ಸದಾಶಿವ ದೇಶಿಂಗೆ ಕಾಂಗ್ರೆಸ್ ತೊರೆದು BJP ಗೆ ಸೇರ್ಪಡೆ

ಕಾಂಗ್ರೆಸ್ ಪಕ್ಷದ ಸಚಿವ ಸತೀಶ್ ಜಾರಕಿಹೊಳಿ ಆಪ್ತ ಸದಾಶಿವ ದೇಶಿಂಗೆ ಇಂದು ಬೆಂಗಳೂರಿನ ಮಲ್ಲೇಶ್ವರಂ ರಾಜ್ಯ ಬಿಜೆಪಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.
ಇದನ್ನು ಓದಿ : DK ಶಿವಕುಮಾರ್ ಜತೆಗಿನ ಮಾತುಕತೆ ರಹಸ್ಯ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ

BJP ರಾಜ್ಯ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ
ಮಲ್ಲೇಶ್ವರಂನ ಬಿಜೆಪಿ ರಾಜ್ಯ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬಿಜೆಪಿ ಶಾಸಕರಾದ ದುರ್ಯೋಧನ ಐಹೊಳೆ, ಬಸವರಾಜ ಮತ್ತಿಮೂಡ, ಭೈರತಿ ಬಸವರಾಜ, ಪಿ. ರಾಜು ಸೇರಿದಂತೆ ಪಕ್ಷದ ಹಲವು ಮುಖಂಡರು ಉಪಸ್ಥಿತರಿದ್ದರು.
ಚರ್ಚೆಗೆ ಗ್ರಾಸ
ಸದಾಶಿವ ದೇಶಿಂಗೆ ಅವರ ಕಾಂಗ್ರೆಸ್ ಪಕ್ಷ ತೊರೆದು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಇದನ್ನು ನೋಡಿ : TEMPO ಡಿಕ್ಕಿ ಹೊಡೆದು ಸರಣಿ ಅಪಘಾ* – ಚಾಲಕ ಗಂಭೀರ, 13 ಮಂದಿಗೆ ಗಾಯ




