ಶಿವಮೊಗ್ಗದಲ್ಲಿ ರೌಡಿಶೀಟರ್ ಬರ್ಬರ Murder ಕೇಸ್ – ಪೊಲೀಸ್ ಮೇಲೆ ಹಲ್ಲೆಗೆ ಮುಂದಾಗಿದ್ದ ಆರೋಪಿ ಕಾಲಿಗೆ ಗುಂಡೇಟು

ಕಳೆದ ಮೂರು ದಿನದ ಹಿಂದೆ ಶಿವಮೊಗ್ಗ ನಗರದಲ್ಲಿ ಮನೆಗೆ ನುಗ್ಗಿ ರೌಡಿಶೀಟರ್ನನ್ನು ಆರೋಪಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ರು. ರೌಡಿಶೀಟರ್ ಹತ್ಯೆಯಿಂದ ಇಡೀ ಶಿವಮೊಗ್ಗ ನಗರವೇ ಬೆಚ್ಚಿಬಿದ್ದಿತ್ತು.
ಇನ್ನು ಈ ಸಂಬಂಧ ಶಿವಮೊಗ್ಗ ನಗರದ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕೆಲವೇ ಗಂಟೆಗಲ್ಲಿ ಆರೋಪಿಗಳನ್ನು ಯಶಸ್ವಿಯಾಗಿ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ರು.

ಕೇವಲ 24 ಗಂಟೆಗಳಲ್ಲಿ ಕೊಲೆ ಆರೋಪಿಗಳು ಅಂದರ್
ಶಿವಮೊಗ್ಗ ನಗರದ ಗಾಂಧಿಬಜಾರ್ ಸಮೀಪದಲ್ಲಿ ರೌಡಿಶೀಟರ್ ನರಸಿಂಹನ ಕೊಲೆ ಪ್ರಕರಣ ಸಂಬಂಧ ಶಿವಮೊಗ್ಗ ಹೆಚ್ಚುವರಿ ಎಸ್ಪಿ ನೇತೃತ್ವದ ವಿಶೇಷ ತಂಡವನ್ನು ರಚನೆ ಮಾಡಿ ಫೀಲ್ಡ್ಗೆ ಇಳಿದಿದ್ದು, ಕೇವಲ 24 ಗಂಟೆಗಳಲ್ಲಿ ಕಾರ್ಯಾಚರಣೆ ನಡೆಸಿ ಅಂಬು ಅನಿಲ್, ಮಧು, ರವಿ, ಕತ್ತೆ ಕಾರ್ತಿಕ್ ಹಾಗೂ ಶಬರೀಶ್ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ.
ಇದನ್ನು ಓದಿ : ಪ್ರೀತಿ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದು ಪ್ರೇಯಸಿಯ ಕೊಲೆ

ಪೊಲೀಸ್ ಮೇಲೆ ಹಲ್ಲೆಗೆ ಮುಂದಾಗಿದ್ದ ಆರೋಪಿ ಕಾಲಿಗೆ ಗುಂಡೇಟು
ಇನ್ನು ಬಂಧಿತ ಆರೋಪಿಗಳನ್ನು ಸ್ಥಳ ಮಹಜರಿಗೆ ಕರೆದೊಯ್ಯುವ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಆರೋಪಿ ಹಲ್ಲೆ ಮಾಡಲು ಮುಂದಾಗಿದ್ದು, ಈ ವೇಳೆ ಹಲ್ಲೆ ಮಾಡದಂತೆ ಆರೋಪಿಗೆ ಇನ್ಸ್ಪೆಕ್ಟರ್ ವಾರ್ನ್ ಮಾಡಿದ್ರು. ಅಲ್ದೇ ಏರ್ ಫೈರ್ ಮಾಡಿ, ಆರೋಪಿ ಮಧುಗೆ ಎಚ್ಚರಿಕೆಯನ್ನು ಕೂಡ ಕೊಡಲಾಗಿತ್ತು.
ಆದ್ರೆ ಮಾತು ಕೇಳದ ಆರೋಪಿ ಮಧು ಕಾಲಿಗೆ ಕೋಟೆ ಠಾಣೆ ಇನ್ಸ್ಪೆಕ್ಟರ್ ಹರೀಶ್ ಪಟೇಲ್ ಪೈರ್ ಮಾಡಿ ಬುದ್ಧಿ ಕಲಿಸಿದ್ರು. ಇನ್ನು ಗುಂಡೇಟಿನಿಂದ ಗಾಯಗೊಂಡಿದ್ದ ಆರೋಪಿ ಮಧುನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗಿದೆ.

Murder ಪ್ರಕರಣವನ್ನು ಬೇಧಿಸಿದ ಪೊಲೀಸರ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ
ಮೆಗ್ಗಾನ್ ಆಸ್ಪತ್ರೆಗೆ ಎಎಸ್ಪಿ ಕಾರಿಯಪ್ಪ ಹಾಗೂ ಬಿ.ನಿಖಿಲ್ ಭೇಟಿ ನೀಡಿ ಆರೋಪಿ ಆರೋಗ್ಯವನ್ನು ವಿಚಾರಿಸಿದ್ರು. ಈ ವೇಳೆ ಮಾತನಾಡಿದ ಎಸ್ಪಿ ಪ್ರಕರಣದ ತನಿಖೆ ಬಗ್ಗೆ ಮಾಹಿತಿ ನೀಡಿದ್ರು.
ಶಿವಮೊಗ್ಗ ನಗರದಲ್ಲಿ ರೌಡಿಶೀಟರ್ನ ಬರ್ಬರ ಕೊಲೆ ಪ್ರಕರಣವನ್ನು ಬೇಧಿಸಿದ ಪೊಲೀಸರು 24 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿದ್ದು ಪೊಲೀಸರ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗ್ತಿದೆ.

ಇದನ್ನು ನೋಡಿ : ಸುದ್ದಿ ಮಾಡಿದ ಕೆಲವೇ ಗಂಟೆಗಳಲ್ಲಿ ಬಿಗ್ ಇಂಫ್ಯಾಕ್ಟ್ -ಪ್ರಜಾಶಕ್ತಿ ಟಿವಿ ಅಭಿಯಾನಕ್ಕೆ ಭರ್ಜರಿ ರೆಸ್ಪಾನ್ಸ್




