Shivamogga ಜಿಲ್ಲೆಯ ಸೊರಬ ತಾಲೂಕಿನ ಹಣಜಿ ಗ್ರಾಮದಲ್ಲಿ ಮದುವೆಯಾದ ಎರಡೇ ತಿಂಗಳಲ್ಲಿ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Shivamogga ಜಿಲ್ಲೆಯ ಸೊರಬ ತಾಲೂಕಿನ ಹಣಜಿ ಗ್ರಾಮದಲ್ಲಿ ಮದುವೆಯಾದ ಎರಡೇ ತಿಂಗಳಲ್ಲಿ ನವವಿವಾಹಿತೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತೆಯನ್ನು ಸ್ವಾತಿ (24) ಎಂದು ಗುರುತಿಸಲಾಗಿದ್ದು, ಅವರು ಶಿಕಾರಿಪುರ ತಾಲೂಕಿನ ಕಾಳೇನಹಳ್ಳಿ ಗ್ರಾಮದ ಸ್ವರೂಪ್ ಅವರನ್ನು ವಿವಾಹವಾಗಿದ್ದರು.
ಮದುವೆಯಾದ ಕೆಲವೇ ದಿನಗಳಲ್ಲಿ ಗರ್ಭಿಣಿಯಾಗಿದ್ದ ಸ್ವಾತಿಗೆ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡಿದ್ದರಿಂದ ಸುಮಾರು 20 ದಿನಗಳ ಹಿಂದೆ ತವರು ಮನೆಗೆ ಬಂದಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ.
MUST READ : Chikkaballapura ದಲ್ಲಿ ನಂದಿನಿ ಮಿಲ್ಕ್ ಪಾರ್ಲರ್ಗೆ ಬೆಂಕಿ – ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ…!!

ಘಟನೆ ನಡೆದ ದಿನ ತಂದೆ-ತಾಯಿ ಜಮೀನಿನ ಕೆಲಸಕ್ಕೆ ತೆರಳಿದ್ದ ವೇಳೆ ಸ್ವಾತಿ ಮನೆಯಲ್ಲಿ ಸೀರೆಯಿಂದ ನೇಣು ಬಿಗಿದುಕೊಂಡಿದ್ದಾರೆ ಎನ್ನಲಾಗಿದೆ. ಇದನ್ನು ಗಮನಿಸಿದ ನೆರೆಹೊರೆಯವರು ತಕ್ಷಣವೇ ಪೋಷಕರಿಗೆ ಮಾಹಿತಿ ನೀಡಿ, ಮನೆಯ ಬಾಗಿಲು ಮುರಿದು ಸ್ವಾತಿಯನ್ನು ಕೆಳಗಿಳಿಸಿ ಆಸ್ಪತ್ರೆಗೆ ಕರೆದೊಯ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕುಟುಂಬದವರ ಮಾಹಿತಿ ಪ್ರಕಾರ, ಸ್ವಾತಿಗೆ ಕಳೆದ ಕೆಲವು ದಿನಗಳಿಂದ ತೀವ್ರ ವಾಂತಿ ಕಾಣಿಸಿಕೊಳ್ಳುತ್ತಿದ್ದು, ಸರಿಯಾಗಿ ಊಟ ಮಾಡಲಾಗುತ್ತಿರಲಿಲ್ಲ. ಆರೋಗ್ಯ ಸಮಸ್ಯೆಯಿಂದ ಮಾನಸಿಕವಾಗಿ ಬೇಸರಗೊಂಡಿದ್ದ ಕಾರಣ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ಪ್ರಕರಣದ ನಿಖರ ಕಾರಣವನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
MUST WATCH : ಪ್ರೀತಿಸಿ ಮದುವೆಯಾದ ದಂಪತಿಗೆ ಬಹಿಷ್ಕಾರ – ದಲಿತ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ | TIPTUR NEWS |




