
Renukaswamy Case : ನಿನ್ನೆವರೆಗೂ A14.. ಇನ್ಮುಂದೆ ರೇಣುಕಾಸ್ವಾಮಿ ಕೇಸ್ʼನಲ್ಲಿ ಮಾಫಿ ಸಾಕ್ಷಿ: ಪ್ರದೋಷ್ ಸೆಲ್ ಮೇಲೆ 24/7 ಹದ್ದಿನ ಕಣ್ಣು!
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು,, ಪ್ರಕರಣದ 14ನೇ ಆರೋಪಿಯಾಗಿದ್ದ ಪ್ರದೋಷ್ ಇದೀಗ ಮಾಫಿ ಸಾಕ್ಷಿ ಆಗಿ ಪ್ರಾಸಿಕ್ಯೂಷನ್ ಪರ ಸಾಕ್ಷ್ಯ ನೀಡಲಿದ್ದಾರೆ.
ಈ ಹಿನ್ನೆಲೆಯಲ್ಲಿ ಆರೋಪಪಟ್ಟಿಯಿಂದ ಪ್ರದೋಷ್ ಅವರ ಹೆಸರನ್ನು ತೆಗೆದುಹಾಕಲಾಗಿದೆ ಎಂದು ತಿಳಿದುಬಂದಿದೆ.
ಚಾರ್ಜ್ಶೀಟ್ನಲ್ಲಿ ಹೆಸರು ಡಿಲೀಟ್
ಪ್ರದೋಷ್ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವ ಸಂಬಂಧ ನಡೆದ ಕಾನೂನು ಪ್ರಕ್ರಿಯೆಯ ಬಳಿಕ, ಸೆಪ್ಟೆಂಬರ್ 16ರಂದು ಬೆಂಗಳೂರಿನ 59ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಅವರ ಅರ್ಜಿಯನ್ನು ಅಂಗೀಕರಿಸಿತ್ತು.
ಇದಾದ ಬಳಿಕ ಸೆಪ್ಟೆಂಬರ್ 23ರಂದು ಕರ್ನಾಟಕ ಹೈಕೋರ್ಟ್ ಕೂಡ ಪ್ರದೋಷ್ ಅವರನ್ನು ಅಪ್ರೂವರ್ ಆಗಿ ಪರಿಗಣಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದಿದೆ.
READ THIS : ದರ್ಶನ್ಗೆ ಮತ್ತೆ ಸಂಕಷ್ಟ – ಪ್ರದೋಷ್ ಮಾಫಿ ಸಾಕ್ಷಿ ದಾಖಲಿಸಲು ಕೋರ್ಟ್ ಆದೇಶ

ಇನ್ಮುಂದೆ ಪ್ರದೋಷ್ ಆರೋಪಿ ಅಲ್ವಾ?
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಪಟ್ಟಿಯಲ್ಲಿ ಈ ಹಿಂದೆ ಪ್ರದೋಷ್ ಅವರನ್ನು A-14 ಎಂದು ಹೆಸರಿಸಲಾಗಿತ್ತು.
ಇದೀಗ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಅವರು ಆರೋಪಿಯಾಗಿರದೆ, ಪ್ರಾಸಿಕ್ಯೂಷನ್ ಪರ ಸಾಕ್ಷಿಯಾಗಿ ವಿಚಾರಣೆಗೆ ಒಳಪಡಲಿದ್ದಾರೆ. ಹೀಗಾಗಿ ಆರೋಪಪಟ್ಟಿಯಿಂದ ಅವರ ಹೆಸರನ್ನು ಡಿಲೀಟ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಆದರೆ ಮಾಫಿ ಸಾಕ್ಷಿಯಾಗಿ ಪರಿಗಣಿಸಲ್ಪಟ್ಟಿರುವುದರಿಂದ ತಕ್ಷಣವೇ ಜೈಲಿನಿಂದ ಬಿಡುಗಡೆಯಾಗುವುದಿಲ್ಲ ಎನ್ನಲಾಗಿದೆ. ವಿಚಾರಣೆ ಪೂರ್ಣಗೊಳ್ಳುವವರೆಗೆ ಅವರು ಜೈಲಿನಲ್ಲೇ ಇರಬೇಕಾಗಬಹುದು.
ಮಾಫಿ ಸಾಕ್ಷಿಯಾಗಿ ನ್ಯಾಯಾಲಯದ ಮುಂದೆ ಪ್ರಮುಖ ಮಾಹಿತಿಯನ್ನು ಮರೆಮಾಚುವುದು, ಸುಳ್ಳು ಸಾಕ್ಷ್ಯ ನೀಡುವುದು ಅಥವಾ ನ್ಯಾಯಾಲಯ ವಿಧಿಸಿರುವ ಷರತ್ತುಗಳನ್ನು ಉಲ್ಲಂಘಿಸುವುದು ಕಂಡುಬಂದರೆ, ಪ್ರದೋಷ್ ಮತ್ತೆ ಆರೋಪಿಯಾಗಿ ವಿಚಾರಣೆ ಎದುರಿಸುವ ಸಾಧ್ಯತೆಯಿದೆ.

ಜೈಲಿನಲ್ಲಿ ಪ್ರದೋಷ್ ಮೇಲೆ ಹೆಚ್ಚಿದ ನಿಗಾ
ಮಾಫಿ ಸಾಕ್ಷಿಯಾಗಿರುವ ಹಿನ್ನೆಲೆಯಲ್ಲಿ ಜೈಲಿನಲ್ಲಿ ಪ್ರದೋಷ್ ಅವರ ಭದ್ರತೆ ಹಾಗೂ ಚಟುವಟಿಕೆಗಳ ಮೇಲೆ ಹೆಚ್ಚಿನ ನಿಗಾ ಇರಿಸಲಾಗಿದೆ ಎಂದು ಜೈಲು ಮೂಲಗಳು ತಿಳಿಸಿವೆ.
24 ಗಂಟೆಗಳ ಸಿಸಿಟಿವಿ ಕಣ್ಗಾವಲು, ಹೊರಗಿನಿಂದ ಬರುವ ಊಟ, ತಿಂಡಿ ಮತ್ತು ನೀರಿನ ಪರಿಶೀಲನೆ ಸೇರಿದಂತೆ ಅವರನ್ನು ಭೇಟಿ ಮಾಡಲು ಬರುವ ಪ್ರತಿಯೊಬ್ಬರ ಸಂಪೂರ್ಣ ಮಾಹಿತಿಯನ್ನು ದಾಖಲಿಸಲಾಗುತ್ತಿದೆ ಎನ್ನಲಾಗಿದೆ.

MUST WATCH : ರೈತರಿಗಾಗಿ ನಿಮ್ಮ ಬಳಿ ಭಿಕ್ಷೆ ಬೇಡ್ತೇನೆ – 25 ಸಾವಿರ ಪರಿಹಾರ ನೀಡಿ-ಅಶೋಕ್




