SBI ನಲ್ಲಿ 1,538 ಜೂನಿಯರ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಆಹ್ವಾನ; ಪೂರ್ಣ ವಿವರ ಇಲ್ಲಿದೆ!

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಪಡೆಯಲು ಎದುರು ನೋಡುತ್ತಿರುವ ಅಭ್ಯರ್ಥಿಗಳಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಸಿಹಿಸುದ್ದಿ ನೀಡಿದೆ. ದೇಶಾದ್ಯಂತ ಜೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್ & ಸೇಲ್ಸ್) ಹುದ್ದೆಗಳನ್ನು ಭರ್ತಿ ಮಾಡಲು ವಿಶೇಷ ನೇಮಕಾತಿ ಅಭಿಯಾನ ಆರಂಭಿಸಿದೆ. ಈ ನೇಮಕಾತಿಯಲ್ಲಿ ಒಟ್ಟು 1,538 ಬ್ಯಾಕ್ಲಾಗ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಈ ಹುದ್ದೆಗಳು ಎಸ್ಸಿ, ಎಸ್ಟಿ ಮತ್ತು ಒಬಿಸಿ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಮೀಸಲಾಗಿವೆ. ಹುದ್ದೆಗಳ ಪೈಕಿ ಎಸ್ಟಿ ಅಭ್ಯರ್ಥಿಗಳಿಗೆ 1,219, ಎಸ್ಸಿ ಅಭ್ಯರ್ಥಿಗಳಿಗೆ 207 ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 112 ಹುದ್ದೆಗಳು ಮೀಸಲಾಗಿವೆ.
ವಿದ್ಯಾರ್ಹತೆ ಏನು?
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಶಿಕ್ಷಣ ಸಂಸ್ಥೆಯಿಂದ ಯಾವುದೇ ವಿಭಾಗದಲ್ಲಿ ಪದವಿ ಪಡೆದಿರಬೇಕು. ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳೂ ಅರ್ಜಿ ಸಲ್ಲಿಸಬಹುದು. ಆದರೆ, ಅಧಿಸೂಚನೆಯಲ್ಲಿ ನಿಗದಿಪಡಿಸಿರುವ ಗಡುವಿನೊಳಗೆ ಪದವಿ ಪೂರ್ಣಗೊಳಿಸಿರುವುದಕ್ಕೆ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು.
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ರಾಜ್ಯಕ್ಕೆ ಸಂಬಂಧಿಸಿದ ಸ್ಥಳೀಯ ಭಾಷೆಯನ್ನು ಓದಲು, ಬರೆಯಲು ಮತ್ತು ಮಾತನಾಡಲು ಬರಬೇಕು.

ವಯೋಮಿತಿ
ಅಭ್ಯರ್ಥಿಗಳ ವಯಸ್ಸನ್ನು ಏಪ್ರಿಲ್ 1, 2026ರ ಆಧಾರದ ಮೇಲೆ ಪರಿಗಣಿಸಲಾಗುತ್ತದೆ. ಕನಿಷ್ಠ ವಯಸ್ಸು 20 ವರ್ಷ ಹಾಗೂ ಗರಿಷ್ಠ 28 ವರ್ಷವಾಗಿರಬೇಕು. ಎಸ್ಸಿ, ಎಸ್ಟಿ, ಒಬಿಸಿ ಸೇರಿದಂತೆ ಮೀಸಲಾತಿ ವರ್ಗಗಳ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಗಳಂತೆ ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
ಇದನ್ನು ಓದಿ : SBI ನಲ್ಲಿ 1576 ಬೃಹತ್ ಹುದ್ದೆಗಳಿಗೆ ಭರ್ಜರಿ ನೇಮಕಾತಿ!
ವೇತನ ಎಷ್ಟು?
ಜೂನಿಯರ್ ಅಸೋಸಿಯೇಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಬ್ಯಾಂಕ್ನ ನಿಯಮಾನುಸಾರ ವೇತನ ಮತ್ತು ಇತರ ಸೌಲಭ್ಯಗಳು ದೊರೆಯಲಿವೆ. ನೀಡಿರುವ ಮಾಹಿತಿಯ ಪ್ರಕಾರ ವೇತನ ಶ್ರೇಣಿ ರೂ.26,730ರಿಂದ ರೂ.46,000ರವರೆಗೆ ಇರಲಿದೆ.
ಅರ್ಜಿ ಶುಲ್ಕ
ಸಾಮಾನ್ಯ, EWS ಮತ್ತು OBC ಅಭ್ಯರ್ಥಿಗಳು ರೂ.750 ಅರ್ಜಿ ಶುಲ್ಕ ಪಾವತಿಸಬೇಕು. SC, ST ಹಾಗೂ ದಿವ್ಯಾಂಗ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಶುಲ್ಕ ಪಾವತಿಯನ್ನು ಆನ್ಲೈನ್ ಮೂಲಕ ಮಾಡಬಹುದು.

ಆಯ್ಕೆ ಪ್ರಕ್ರಿಯೆ
ಅಭ್ಯರ್ಥಿಗಳ ಆಯ್ಕೆ ಹಲವು ಹಂತಗಳಲ್ಲಿ ನಡೆಯಲಿದೆ. ಮೊದಲಿಗೆ ಆನ್ಲೈನ್ ಪೂರ್ವಭಾವಿ ಪರೀಕ್ಷೆ (Prelims) ನಡೆಯಲಿದ್ದು, ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಮುಖ್ಯ ಪರೀಕ್ಷೆ (Mains) ನಡೆಸಲಾಗುತ್ತದೆ. ಬಳಿಕ ಸ್ಥಳೀಯ ಭಾಷಾ ಪ್ರಾವೀಣ್ಯತೆಯನ್ನು ಪರಿಶೀಲಿಸಲು Local Language Proficiency Test (LLPT) ನಡೆಯಲಿದೆ.
ಪ್ರಮುಖ ದಿನಾಂಕಗಳು
- ಅರ್ಜಿ ಆರಂಭ: ಆಗಸ್ಟ್ 7, 2026
- ಅರ್ಜಿ ಸಲ್ಲಿಸಲು ಕೊನೆಯ ದಿನ: ಆಗಸ್ಟ್ 27, 2026
- Prelims: ಸೆಪ್ಟೆಂಬರ್ 2026ರಲ್ಲಿ ನಡೆಯುವ ಸಾಧ್ಯತೆ
- Mains: ಅಕ್ಟೋಬರ್ ಅಥವಾ ನವೆಂಬರ್ 2026ರಲ್ಲಿ ನಡೆಯುವ ಸಾಧ್ಯತೆ
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ಅಭ್ಯರ್ಥಿಗಳು SBIಯ ಅಧಿಕೃತ ನೇಮಕಾತಿ ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮುನ್ನ ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ವಿದ್ಯಾರ್ಹತೆ, ವಯೋಮಿತಿ, ರಾಜ್ಯವಾರು ಹುದ್ದೆಗಳ ವಿವರ, ಸ್ಥಳೀಯ ಭಾಷೆ ಹಾಗೂ ಇತರ ಷರತ್ತುಗಳನ್ನು ಪರಿಶೀಲಿಸುವುದು ಮುಖ್ಯ.

ಅಭ್ಯರ್ಥಿಗಳು ಆಗಸ್ಟ್ 27, 2026ರೊಳಗೆ ಅರ್ಜಿ ಸಲ್ಲಿಸಬೇಕು. ಪರೀಕ್ಷಾ ದಿನಾಂಕ ಸೇರಿದಂತೆ ನೇಮಕಾತಿಗೆ ಸಂಬಂಧಿಸಿದ ಯಾವುದೇ ಬದಲಾವಣೆ ಅಥವಾ ಹೊಸ ಮಾಹಿತಿಗಾಗಿ SBIಯ ಅಧಿಕೃತ ವೆಬ್ಸೈಟ್ ಪರಿಶೀಲಿಸುವುದು ಸೂಕ್ತ.
ಇದನ್ನು ನೋಡಿ : ರಾಸಾಯನಿಕ ತ್ಯಾಜ್ಯ ಹಳ್ಳಕ್ಕೆ ಹರಿವು – ಕೈಗಾರಿಕಾ ಪ್ರದೇಶದ 4 ಕಂಪನಿಗಳು ಸೀಜ್ .!




