ಡಿಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದ ರಿಷಬ್ ಶೆಟ್ಟಿ; CM ಜೊತೆ ಮಹತ್ವದ ಚರ್ಚೆ ನಡೆಸಿದ ನಟ

ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಅವರು ಇಂದು ಬೆಳಿಗ್ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಭೇಟಿ ಮಾಡಿ ಕೆಲಕಾಲ ಮಹತ್ವದ ವಿಷಯಗಳ ಕುರಿತು ಸಮಾಲೋಚನೆ ನಡೆಸಿದರು.
ಪ್ರವಾಸೋದ್ಯಮದ ಬ್ರಾಂಡ್ ಅಂಬಾಸಿಡರ್ ಆದ ರಿಷಬ್ ಶೆಟ್ಟಿ
ಇತ್ತೀಚೆಗೆ ವಿಧಾನಸೌಧದಲ್ಲಿ CM ಅಧ್ಯಕ್ಷತೆಯಲ್ಲಿ ನಡೆದ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಸಭೆಯಲ್ಲಿ, ಕರಾವಳಿ ಹಾಗೂ ಮಲೆನಾಡು ಭಾಗದ ಪ್ರವಾಸೋದ್ಯಮದ ಬ್ರಾಂಡ್ ಅಂಬಾಸಿಡರ್ ಆಗಿ ರಿಷಬ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿತ್ತು.
ಇದನ್ನು ಓದಿ : ರಾಜ್ಯ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಕರಾವಳಿ ಭಾಗದಲ್ಲಿ ಕ್ಯಾಬಿನೆಟ್ ಸಭೆ
ಸಭೆಯಲ್ಲಿ ಕರಾವಳಿ ಭಾಗದ ಶಾಸಕರು, ಉದ್ಯಮಿಗಳು ಹಾಗೂ ವಿವಿಧ ಕ್ಷೇತ್ರಗಳ ಪ್ರತಿನಿಧಿಗಳು ಭಾಗವಹಿಸಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದ ಸಲಹೆಗಳನ್ನು ಸರ್ಕಾರದ ಮುಂದಿಟ್ಟಿದ್ದರು. ಇದೇ ವೇಳೆ, 15ರಿಂದ 20 ದಿನಗಳೊಳಗೆ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಸಿಎಂ ತಿಳಿಸಿದ್ದರು. ಜೊತೆಗೆ, ಸಿಆರ್ಝಡ್ (CRZ) ಮತ್ತು ಅರಣ್ಯ ಇಲಾಖೆಗೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳ ಕುರಿತು ಸಮಗ್ರ ವರದಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು.
ಸಿನಿಮಾ ಚಿತ್ರೀಕರಣ, ಜಾನಪದ ಕಲೆಗೆ ಪ್ರೋತ್ಸಾಹ – CM
ಪ್ರವಾಸೋದ್ಯಮ ಸಭೆಯಲ್ಲಿ ನಟ ರಿಷಬ್ ಶೆಟ್ಟಿ ಅವರು ಕರಾವಳಿಯ ಜಾನಪದ ಕಲೆ ಮತ್ತು ಸಂಗೀತಕ್ಕೆ ಸರ್ಕಾರ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದು ಮನವಿ ಮಾಡಿದ್ದರು. ಇದರೊಂದಿಗೆ, ಕರಾವಳಿ ಭಾಗದಲ್ಲಿ ಸಿನಿಮಾ ಚಿತ್ರೀಕರಣಕ್ಕೆ ಹೆಚ್ಚಿನ ಅನುಕೂಲ ಹಾಗೂ ರಿಯಾಯಿತಿಗಳನ್ನು ಕಲ್ಪಿಸಿಕೊಡುವುದರಿಂದ ಕೇರಳ, ಗೋವಾ ಮತ್ತು ಕರ್ನಾಟಕದ ಸಿನಿಮಾ ಜಗತ್ತಿನ ಅಭಿವೃದ್ಧಿಗೆ ದೊಡ್ಡ ಮಟ್ಟದಲ್ಲಿ ಅನುಕೂಲವಾಗಲಿದೆ ಎಂದು ಸರ್ಕಾರದ ಗಮನ ಸೆಳೆದಿದ್ದರು.

ಇದನ್ನು ನೋಡಿ : ಕಂದಾಯ ನೌಕರರ ಸಂಧಾನ ಸಭೆ ವೇಳೆ ಕುಸಿದುಬಿದ್ದ ತಹಶೀಲ್ದಾರ್ RAJESHWARI




