಶಾಂತ್ ಮೇಲೆ ಮರ ಏಕಾಏಕಿ ಬಿದ್ದ ಪರಿಣಾಮ, ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಕುಟುಂಬದ ಆಕ್ರಂದನ
ಮಗನನ್ನು ಕಳೆದುಕೊಂಡ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ದುರಂತ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣ ಮಾಡಿದೆ.
ಘಟನಾ ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಘಟನೆ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
MUST WATCH :ತಿಪಟೂರಲ್ಲಿ SIR ಪ್ರಕ್ರಿಯೆ ಶುರು – ಆತಂಕ ಪಡಬೇಡಿ ಎಂದ ಆಯುಕ್ತರು | TIPTUR NEWS |




