SBI PO Recruitment 2026 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 1,500 ಹುದ್ದೆಗೆ ಅರ್ಜಿ ಆಹ್ವಾನ.

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಯುವಜನತೆಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಭರ್ಜರಿ ಸಿಹಿ ಸುದ್ದಿ ನೀಡಿದೆ. ಎಸ್ಬಿಐನಲ್ಲಿ 1500 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಿದೆ.
1,500 ಹುದ್ದೆಗೆ ಅರ್ಜಿ ಆಹ್ವಾನ
ದೇಶದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ SBI , ಒಟ್ಟು 1500 ಪ್ರೊಬೇಷನರಿ ಆಫೀಸರ್ ಅಥವಾ ಪಿಒ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂನ್ 18ರಿಂದ ಆರಂಭವಾಗಿದ್ದು, ಜುಲೈ 8ರವರೆಗೆ ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
- ಸಾಮಾನ್ಯ ವರ್ಗ – 588
- ಒಬಿಸಿ – 390
- ಎಸ್ಸಿ – 234
- ಎಸ್ಟಿ – 144
- ಇಡಬ್ಲ್ಯೂಎಸ್ – 144

ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಅಂತಿಮ ವರ್ಷದ ಅಥವಾ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು.
ಆದರೆ ಸೆಪ್ಟೆಂಬರ್ 30, 2026ರೊಳಗೆ ಪದವಿ ಪೂರ್ಣಗೊಳಿಸಿರುವ ದಾಖಲೆ ಸಲ್ಲಿಸುವುದು ಕಡ್ಡಾಯವಾಗಿದೆ.
ಆಯ್ಕೆ ಪ್ರಕ್ರಿಯೆ ಮೂರು ಹಂತಗಳಲ್ಲಿ ನಡೆಯಲಿದೆ. ಮೊದಲ ಹಂತದಲ್ಲಿ ಪ್ರಾಥಮಿಕ ಪರೀಕ್ಷೆ, ಎರಡನೇ ಹಂತದಲ್ಲಿ ಮುಖ್ಯ ಪರೀಕ್ಷೆ ಹಾಗೂ ಅಂತಿಮವಾಗಿ ಸೈಕೋಮೆಟ್ರಿಕ್ ಪರೀಕ್ಷೆ, ಗುಂಪು ಚರ್ಚೆ ಮತ್ತು ವೈಯಕ್ತಿಕ ಸಂದರ್ಶನ ನಡೆಯಲಿದೆ.
ಆಯ್ಕೆ ಪ್ರಕ್ರಿಯೆ
- ಪ್ರಿಲಿಮಿನರಿ ಪರೀಕ್ಷೆ
- ಮೆನ್ಸ್ ಪರೀಕ್ಷೆ
- ಸೈಕೋಮೆಟ್ರಿಕ್ ಟೆಸ್ಟ್, ಗ್ರೂಪ್ ಎಕ್ಸರ್ಸೈಸ್ ಮತ್ತು ಇಂಟರ್ವ್ಯೂ
ಇದನ್ನು ಓದಿ : ಬೆಂಗಳೂರಿನ ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರಿಸ್ನಲ್ಲಿ ಉದ್ಯೋಗವಕಾಶ
ಆಕರ್ಷಕ ಸಂಬಳ
ಪ್ರಾಥಮಿಕ ಹಾಗೂ ಮುಖ್ಯ ಪರೀಕ್ಷೆಗಳಲ್ಲಿ ತಪ್ಪು ಉತ್ತರಗಳಿಗೆ ಋಣಾತ್ಮಕ ಅಂಕಗಳ ವ್ಯವಸ್ಥೆಯಿದ್ದು, ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದು ಭಾಗ ಅಂಕ ಕಡಿತಗೊಳ್ಳಲಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಆರಂಭಿಕ ಮೂಲ ವೇತನ 48 ಸಾವಿರದ 480 ರೂಪಾಯಿ ಇರಲಿದ್ದು, ವಿವಿಧ ಭತ್ಯೆಗಳನ್ನು ಸೇರಿಸಿ ವಾರ್ಷಿಕ ಸಿಟಿಸಿ ಸುಮಾರು 21 ಲಕ್ಷ 97 ಸಾವಿರ ರೂಪಾಯಿವರೆಗೆ ತಲುಪುವ ಸಾಧ್ಯತೆ ಇದೆ.

ಕೂಡಲೇ ಅರ್ಜಿ ಸಲ್ಲಿಸಿ
ಇನ್ನು ಸಾಮಾನ್ಯ, ಒಬಿಸಿ ಹಾಗೂ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ 750 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದ್ದು, ಎಸ್ಸಿ, ಎಸ್ಟಿ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಅರ್ಹ ಅಭ್ಯರ್ಥಿಗಳು ಎಸ್ಬಿಐ ಅಧಿಕೃತ ನೇಮಕಾತಿ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಕೊನೆಯ ದಿನಾಂಕದವರೆಗೆ ಕಾಯದೆ ಕೂಡಲೇ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಇದನ್ನು ನೋಡಿ : ತುಮಕೂರಲ್ಲಿ ಪೌತಿ ಖಾತಾ ಅಭಿಯಾನ 2.0 – ಹಳ್ಳಿಗಳಿಗೆ ಭೇಟಿ ನೀಡಿ ಸಮಸ್ಯೆ ಆಲಿಸಿದ DC





