Shamanur Shivashankarappa : ಕಾಂಗ್ರೆಸ್ನ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ .. ವಯೋಸಹಜ ಕಾಯಿಲೆಯಿಂದ ಅಗಲಿದ ಶಾಸಕ, ಗಣ್ಯರ ಸಂತಾಪ..

Shamanur Shivashankarappa : ದಾವಣಗೆರೆದ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಅನಾರೋಗ್ಯದಿಂದ ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ ಕೊನೆಯುಸಿರೆಳೆದಿದ್ದಾರೆ.
94 ವರ್ಷದ ಶಾಮನೂರು ಶಿವಶಂಕರಪ್ಪ ಅವರಿಗೆ 94 ವಯಸ್ಸಾಗಿದ್ದು, ಭಾರತದಲ್ಲೇ ಹಿರಿಯ ಶಾಸಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಆದ್ರೆ, ವಯೋಸಹಜ ಅನಾರೋಗ್ಯದ ಹಿನ್ನೆಲೆ ಕಳೆ ದಿನಗಳಿಂದ ಬೆಂಗಳೂರಿನ ಸ್ಪರ್ಶ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಹಲವು ದಿನಗಳಿಂದ ಶಾಮನೂರು ಶಿವಶಂಕರಪ್ಪ ಅವರು ಚಿಕಿತ್ಸೆ ಪಡೆಯುತ್ತಿದ್ದು ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.
ಇನ್ನು ಸಿಎಂ ಸಿದ್ದರಾಮಯ್ಯ ಅವರು ಕೂಡ ಆಸ್ಪತ್ರೆಗೆ ಭೇಟಿ ನೀಡಿ ಶಿವಶಂಕರಪ್ಪ ಅವರ ಆರೋಗ್ಯದ ಕುರಿತು ವೈದ್ಯರಿಂದ ಮಾಹಿತಿ ಪಡೆದ್ದರು. ಸಿಎಂ ಸೇರಿದಂತೆ ಹಲವು ರಾಜಕೀಯ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ಶಾಮನೂರು ಶಿವಶಂಕರಪ್ಪ ಅವರ ಆರೋಗ್ಯ ವಿಚಾರಿಸಿದ್ದರು. ಇನ್ನು ಶಾಮನೂರು ಶಿವಶಂಕರಪ್ಪ ಅವರ ಆರೋಗ್ಯ ಸುಧಾರಣೆಯಾಗಲಿ ಎಂದು ದಾವಣಗೆರೆಯಲ್ಲಿ ಅವರ ಅಭಿಮಾನಿಳಿಂದ ಪ್ರಾರ್ಥನೆಗಳು ನಡೆದಿದ್ದವು. ಆದ್ರೆ ಲಕ್ಷಾಂತರ ಮಂದಿಯ ಪ್ರಾರ್ಥನೆ ಫಲಿಸದೇ ಇಂದು ಶಾಸಕ ಶಾಮನೂರು ಶಿವಶಂಕರಪ್ಪ ನಿಧನಹೊಂದಿದ್ದು, ಕರುನಾಡಿನಲ್ಲಿ ಶೋಕಸಾಗರದಲ್ಲಿ ಮುಳುಗಿದೆ.




