ತಲ್ವಾರ್ ಹಿಡಿದು Rowdysheeter ದಾಂಧಲೆ – ಬಾರ್ ಬಂದ್ ಮಾಡುವಂತೆ ಬೆದರಿಕೆ

ಮಂಗಳೂರು ನಗರ ಹೊರವಲಯದ ಉಳ್ಳಾಲದಲ್ಲಿ ತಡರಾತ್ರಿ Rowdysheeter ಒಬ್ಬ ತಲ್ವಾರ್ ಹಿಡಿದು ಅಟ್ಟಹಾಸ ಮೆರೆದಿದ್ದಾನೆ. ಉಳ್ಳಾಲದ ಬಾರ್ವೊಂದರ ಬಳಿ ಈ ಘಟನೆ ನಡೆದಿದ್ದು, ರೌಡಿಶೀಟರ್ ಶಾಕಿರ್ ಕೈಯಲ್ಲಿ ತಲ್ವಾರ್ ಹಿಡಿದು ಭಯಭೀತಗೊಳಿಸಿದ್ದಾನೆ.
ಇದನ್ನು ಓದಿ : ರೌಡಿಶೀಟರ್ ಹತ್ಯೆ ಕೇಸ್ – ಐವರು ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು
ಪ್ರಕರಣ ದಾಖಲು – ತನಿಖೆ ಆರಂಭ
ಕೈಯಲ್ಲಿ ಮಾರಕಾಸ್ತ್ರ ಹಿಡಿದು ಓಡಾಡಿದ ಪರಿಣಾಮ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಲ್ದೇ ಕೈಯಲ್ಲಿ ತಲ್ವಾರ್ ಹಿಡಿದು ಶಾಕಿರ್ ಅಲೆದಾಡಿರುವ ದೃಶ್ಯ ಬಾರ್ನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನೆ ಕುರಿತು ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ
ಘಟನೆಗೆ ಸಂಬಂಧಿಸಿದಂತೆ ರೌಡಿಶೀಟರ್ ಶಾಕಿರ್ ಸೇರಿದಂತೆ ಇಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದು, ಸಿಸಿ ಕ್ಯಾಮೆರಾ ದೃಶ್ಯ ಹಾಗೂ ಇತರ ಮಾಹಿತಿಗಳ ಆಧಾರದ ಮೇಲೆ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ..
ಇದನ್ನು ನೋಡಿ : ತುಮಕೂರಿಗರಿಗೆ ಬೀದಿನಾಯಿ ಕಾಟ-ರಸ್ತೆಗಿಳಿದ್ರೆ ನಾಯಿಗಳ ಅಟ್ಯಾಕ್ ಭೀತಿ.!





