
ನಾಗೇಂದ್ರ ರಾಜೀನಾಮೆ ಕೊಟ್ಟರೂ ತಣ್ಣಗಾಗದ BJP ಕಿಚ್ಚು – ಇಂದಿನಿಂದ `ಬಳ್ಳಾರಿ ಚಲೋ’ ಪಾದಯಾತ್ರೆ ಆರಂಭ.!
ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯವನ್ನು ಖಂಡಿಸಿ ಪ್ರತಿಪಕ್ಷ ಬಿಜೆಪಿ ಹಮ್ಮಿಕೊಂಡಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆ ಇಂದಿನಿಂದ (ಸೆ.1) ಆರಂಭವಾಗಲಿದೆ. ರಾಯಚೂರು ಜಿಲ್ಲೆಯ ಲಿಂಗಸುಗೂರಿನಿಂದ ಆರಂಭವಾಗಲಿರುವ ಈ ಪಾದಯಾತ್ರೆ ಸೆಪ್ಟೆಂಬರ್ 10ರಂದು ಬಳ್ಳಾರಿಗೆ ತಲುಪಲಿದೆ.
10 ದಿನಗಳ ಕಾಲ ಪಾದಯಾತ್ರೆ
ಒಟ್ಟು 10 ದಿನಗಳ ಕಾಲ ನಡೆಯಲಿರುವ ಪಾದಯಾತ್ರೆಗೆ BJP ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ಇಂದು ಬೆಳಗ್ಗೆ 10.30ಕ್ಕೆ ಲಿಂಗಸುಗೂರು-ಬೆಂಗಳೂರು ಬೈಪಾಸ್ ರಸ್ತೆಯ ಬಳಿಯ ಜಿ.ಕೆ. ರೆಸಿಡೆನ್ಸಿ ಮುಂಭಾಗದ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಬಳಿಕ ಪಾದಯಾತ್ರೆಗೆ ಅಧಿಕೃತ ಚಾಲನೆ ದೊರೆಯಲಿದೆ.
READ THIS : ಬಿಡದಿ ಟೌನ್ಶಿಪ್ ವಿರೋಧಿಸಿ ಆ.9 ರಿಂದ ಜೆಡಿಎಸ್ ಬೃಹತ್ ಪಾದಯಾತ್ರೆ!

ಯಾವ ಮಾರ್ಗದಲ್ಲಿ BJP ಪಾದಯಾತ್ರೆ?
ಲಿಂಗಸುಗೂರಿನಿಂದ ಆರಂಭವಾಗುವ ‘ಬಳ್ಳಾರಿ ಚಲೋ’ ಪಾದಯಾತ್ರೆ ಹಲವು ಪ್ರಮುಖ ಪಟ್ಟಣಗಳ ಮೂಲಕ ಸಾಗಲಿದೆ. ಪಾದಯಾತ್ರೆಯ ಮಾರ್ಗ ಹೀಗಿದೆ:
- ಲಿಂಗಸುಗೂರು
- ಮಸ್ಕಿ
- ಸಿಂಧನೂರು
- ಕಾರಟಗಿ
- ಗಂಗಾವತಿ
- ಕಂಪ್ಲಿ
- ಕುಡುತಿನಿ
- ಬಳ್ಳಾರಿ
ಸೆಪ್ಟೆಂಬರ್ 10ರಂದು ಪಾದಯಾತ್ರೆ ಬಳ್ಳಾರಿ ತಲುಪಲಿದ್ದು, ಅಲ್ಲಿ ಸಮಾರೋಪ ಕಾರ್ಯಕ್ರಮ ನಡೆಸಲು ಬಿಜೆಪಿ ಯೋಜನೆ ರೂಪಿಸಿದೆ.

ಪ್ರಮುಖ BJP ನಾಯಕರ ಭಾಗಿ
ಪಾದಯಾತ್ರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಹಾಗೂ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಪಕ್ಷದ ಹಲವು ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.
ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಮತ್ತು ಬಸವರಾಜ ಬೊಮ್ಮಾಯಿ, ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಮಾಜಿ ಸಚಿವರಾದ ಬಿ. ಶ್ರೀರಾಮುಲು ಮತ್ತು ಜಿ. ಜನಾರ್ದನ ರೆಡ್ಡಿ ಸೇರಿದಂತೆ ಹಲವು ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ.
MUST WATCH : ಹಗಲು-ರಾತ್ರಿ ಮರಳು ಸಾಗಾಟ – ಕಣ್ಮುಚ್ಚಿ ಕುಳಿತ್ರಾ ಅಧಿಕಾರಿಗಳು

