ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ ಗಿಫ್ಟ್ – 100 ದಿನಗಳಲ್ಲಿ 15,000 ಸರ್ಕಾರಿ ಶಿಕ್ಷಕರ ನೇಮಕಾತಿ!

ರಾಜ್ಯದಲ್ಲಿ ಸರ್ಕಾರಿ ಶಿಕ್ಷಕರ ಹುದ್ದೆಯ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ. ಮುಂಬರುವ 100 ದಿನಗಳ ಒಳಗೆ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸರ್ಕಾರ ಸಿದ್ಧತೆ ನಡೆಸಿದೆ. ಈ ನೇಮಕಾತಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆ ಮುಂದಿನ ವಾರದಲ್ಲೇ ಪ್ರಕಟವಾಗುವ ಸಾಧ್ಯತೆ ಇದ್ದು, ಶಿಕ್ಷಕ ಹುದ್ದೆಗಾಗಿ ಕಾಯುತ್ತಿರುವ ಸಾವಿರಾರು ಅಭ್ಯರ್ಥಿಗಳಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
51 ಸಾವಿರ ಶಿಕ್ಷಕರ ನೇಮಕಾತಿ
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಪ್ರಸ್ತುತ 80 ಸಾವಿರಕ್ಕೂ ಅಧಿಕ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಕೊರತೆಯಿದೆ. ಈ ಕೊರತೆಯನ್ನು ನೀಗಿಸಲು ಒಟ್ಟು 51 ಸಾವಿರ ಶಿಕ್ಷಕರ ನೇಮಕಾತಿಗೆ ಆರ್ಥಿಕ ಇಲಾಖೆಯ ಅನುಮೋದನೆ ದೊರೆತಿದ್ದು, ಮೊದಲ ಹಂತದಲ್ಲಿ 15 ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲು ನಿರ್ಧರಿಸಲಾಗಿದೆ.

2,500 ಐಟಿ ಶಿಕ್ಷಕರನ್ನು ನೇಮಕ
ಈ ನೇಮಕಾತಿಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರು, ಪ್ರೌಢಶಾಲಾ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಮಾಹಿತಿ ತಂತ್ರಜ್ಞಾನ ಶಿಕ್ಷಕರ ಹುದ್ದೆಗಳು ಸೇರಿವೆ.
ವಿಶೇಷವಾಗಿ ಸರ್ಕಾರಿ ಶಾಲೆಗಳಲ್ಲಿ ಮೊದಲ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ನೀಡುವ ಉದ್ದೇಶದಿಂದ 2,500 ಐಟಿ ಶಿಕ್ಷಕರನ್ನು ನೇಮಕ ಮಾಡಲು ಇಲಾಖೆ ಮುಂದಾಗಿದೆ.
ಇದನ್ನು ಓದಿ : Job Alert : ರೈಲ್ವೆ ಇಲಾಖೆಯಲ್ಲಿ ಬಂಪರ್ ಉದ್ಯೋಗಾವಕಾಶ
ಹುದ್ದೆಗಳ ಸಂಪೂರ್ಣ ವಿವರ ಶೀಘ್ರದಲ್ಲೇ ಪ್ರಕರಣ
ಹೊಸ ಸಿಆರ್ ಅಂಡ್ ಆರ್ ನಿಯಮಾವಳಿಗಳ ಅಡಿಯಲ್ಲಿ ಪಿಎಸ್ಟಿಆರ್, ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಹುದ್ದೆಗಳ ಸಂಪೂರ್ಣ ವಿವರಗಳನ್ನು ಶಿಕ್ಷಣ ಇಲಾಖೆ ಶೀಘ್ರದಲ್ಲೇ ಪ್ರಕಟಿಸಲಿದೆ. ಅಧಿಸೂಚನೆ ಪ್ರಕಟವಾದ ಕೇವಲ ಎರಡು ತಿಂಗಳ ಒಳಗೆ ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸುವ ಮೂಲಕ ನೇಮಕಾತಿ ಪ್ರಕ್ರಿಯೆಯನ್ನು ವೇಗವಾಗಿ ಪೂರ್ಣಗೊಳಿಸಲು ಇಲಾಖೆ ಯೋಜನೆ ರೂಪಿಸಿದೆ.

ಶಿಕ್ಷಕರ ಹುದ್ದೆಗಾಗಿ ಸಿದ್ಧತೆ ನಡೆಸುತ್ತಿರುವವರಿಗೆ ಸುವರ್ಣಾವಕಾಶ
ಈ ಶೈಕ್ಷಣಿಕ ವರ್ಷದಲ್ಲೇ ಹೊಸ ಶಿಕ್ಷಕರು ಶಾಲೆಗಳಲ್ಲಿ ಬೋಧನಾ ಕಾರ್ಯಕ್ಕೆ ಸೇರ್ಪಡೆಯಾಗುವ ನಿರೀಕ್ಷೆಯಿದ್ದು, ಹಲವು ವರ್ಷಗಳಿಂದ ಶಿಕ್ಷಕರ ಹುದ್ದೆಗಾಗಿ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಇದು ಸುವರ್ಣಾವಕಾಶವಾಗಿದೆ.
ಹೀಗಾಗಿ ಶಿಕ್ಷಕ ಹುದ್ದೆ ಕನಸು ಕಾಣುತ್ತಿರುವ ಅಭ್ಯರ್ಥಿಗಳು ಇಂದಿನಿಂದಲೇ ಪರೀಕ್ಷಾ ಸಿದ್ಧತೆಯನ್ನು ಚುರುಕುಗೊಳಿಸುವಂತೆ ಶಿಕ್ಷಣ ಇಲಾಖೆ ಸೂಚಿಸಿದೆ.

ಇದನ್ನು ನೋಡಿ : ಹೆಬ್ಬೂರಿನಲ್ಲಿ BJP ಸಂಭ್ರಮಾಚರಣೆ – CONGRESS ವಿರುದ್ಧ SURESH GOWDA ಗುಡುಗು..!




