RRB Recruitment : ರೈಲ್ವೆ ಇಲಾಖೆಯಲ್ಲಿ ಉದ್ಯೋಗಾವಕಾಶ – 6,565 ಟೆಕ್ನೀಷಿಯನ್ ಹುದ್ದೆಗೆ ಅರ್ಜಿ ಆಹ್ವಾನ

RRB Recruitment : ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ದೇಶದ ಯುವಕ – ಯುವತಿಯರಿಗೆ ಭಾರತೀಯ ರೈಲ್ವೆ ಇಲಾಖೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಕೇಂದ್ರ ರೈಲ್ವೆ ಸಚಿವಾಲಯದ ಅಧೀನದಲ್ಲಿರುವ ರೈಲ್ವೆ ನೇಮಕಾತಿ ಮಂಡಳಿಯು (RRB) ದೇಶದ ವಿವಿಧ ರೈಲ್ವೆ ವಲಯಗಳಲ್ಲಿ ಖಾಲಿ ಇರುವ ಒಟ್ಟು 6,565 ಟೆಕ್ನೀಷಿಯನ್ ಹುದ್ದೆಗಳ ಭರ್ತಿಗೆ ಸಂಕ್ಷಿಪ್ತ ಅಧಿಸೂಚನೆ ಪ್ರಕಟಿಸಿದೆ.
ಬೆಂಗಳೂರು ಸೇರಿದಂತೆ ಪ್ರಮುಖ ರೈಲ್ವೆ ವಲಯಗಳಲ್ಲಿ ನೇಮಕಾತಿ
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜೂನ್ 30, 2026ರಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಜುಲೈ 29, 2026 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಕರ್ನಾಟಕದ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ರೈಲ್ವೆ ವಲಯಗಳಲ್ಲಿ ನೇಮಕಾತಿ ನಡೆಯಲಿದೆ.
ಹುದ್ದೆಗಳ ವಿವರ
ರೈಲ್ವೆ ನೇಮಕಾತಿ ಮಂಡಳಿಯು ಎರಡು ವಿಭಾಗಗಳಲ್ಲಿ ಹುದ್ದೆಗಳನ್ನು ಭರ್ತಿ ಮಾಡಲಿದೆ.
- ಟೆಕ್ನೀಷಿಯನ್ ಗ್ರೇಡ್-1 (ಸಿಗ್ನಲ್) – 323 ಹುದ್ದೆಗಳು
- ಮಾಸಿಕ ವೇತನ: ₹29,200
- ಟೆಕ್ನೀಷಿಯನ್ ಗ್ರೇಡ್-3 – 6,242 ಹುದ್ದೆಗಳು
- ಮಾಸಿಕ ವೇತನ: ₹19,900
ವಯೋಮಿತಿ
- ಟೆಕ್ನೀಷಿಯನ್ ಗ್ರೇಡ್-1: 18 ರಿಂದ 33 ವರ್ಷ
- ಟೆಕ್ನೀಷಿಯನ್ ಗ್ರೇಡ್-3: 18 ರಿಂದ 30 ವರ್ಷ
ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.
ಇದನ್ನು ಓದಿ : ಉತ್ತರ ರೈಲ್ವೆಯಿಂದ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ – 4,116 ಹುದ್ದೆಗಳಿಗೆ ಅರ್ಜಿ ಆಹ್ವಾನ

ಶೈಕ್ಷಣಿಕ ಅರ್ಹತೆ
ಟೆಕ್ನೀಷಿಯನ್ ಗ್ರೇಡ್-3:
- ಎಸ್ಎಸ್ಎಲ್ಸಿ (10ನೇ ತರಗತಿ) ಉತ್ತೀರ್ಣರಾಗಿರಬೇಕು.
- ಸಂಬಂಧಿತ ಟ್ರೇಡ್ನಲ್ಲಿ ಐಟಿಐ ಪ್ರಮಾಣಪತ್ರ ಅಥವಾ ಡಿಪ್ಲೊಮಾ ಹೊಂದಿರಬೇಕು.
ಟೆಕ್ನೀಷಿಯನ್ ಗ್ರೇಡ್-1 (ಸಿಗ್ನಲ್):
- ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎಸ್ಸಿ (B.Sc) ಪದವಿ ಅಥವಾ
- ಇಂಜಿನಿಯರಿಂಗ್ ಡಿಪ್ಲೊಮಾ/ಪದವಿ ಪಡೆದಿರಬೇಕು.
ಆಯ್ಕೆ ಪ್ರಕ್ರಿಯೆ
ಅಭ್ಯರ್ಥಿಗಳ ಆಯ್ಕೆ ಮೂರು ಹಂತಗಳಲ್ಲಿ ನಡೆಯಲಿದೆ.
- ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT)
- ದಾಖಲೆಗಳ ಪರಿಶೀಲನೆ (Document Verification)
- ವೈದ್ಯಕೀಯ ಪರೀಕ್ಷೆ (Medical Examination)
ಈ ಮೂರು ಹಂತಗಳಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ನೇಮಕಾತಿ ನೀಡಲಾಗುತ್ತದೆ.
ಜೂನ್ 30ಕ್ಕೆ ಸಂಪೂರ್ಣ ಅಧಿಸೂಚನೆ
ಪ್ರಸ್ತುತ ರೈಲ್ವೆ ಮಂಡಳಿ ಸಂಕ್ಷಿಪ್ತ ಅಧಿಸೂಚನೆ ಬಿಡುಗಡೆ ಮಾಡಿದ್ದು, ಪರೀಕ್ಷಾ ಪಠ್ಯಕ್ರಮ, ಅರ್ಜಿ ಶುಲ್ಕ, ವಲಯವಾರು ಹುದ್ದೆಗಳ ವಿವರ ಹಾಗೂ ಇತರೆ ಮಾಹಿತಿಗಳನ್ನು ಒಳಗೊಂಡ ಸಂಪೂರ್ಣ ಅಧಿಸೂಚನೆ ಜೂನ್ 30, 2026ರಂದು ಪ್ರಕಟವಾಗಲಿದೆ.

ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು
ಆಸಕ್ತ ಅಭ್ಯರ್ಥಿಗಳು ರೈಲ್ವೆ ಮಂಡಳಿಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಜೂನ್ 30 ರಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇದನ್ನು ನೋಡಿ : ತುಮಕೂರಿಗರೇ ಹುಷಾರ್.. ಹುಷಾರ್ – WORK FROM HOME JOBಗೆ ಜಾಯಿನ್ ಆಗೋ ಮುನ್ನ ಈ ಸ್ಟೋರಿ ನೋಡಿ?




