
Bengaluru : ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್ಗೆ ಬಿಗ್ ರಿಲೀಫ್
ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಅದರ ಕಾರ್ಯಕರ್ತರ ವಿರುದ್ಧ ಅವಹೇಳನಕಾರಿ ಮತ್ತು ಮಾನಹಾನಿಕರ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕರ್ನಾಟಕ ಯುವ ಕಾಂಗ್ರೆಸ್ ಮುಖಂಡ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ತಾತ್ಕಾಲಿಕ ಬಿಗ್ ರಿಲೀಫ್
ಬೆಂಗಳೂರಿನ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಬ್ಬರಿಗೂ ಜಾಮೀನು ನೀಡಿ ಆದೇಶಿಸಿದ್ದು, ತಲಾ ₹10 ಸಾವಿರ ವೈಯಕ್ತಿಕ ಶ್ಯೂರಿಟಿ ನೀಡುವಂತೆ ಷರತ್ತು ವಿಧಿಸಿದೆ. ನ್ಯಾಯಾಲಯದ ಈ ಆದೇಶದಿಂದ ಪ್ರಿಯಾಂಕ್ ಖರ್ಗೆ ಹಾಗೂ ನಲಪಾಡ್ ಅವರಿಗೆ ಪ್ರಕರಣದಲ್ಲಿ ತಾತ್ಕಾಲಿಕ ಬಿಗ್ ರಿಲೀಫ್ ಸಿಕ್ಕಂತಾಗಿದೆ.

RSS ಕಾರ್ಯಕರ್ತರಿಂದ ಖಾಸಗಿ ದೂರು
RSS ಕಾರ್ಯಕರ್ತ ಬೆಂಗಳೂರಿನ ಸಿದ್ದಾಪುರ ನಿವಾಸಿ ಎ. ತೇಜಸ್ ಅವರು ನೀಡಿದ್ದ ಖಾಸಗಿ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಾಗಿತ್ತು. ದೂರಿನ ಪ್ರಕಾರ, 2025ರ ಅಕ್ಟೋಬರ್ 14ರಂದು ಪ್ರಿಯಾಂಕ್ ಖರ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ RSS ಸದಸ್ಯರ ವಿರುದ್ಧ ಪೋಸ್ಟ್ ಮಾಡಿದ್ದರು.
ಇದೇ ವೇಳೆ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರು ಯೂಟ್ಯೂಬ್ ಚಾನೆಲ್ವೊಂದರಲ್ಲಿ RSS ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಹೇಳಿಕೆಗಳು RSS ಸಂಘಟನೆ ಹಾಗೂ ಅದರ ಕಾರ್ಯಕರ್ತರ ಘನತೆಗೆ ಧಕ್ಕೆ ಉಂಟುಮಾಡಿವೆ ಎಂದು ಆರೋಪಿಸಿ ತೇಜಸ್ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು.
READ THIS : ವಾಲ್ಮೀಕಿ ನಿಗಮ ಹಗರಣ – ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶ
ಖಾಸಗಿ ದೂರಿನ ವಿಚಾರಣೆ ನಡೆಸಿದ್ದ ನ್ಯಾಯಾಲಯವು ಈ ಹಿಂದೆ ಪ್ರಿಯಾಂಕ್ ಖರ್ಗೆ ಮತ್ತು ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ಅಲ್ಲದೆ, ಜುಲೈ 21ರಂದು ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚನೆ ನೀಡಿತ್ತು. ಇದೀಗ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ಇಬ್ಬರಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
‘RSS ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’ ಎಂದಿದ್ದ ಖರ್ಗೆ
ಈ ಪ್ರಕರಣದ ನಡುವೆ ಇತ್ತೀಚೆಗೆ ಪ್ರಿಯಾಂಕ್ ಖರ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಮತ್ತೊಂದು ಪೋಸ್ಟ್ ಹಾಕಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು. RSS ಮತ್ತು ಬಿಜೆಪಿ ನಡುವಿನ ಸಂಬಂಧವನ್ನು ಉಲ್ಲೇಖಿಸಿದ್ದ ಅವರು, “RSS ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ” ಎಂದು ವ್ಯಂಗ್ಯವಾಡಿದ್ದರು.

MUST WATCH : ಭೀಕರ ಅಪಘಾತದಲ್ಲಿ ಕಂದಮ್ಮ ಸೇರಿ ಐವರ ಸಾ* – CC CAMERAದಲ್ಲಿ ಸೆರೆಯಾಯ್ತು ರಣಭೀಕರ ದೃಶ್ಯ




