Ravi Shankar ಗುರೂಜಿ ವಿರುದ್ಧ ದೂರು – ಫೆ.5 ಕ್ಕೆ ವಿಚಾರಣೆ ಮುಂದೂಡಿಕೆ.

ಬೆಂಗಳೂರು ದಕ್ಷಿಣ ತಾಲೂಕಿನ ಉತ್ತರಹಳ್ಳಿ ಹೋಬಳಿಯ ಕಗ್ಗಲೀಪುರ ಗ್ರಾಮದಲ್ಲಿ ಸರ್ಕಾರಿ ಜಮೀನು ಒತ್ತುವರಿ ಮಾಡಿದ ಆರೋಪ ಸಂಬಂಧ ಆರ್ಟ್ ಆಫ್ ಲಿವಿಂಗ್ನ ರವಿಶಂಕರ್ ಗುರೂಜಿ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದು ಕೋರಿ ಸಲ್ಲಿಸಿರುವ ಅರ್ಜಿಯನ್ನು ಫೆಬ್ರವರಿ 5ರಂದು ವಿಚಾರಣೆ ನಡೆಸುವುದಾಗಿ ಹೈಕೋರ್ಟ್ ತಿಳಿಸಿದೆ.
ವಿಚಾರಣೆಯನ್ನು ಮುಂದೂಡಿತ್ತು
ಈ ಸಂಬಂಧ ಬೆಂಗಳೂರು ಮೆಟ್ರೋಪಾಲಿಟನ್ ಟಾಸ್ಕ್ ಫೋರ್ಸ್ (ಬಿಎಂಟಿಎಫ್) ದಾಖಲಿಸಿರುವ ಪ್ರಕರಣ ರದ್ದು ಮಾಡುವಂತೆ ಕೋರಿ Ravi Shankar ಗುರೂಜಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ವಿಚಾರಣೆಯನ್ನು ಮುಂದೂಡಿತ್ತು.
ಇದನ್ನು ಓದಿ : Honnavar ಸೂಳೆಮುರ್ಕಿಯಲ್ಲಿ ನೆಡೆದಿದೆ ಡಬಲ್ ಮರ್ಡರ್..!!

ಆರೋಪಿಯ ಪರವಾಗಿ ಪ್ರಮಾಣಪತ್ರ ಸಲ್ಲಿಸಲು ಅವಕಾಶವಿಲ್ಲ
ಈ ಹಿಂದೆ ನಡೆದಿದ್ದ ವಿಚಾರಣೆ ವೇಳೆ, ಸರ್ಕಾರದ ಪರ ವಕೀಲರು, ಪ್ರಕರಣದಲ್ಲಿ ರವಿಶಂಕರ್ ಅವರು ಆರೋಪಿಯಾಗಿದ್ದಾರೆ. ಆದರೆ, ಹೈಕೋರ್ಟ್ಗೆ ಸಲ್ಲಿಸಿರುವ ಅರ್ಜಿಯ ಪ್ರಮಾಣ ಪತ್ರಕ್ಕೆ ಆಶ್ರಮದ ಭಕ್ತರೊಬ್ಬರಾದ ಸುಬ್ರಹ್ಮಣ್ಯ ಎಂಬುವರು ಸಹಿ ಹಾಕಿದ್ದಾರೆ. ಇದನ್ನು ಒಪ್ಪಲು ಸಾಧ್ಯವಿಲ್ಲ.
ಯಾವುದೇ ಕ್ರಿಮಿನಲ್ ಪ್ರಕ್ರಿಯೆಗಳಲ್ಲಿ, ಅದರಲ್ಲೂ ಪ್ರಕರಣ ರದ್ದತಿ ಕೋರುವ ಪ್ರಕ್ರಿಯೆಗಳಲ್ಲಿ ಪವರ್ ಆಫ್ ಅಟಾರ್ನಿ ಹೊಂದಿರುವವರು ಆರೋಪಿಯನ್ನು ಪ್ರತಿನಿಧಿಸಲು ಅಥವಾ ಆರೋಪಿಯ ಪರವಾಗಿ ಪ್ರಮಾಣಪತ್ರ ಸಲ್ಲಿಸಲು ಅವಕಾಶವಿಲ್ಲ. ಅರ್ಜಿಯು ದೋಷಪೂರಿತವಾಗಿದ್ದು, ಅದನ್ನು ವಜಾಗೊಳಿಸಬೇಕು ಎಂದು ಕೋರಿದ್ದರು.

ಇದನ್ನು ನೋಡಿ : KUNIGAL | ರೈಲ್ವೆ ಸ್ಟೇಷನ್ ಜಫ್ತಿ ಮಾಡಿದ್ದಾರೂ ಯಾಕೆ..? – ಕಚೇರಿಯಲ್ಲಿದ್ದ ವಸ್ತುಗಳನ್ನು ಕೂಡ ಕೊಂಡೊಯ್ದರು




