ಬಿಡುಗಡೆಗೂ ಮುನ್ನವೇ ಬಾಕ್ಸ್ ಆಫೀಸ್ ಸೌಂಡ್ ಮಾಡಿದ Ramayana

ವಿಶ್ವ ಮಟ್ಟದಲ್ಲಿ ಭಾರೀ ನಿರೀಕ್ಷೆ ಮೂಡಿಸಿರುವ ‘ರಾಮಾಯಣ’ ಸಿನಿಮಾ ಬಿಡುಗಡೆಯಾಗುವ ಮುನ್ನವೇ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದೆ. ಚಿತ್ರದ ಆಡಿಯೋ ಹಕ್ಕುಗಳು ಬರೋಬ್ಬರಿ ₹75 ಕೋಟಿ ಮೊತ್ತಕ್ಕೆ ಮಾರಾಟವಾಗಿದ್ದು, ಭಾರತೀಯ ಚಿತ್ರರಂಗದಲ್ಲೇ ಅತಿ ದುಬಾರಿ ಮ್ಯೂಸಿಕ್ ಡೀಲ್ ಕುದುರಿಸಿದ ಹೆಗ್ಗಳಿಕೆಗೆ ಈ ಸಿನಿಮಾ ಪಾತ್ರವಾಗಿದೆ.
ಟಿ-ಸೀರೀಸ್ಗೆ ಆಡಿಯೋ ಹಕ್ಕು
ಬಾಲಿವುಡ್ ನಟ ರಣಬೀರ್ ಕಪೂರ್ ಅಭಿನಯದ ಈ ಬಿಗ್ ಬಜೆಟ್ ಚಿತ್ರದ ಆಡಿಯೋ ಹಕ್ಕುಗಳನ್ನು ಟಿ-ಸೀರೀಸ್ ಸಂಸ್ಥೆ ಭಾರಿ ಮೊತ್ತಕ್ಕೆ ತನ್ನದಾಗಿಸಿಕೊಂಡಿದೆ. ಈ ಒಪ್ಪಂದವು ಭಾರತೀಯ ಸಿನಿ ಉದ್ಯಮದಲ್ಲಿ ಹೊಸ ಮೈಲಿಗಲ್ಲು ಎಂದು ಹೇಳಲಾಗುತ್ತಿದೆ.
ಇದನ್ನು ಓದಿ : ಕೊನೆಯ ಕ್ಷಣದಲ್ಲಿ ರಾಮಾಯಣ Trailer ರಿಲೀಸ್ ರದ್ದು – ಕಾರಣ ಇದು

‘ಪುಷ್ಪ 2’ ದಾಖಲೆಯನ್ನು ಹಿಂದಿಕ್ಕಿದ ‘ರಾಮಾಯಣ’
ಇದುವರೆಗೆ ಭಾರತೀಯ ಚಿತ್ರರಂಗದಲ್ಲಿ ಅತಿ ಹೆಚ್ಚು ಮೊತ್ತಕ್ಕೆ ಆಡಿಯೋ ಹಕ್ಕು ಮಾರಾಟವಾದ ದಾಖಲೆಯು ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ 2’ ಚಿತ್ರದ ಹೆಸರಿನಲ್ಲಿತ್ತು. ಆ ಚಿತ್ರದ ಮ್ಯೂಸಿಕ್ ರೈಟ್ಸ್ ಸುಮಾರು ₹65 ಕೋಟಿಗೆ ಮಾರಾಟವಾಗಿತ್ತು. ಇದೀಗ Ramayana ಚಿತ್ರದ ₹75 ಕೋಟಿ ಡೀಲ್ ಆ ದಾಖಲೆಯನ್ನು ಹಿಂದಿಕ್ಕಿದೆ.
Ramayana – ರಾವಣನ ಪಾತ್ರದಲ್ಲಿ ಯಶ್
ಖ್ಯಾತ ನಿರ್ದೇಶಕ ನಿತೇಶ್ ತಿವಾರಿ ನಿರ್ದೇಶನದ ಈ ಚಿತ್ರದಲ್ಲಿ ರಣಬೀರ್ ಕಪೂರ್ ಶ್ರೀರಾಮನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ಸಾಯಿ ಪಲ್ಲವಿ ಸೀತೆಯಾಗಿ ಅಭಿನಯಿಸುತ್ತಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ರಾವಣನ ಪಾತ್ರದಲ್ಲಿ ನಟಿಸುತ್ತಿದ್ದು, ಈ ಪಾತ್ರದ ಬಗ್ಗೆ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿದೆ. ಜುಲೈ 30 ರಂದು ‘ರಾಮಾಯಣ ಭಾಗ 1’ ಚಿತ್ರದ ಬಹುನಿರೀಕ್ಷಿತ ಟ್ರೈಲರ್ ಬಿಡುಗಡೆಯಾಗಲಿದೆ.

ಇದನ್ನು ನೋಡಿ : ವೈದ್ಯರ ನಿರ್ಲಕ್ಷ್ಯಕ್ಕೆ ಕೋಮಾಗೆ ಜಾರಿದ ಗರ್ಭಿಣಿ – ಆಸ್ಪತ್ರೆ ಮುಂದೆ ಕುಟುಂಬಸ್ಥರಿಂದ PROTEST




