ನಿಶ್ಚಿತಾರ್ಥ ಮಾಡಿಕೊಂಡ ನಟಿ Sharmiela Mandre – ಇಲ್ಲಿವೆ ಸುಂದರ ಫೋಟೋಗಳು

ಕನ್ನಡ ಚಿತ್ರರಂಗದ ಖ್ಯಾತ ನಟಿ ಶರ್ಮಿಳಾ ಮಾಂಡ್ರೆ ಅವರ ಜೀವನದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ತಮಿಳು ಚಿತ್ರರಂಗದ ನಿರ್ಮಾಪಕ ಸುಧನ್ ಸುಂದರಂ ಅವರೊಂದಿಗೆ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಸಂತಸದ ಕ್ಷಣದ ಫೋಟೋಗಳನ್ನು ಸ್ವತಃ ಶರ್ಮಿಳಾ ಅವರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.

ಖಾಸಗಿ ಹೋಟೆಲ್ನಲ್ಲಿ ನಡೆದ ನಿಶ್ಚಿತಾರ್ಥ ಸಮಾರಂಭ
ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆದ ನಿಶ್ಚಿತಾರ್ಥ ಸಮಾರಂಭದಲ್ಲಿ ಎರಡೂ ಕುಟುಂಬದ ಸದಸ್ಯರು ಹಾಗೂ ಆಪ್ತ ಸ್ನೇಹಿತರು ಮಾತ್ರ ಭಾಗವಹಿಸಿದ್ದರು. ಉಂಗುರ ಬದಲಾಯಿಸಿಕೊಂಡ ಈ ಜೋಡಿಯ ಫೋಟೋಗಳು ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.
ಇದನ್ನು ಓದಿ : Daali ಈಗ ಡ್ಯಾಡಿ – ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ..!!

ನಿಶ್ಚಿತಾರ್ಥ ಮಾಡಿಕೊಂಡು ಮದುವೆಗೆ ಸಜ್ಜು
ಕೆಲವೇ ದಿನಗಳ ಹಿಂದೆ ತಮ್ಮ ಜೀವನದಲ್ಲಿ ಹೊಸ ಅಧ್ಯಾಯ ಆರಂಭವಾಗುತ್ತಿರುವ ಬಗ್ಗೆ ಸುಳಿವು ನೀಡಿದ್ದ ಶರ್ಮಿಳಾ ಮಾಂಡ್ರೆ, ಇದೀಗ ನಿಶ್ಚಿತಾರ್ಥದ ಮೂಲಕ ಆ ಸುದ್ದಿಯನ್ನು ಅಧಿಕೃತಗೊಳಿಸಿದ್ದಾರೆ. ಸದ್ಯ ಮದುವೆಯ ಸಿದ್ಧತೆಗಳು ಭರದಿಂದ ನಡೆಯುತ್ತಿದ್ದು, ವಿವಾಹದ ದಿನಾಂಕ ಹಾಗೂ ಸ್ಥಳದ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಹೊರಬೀಳಬೇಕಿದೆ.

ಇದನ್ನು ನೋಡಿ : ತಾರಕಕ್ಕೇರಿದ BIDADI TOWNSHIP ಬಡಿದಾಟ – DKS ಬಗ್ಗೆ SOMANNA ಶಾಕಿಂಗ್ ಹೇಳಿಕೆ




