ನಟಿ Rukmini Vasanth ಅವರ ನಕಲಿ ಬಿಕಿನಿ ವಿಡಿಯೋ ಮತ್ತು ಫೋಟೋಗಳನ್ನು ಸೋಶಿಯಲ್ ಮಿಡಿಯಾಗಳಲ್ಲಿ ವೈರಲ್ ಮಾಡಿದ ಕಿಡಿಗೇಡಿಗಳಿಗೆ ನಡುಕು ಶುರುವಾಗಿದೆ.

ಸ್ಯಾಂಡಲ್ವುಡ್ ನಟಿ ರುಕ್ಮಿಣಿ ವಸಂತ್ ಅವರ ನಕಲಿ ಬಿಕಿನಿ ಫೋಟೋ ಹಾಗೂ ವಿಡಿಯೋಗಳನ್ನು ಸೋಶಿಯಲ್ ಮಿಡಿಯಾಗಳಲ್ಲಿ ವೈರಲ್ ಮಾಡಿದ ಕಿಡಿಗೇಡಿಗಳ ವಿರುದ್ಧ ಸೈಬರ್ ಕ್ರೈಮ್ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಕೃತಕ ಬುದ್ಧಿಮತ್ತೆ (AI) ಮತ್ತು ಡೀಪ್ಫೇಕ್ ತಂತ್ರಜ್ಞಾನದ ದುರ್ಬಳಕೆ ಮೂಲಕ ತಮ್ಮ ಚಾರಿತ್ರ್ಯ ಹರಣಕ್ಕೆ ಯತ್ನಿಸಲಾಗಿದೆ ಎಂದು ನಟಿ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಡೀಪ್ಫೇಕ್ ವಿಡಿಯೋ ಹಂಚಿಕೊಂಡವರಿಗೆ ನಡುಕ
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ರುಕ್ಮಿಣಿ ವಸಂತ್ ಹೆಸರಿನಲ್ಲಿ ಅಶ್ಲೀಲ ವಿಡಿಯೋವೊಂದು ವ್ಯಾಪಕವಾಗಿ ಹರಿದಾಡುತ್ತಿತ್ತು.
ತನಿಖೆಯ ವೇಳೆ ಅದು ಬೇರೊಬ್ಬರ ದೇಹಕ್ಕೆ ತಂತ್ರಜ್ಞಾನದ ಸಹಾಯದಿಂದ ನಟಿಯ ಮುಖವನ್ನು ಜೋಡಿಸಿ ಸೃಷ್ಟಿಸಲಾದ ಡೀಪ್ಫೇಕ್ ವಿಡಿಯೋ ಎಂಬುದು ಬೆಳಕಿಗೆ ಬಂದಿದೆ. ಈ ಕೃತ್ಯದಿಂದ ತೀವ್ರ ಮಾನಸಿಕ ಹಿಂಸೆ ಮತ್ತು ಮುಜುಗರ ಅನುಭವಿಸಿರುವುದಾಗಿ ನಟಿ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

29 ಖಾತೆಗಳ ವಿರುದ್ಧ FIR
ನಟಿ ನೀಡಿದ ದೂರಿನ ಆಧಾರದ ಮೇಲೆ ತನಿಖೆ ಆರಂಭಿಸಿರುವ ಸೈಬರ್ ಪೊಲೀಸರು, ವಿಡಿಯೋ ಹಂಚಿಕೊಂಡು ವೈರಲ್ ಮಾಡಿದ 29 ಸಾಮಾಜಿಕ ಜಾಲತಾಣ ಖಾತೆಗಳನ್ನು ಗುರುತಿಸಿ ಪ್ರಕರಣ ದಾಖಲಿಸಿದ್ದಾರೆ. ಇದರಲ್ಲಿ 9 ಇನ್ಸ್ಟಾಗ್ರಾಂ ಖಾತೆಗಳು, 14 ಎಕ್ಸ್ (ಹಿಂದಿನ ಟ್ವಿಟರ್) ಖಾತೆಗಳು ಹಾಗೂ 6 ಫೇಸ್ಬುಕ್ ಪೇಜ್ಗಳು ಸೇರಿವೆ.
ಆರೋಪಿಗಳ ವಿರುದ್ಧ ಐಟಿ ಕಾಯ್ದೆಯ ಸೆಕ್ಷನ್ 66C ಮತ್ತು 66D ಸೇರಿದಂತೆ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 75(3), 79, 336, 356, 351, 352 ಮತ್ತು 294ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಇದನ್ನು ಓದಿ : ನಟಿ ರುಕ್ಮಿಣಿ ವಸಂತ್ ಹೆಸರಿನಲ್ಲಿ ನಕಲಿ ಕರೆ — ಸೈಬರ್ ಕಳ್ಳರ ಕಾಟ..!

ಚಿತ್ರರಂಗದಲ್ಲಿ ಹೆಚ್ಚುತ್ತಿರುವ ಡೀಪ್ಫೇಕ್ ಆತಂಕ
ಇತ್ತೀಚಿನ ದಿನಗಳಲ್ಲಿ AI ತಂತ್ರಜ್ಞಾನದ ದುರ್ಬಳಕೆ ಹೆಚ್ಚುತ್ತಿದ್ದು, ವಿಶೇಷವಾಗಿ ಸೆಲೆಬ್ರಿಟಿಗಳನ್ನು ಗುರಿಯಾಗಿಸಿಕೊಂಡು ಡೀಪ್ಫೇಕ್ ವಿಡಿಯೋ ಮತ್ತು ಫೋಟೋಗಳನ್ನು ಸೃಷ್ಟಿಸುವ ಪ್ರಕರಣಗಳು ಹೆಚ್ಚಾಗಿವೆ.
ಈ ಹಿಂದೆ ನಟಿ ರಶ್ಮಿಕಾ ಮಂದಣ್ಣ ಕೂಡ ಇದೇ ರೀತಿಯ ಡೀಪ್ಫೇಕ್ ವಿಡಿಯೋ ಪ್ರಕರಣಕ್ಕೆ ಒಳಗಾಗಿದ್ದು, ಆ ಪ್ರಕರಣದಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು.
ಇದಅಲ್ಲದೆ, ನಟಿ ರಮ್ಯಾ ಹಾಗೂ ವಿಜಯಲಕ್ಷ್ಮಿ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಸಂದೇಶಗಳು ಮತ್ತು ಕಾಮೆಂಟ್ಗಳನ್ನು ಪೋಸ್ಟ್ ಮಾಡಿದವರ ವಿರುದ್ಧವೂ ಕಾನೂನು ಕ್ರಮ ಜರುಗಿಸಲಾಗಿತ್ತು.

AI ತಂತ್ರಜ್ಞಾನದ ದೊಡ್ಡ ಅಪಾಯ
“ಇದು ಕೇವಲ ಒಬ್ಬ ನಟಿಯ ಸಮಸ್ಯೆಯಲ್ಲ, ಇಡೀ ಸಮಾಜ ಮತ್ತು ಮಹಿಳೆಯರ ಸುರಕ್ಷತೆಗೆ ಎದುರಾಗಿರುವ ಎಐ ತಂತ್ರಜ್ಞಾನದ ದೊಡ್ಡ ಅಪಾಯ” ಎಂದು ಚಿತ್ರರಂಗದ ಪ್ರಮುಖರು ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನು ನೋಡಿ : SARAVANA BHAVANನಲ್ಲಿ ತಿಂಡಿ ಸವಿದ SIDDU – SIDDARAMAIAHಗೆ ಸಾಥ್ ನೀಡಿದ JARAKIHOLI




