ಸುಪ್ರೀಂ ಕೋರ್ಟ್ನಲ್ಲಿ Darshan ಜಾಮೀನು ಭವಿಷ್ಯ! ಏನಾಗಲಿದೆ ನಾಳೆ?

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎಂಟನೇ ಆರೋಪಿಯಾಗಿರುವ ಸ್ಯಾಂಡಲ್ವುಡ್ ನಟ ದರ್ಶನ್ಗೆ ನಾಳೆ ಬಿಗ್ ಡೇ ಆಗಿದ್ದು, ಸುಪ್ರೀಂ ಕೋರ್ಟ್ನಲ್ಲಿ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ. ಈ ವಿಚಾರಣೆಯ ಬಳಿಕ ದರ್ಶನ್ ಅವರ ಮುಂದಿನ ಕಾನೂನು ಹಾದಿ ಹಾಗೂ ಜೈಲು ವಾಸದ ಭವಿಷ್ಯದ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ.

ಸುಪ್ರೀಂ ಕೋರ್ಟ್ನಲ್ಲಿ ಪ್ರಬಲ ವಾದ ಮಂಡಿಸಲು ಸಿದ್ಧತೆ
ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ವಿಜಯ್ ಬಿಷ್ನೋಯಿ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಅರ್ಜಿಯ ವಿಚಾರಣೆ ನಡೆಸಲಿದೆ. ಹೈಕೋರ್ಟ್ನಲ್ಲಿ ಜಾಮೀನು ನಿರಾಕರಿಸಲ್ಪಟ್ಟಿದ್ದ ಹಿನ್ನೆಲೆ, ಈ ಬಾರಿ Darshan ಪರ ವಕೀಲರು ಸುಪ್ರೀಂ ಕೋರ್ಟ್ನಲ್ಲಿ ಪ್ರಬಲ ವಾದ ಮಂಡಿಸಲು ಸಿದ್ಧತೆ ನಡೆಸಿದ್ದಾರೆ.

READ THIS : ವಿಧಾನಸೌಧದಲ್ಲಿ ನೂತನ ಶಾಸಕರಾಗಿ ಉಮೇಶ್ ಮೇಟಿ, ಸಮರ್ಥ್ ಶಾಮನೂರು ಪ್ರಮಾಣವಚನ
ಏನಾಗಲಿದೆ ನಾಳೆ?
ಇನ್ನು ಹಿಂದಿನ ವಿಚಾರಣೆಯ ವೇಳೆ, ಪ್ರಕರಣದ ಪ್ರಗತಿ ಕುರಿತು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಿಂದ ಸಮಗ್ರ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿತ್ತು. ಪ್ರಕರಣದಲ್ಲಿ ಇದುವರೆಗೆ ಎಷ್ಟು ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡಿದೆ, ಇನ್ನೂ ಎಷ್ಟು ಸಾಕ್ಷಿಗಳು ಬಾಕಿ ಇವೆ ಮತ್ತು ಇಡೀ ವಿಚಾರಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲು ಅಂದಾಜು ಎಷ್ಟು ಸಮಯ ಬೇಕಾಗಬಹುದು ಎಂಬ ಮಾಹಿತಿಯನ್ನು ನ್ಯಾಯಾಲಯ ಕೇಳಿತ್ತು.

ರೇಣುಕಾಸ್ವಾಮಿ ಕೇಸ್ನಲ್ಲಿ Darshan ಗೆ ಸಿಗುತ್ತಾ ಜಾಮೀನು?
ಕೇವಲ ವಿಚಾರಣೆಯ ಪ್ರಗತಿ ಮಾತ್ರವಲ್ಲದೆ, ಜೈಲಿನಲ್ಲಿ ದರ್ಶನ್ ಅವರಿಗೆ ಬೇಕಾದ ಮೂಲ ಸೌಲಭ್ಯಗಳನ್ನು ಒದಗಿಸಲಾಗಿದೆಯೇ ಎಂಬ ಬಗ್ಗೆಯೂ ನ್ಯಾಯಾಲಯ ಮಾಹಿತಿ ಬಯಸಿತ್ತು. ಈ ಎಲ್ಲಾ ಅಂಶಗಳನ್ನು ಒಳಗೊಂಡ ವರದಿಯು ನಾಳೆ ಪೀಠದ ಮುಂದೆ ಬರಲಿದ್ದು, ವರದಿಯಲ್ಲಿರುವ ಅಂಶಗಳು ದರ್ಶನ್ ಅವರ ಜಾಮೀನು ಅರ್ಜಿಯ ಮೇಲೆ ನೇರ ಪರಿಣಾಮ ಬೀರಲಿವೆ.

MUST WATCH : NEET ಪ್ರಶ್ನೆ ಪತ್ರಿಕೆಯಲ್ಲಿ ಸೋರಿಕೆ ವಿಚಾರ – ವ್ಯವಸ್ಥೆಯೇ ಹೊಣೆಗಾರಿಕೆ ಎಂದ MADHUSWAMY




