Renukaswamy ಕೇಸ್ – ಸಾಕ್ಷಿಗೆ ಧಮ್ಕಿ ಹಾಕಿದ ಆರೋಪಿಗಳು ಅಂದರ್!

ಚಿತ್ರದುರ್ಗದ Renukaswamy ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರಕರಣದ ಪ್ರಮುಖ ಸಾಕ್ಷಿಯೊಬ್ಬರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ದರ್ಶನ್ ಅಭಿಮಾನಿಗಳ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಮೂವರನ್ನು ಬಂಧಿಸಲಾಗಿದೆ.
ನಟ ದರ್ಶನ್ಗೆ ಮತ್ತೆ ಸಂಕಷ್ಟ!
ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿಗೆ ಬೆದರಿಕೆ ಹಾಕಿದ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು,ಇದು ನಟ ದರ್ಶನ್ಗೆ ಮತ್ತಷ್ಟು ಸಂಕಷ್ಟ ತಂದೊಡ್ಡಿದೆ. ಪ್ರಕರಣದ 49ನೇ ಸಾಕ್ಷಿದಾರರಾದ ಸಂದೀಪ್ಗೆ ದರ್ಶನ್ ಅಭಿಮಾನಿಗಳು ಸಾಕ್ಷಿ ಹೇಳದಂತೆ ಬೆದರಿಕೆ ಹಾಕಿದ್ದರು. ಈ ಬಗ್ಗೆ ಸಂದೀಪ್ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ್ದರು.
ಇದನ್ನು ಓದಿ : ರೇಣುಕಾಸ್ವಾಮಿ ಕೊಲೆ ಪ್ರಕರಣ – ನಾಳೆ ನಟ ದರ್ಶನ್ಗೆ ಬಿಗ್ ಡೇ

ಧಮ್ಕಿ ಹಾಕಿದ ಆರೋಪಿಗಳು ಅಂದರ್!
ನ್ಯಾಯಾಲಯಕ್ಕೆ ಮಾಹಿತಿ ನೀಡಿದ ಬಳಿಕ ಸಂದೀಪ್ಗೆ ರಕ್ಷಣೆ ನೀಡಿದ ಪೊಲೀಸರು, ಬೆದರಿಕೆ ಹಾಕಿದ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು. ಈ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು ವೇಣು, ಸುಹಾಸ್ ಮತ್ತು ಪುನೀತ್ ಎಂಬ ಮೂವರನ್ನು ಬಂಧಿಸಲಾಗಿದೆ.

ಬಂಧಿತರನ್ನು ತೀವ್ರ ವಿಚಾರಣೆ
ಬಂಧಿತರಲ್ಲಿ ಪುನೀತ್,’ಡಿ ಕಂಪನಿ’ ಫ್ಯಾನ್ ಪೇಜನ್ನು ನಿರ್ವಹಿಸುತ್ತಿದ್ದ ಎಂದು ತಿಳಿದುಬಂದಿದೆ. ಸುಹಾಸ್ ಮತ್ತು ವೇಣು ತುಮಕೂರಿನ ದರ್ಶನ್ ಅಭಿಮಾನಿ ಸಂಘದ ಸದಸ್ಯರಾಗಿದ್ದಾರೆ. ಸುಹಾಸ್, ಸಾಕ್ಷಿದಾರ ಸಂದೀಪ್ ನ ಮಾತುಕತೆ ನಡೆಸುವ ನೆಪದಲ್ಲಿ ಕರೆಸಿಕೊಂಡು,ಕಾರಿನಲ್ಲಿ ಸುತ್ತಾಡಿಸಿಕೊಂಡು ಸಾಕ್ಷಿ ಹೇಳದಂತೆ ತಾಕೀತು ಮಾಡಿದ್ದಾನೆ. ಇದಕ್ಕೆ ಒಪ್ಪದ ಸಂದೀಪ್ಗೆ ಸುಹಾಸ್ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಸದ್ಯ ಬಂಧಿತ ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತ ಆರೋಪಿಗಳಿಗೆ ವೈದ್ಯಕೀಯ ಪರೀಕ್ಷೆ ನಡೆಸಿ ಆ ಬಳಿಕ ಕೋರ್ಟ್ ಗೆ ಹಾಜರುಪಡಿಸಿ ,ಹೆಚ್ಚಿನ ವಿಚಾರಣೆಗೆ ವಶಕ್ಕೆ ಪಡೆಯುವ ಸಾಧ್ಯತೆ ಕೂಡ ಇದೆ ಎನ್ನಲಾಗಿದೆ.

ಇದನ್ನು ನೋಡಿ : ಕಲ್ಲು ಕ್ವಾರಿಯಲ್ಲಿ 7 ಮಂದಿ ಕಾರ್ಮಿಕರು ಸಾ* – ದುರಂತದ ಬಗ್ಗೆ ಸಿಎಂ ಡಿಕೆಶಿ ಏನಂದ್ರು




