
Tumakuru : 30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ
ಪೌತಿ ಖಾತೆ ಮಾಡಿಕೊಡಲು ಲಂಚ ಸ್ವೀಕರಿಸುತ್ತಿದ್ದ ಕಂದಾಯ ನಿರೀಕ್ಷಕರೊಬ್ಬರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ನಡೆದಿದೆ. ಮಧುಗಿರಿ ಕಸಬಾ ಕಂದಾಯ ನಿರೀಕ್ಷಕ ನಾಗೇಶ್ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಅಧಿಕಾರಿ ಎಂದು ಗುರುತಿಸಲಾಗಿದೆ.
₹1 ಲಕ್ಷ ಲಂಚಕ್ಕೆ ಬೇಡಿಕೆ!
ಮುದ್ದೇನಹಳ್ಳಿ ಗ್ರಾಮದ ರೇಣುಕೇಶ್ ಅವರು ಪೌತಿ ಖಾತೆ ಮಾಡಿಸಿಕೊಳ್ಳಲು ಅರ್ಜಿ ಸಲ್ಲಿಸಿದ್ದರು. ಈ ವೇಳೆ ಕಂದಾಯ ನಿರೀಕ್ಷಕ ನಾಗೇಶ್ ಅವರು ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಅದರಂತೆ ಮೊದಲ ಕಂತಿನಲ್ಲಿ ₹35 ಸಾವಿರ ಹಣವನ್ನು ನೀಡಲಾಗಿತ್ತು. ಎರಡನೇ ಕಂತಿನ 30 ಸಾವಿರ ರೂ. ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
READ THIS : ಲಂಚ ಸ್ವೀಕರಿಸುತ್ತಿರುವಾಗ ಲೋಕಾಯುಕ್ತ ಬಲೆಗೆ ಬಿದ್ದ ಆಹಾರ ನಿರೀಕ್ಷಕ

Tumakuru – ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ
ಲೋಕಾಯುಕ್ತ ಎಸ್ಪಿ ಮಲ್ಲೇಶ್ ಅವರ ನೇತೃತ್ವದಲ್ಲಿ ಪಿಐಗಳಾದ ರಾಜು, ನಿರ್ಮಲಾದೇವಿ ಹಾಗೂ ಶಾಂತಿನಾಥ್ ಹೊನ್ನೂರು ಸೇರಿದಂತೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.
MUST WATCH : ಚಿತ್ರದುರ್ಗ ಎಸ್ಪಿ ಮೇಲೆ ಪಪ್ಪಿ ಗರಂ – ಕಾರು ತಡೆದಿದ್ದಕ್ಕೆ ಶಾಸಕನ ಆಕ್ರೋಶ




