
ಬೆಂಗಳೂರಿಗರೆ ಗಮನಿಸಿ : ಈ ಎರಡು ದಿನದಂದು ಸಿಗಲ್ಲ Chicken : ಕಾರಣ ಏನು ಗೊತ್ತಾ?
ರಾಜಧಾನಿ ಬೆಂಗಳೂರಿನಲ್ಲಿ ಚಿಕನ್ ಅಂಗಡಿ ಮಾಲೀಕರು ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತ (BSWML) ಹಾಗೂ GBA ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರತಿಭಟನೆಗೆ ಕರೆ ನೀಡಿದ್ದಾರೆ. ಚಿಕನ್ ತ್ಯಾಜ್ಯ ವಿಲೇವಾರಿಗೆ ಪ್ರತಿ ಕೆಜಿಗೆ ₹5 ದರ ನಿಗದಿಪಡಿಸಿರುವುದನ್ನು ವಿರೋಧಿಸಿ ಗುರುವಾರ ಮತ್ತು ಶುಕ್ರವಾರ ನಗರದ ಬಹುತೇಕ ಚಿಕನ್ ಅಂಗಡಿಗಳನ್ನು ಬಂದ್ ಮಾಡಲು ನಿರ್ಧರಿಸಲಾಗಿದೆ.
ಫ್ರೀಡಂ ಪಾರ್ಕ್ನಲ್ಲಿ ಧರಣಿ
ಪೌಲ್ಟ್ರಿ ಟ್ರೇಡರ್ಸ್ ಅಸೋಸಿಯೇಷನ್ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಲಿದ್ದು, ಎರಡು ದಿನಗಳ ಕಾಲ ಚಿಕನ್ ವ್ಯಾಪಾರ ಸಂಪೂರ್ಣ ಸ್ಥಗಿತಗೊಳಿಸಿ ನಗರದ ಫ್ರೀಡಂ ಪಾರ್ಕ್ನಲ್ಲಿ ಧರಣಿ ನಡೆಸಲು ಅಂಗಡಿ ಮಾಲೀಕರು ತೀರ್ಮಾನಿಸಿದ್ದಾರೆ.
READ THIS : ಚಿಕನ್ ಪ್ರಿಯರೇ ಎಚ್ಚರ! ಕರ್ನಾಟಕದಲ್ಲಿ H5N1 ವೈರಸ್ ಪತ್ತೆ!

ಪ್ರತಿ ಅಂಗಡಿಗೆ ದಿನಕ್ಕೆ ₹150 ಶುಲ್ಕ?
ಬೆಂಗಳೂರಿನಲ್ಲಿ ಪ್ರತಿದಿನ ಸುಮಾರು 7 ಲಕ್ಷ ಕೆಜಿ Chicken ಮಾರಾಟವಾಗುತ್ತಿದ್ದು, ಇದರಿಂದ ಅಂದಾಜು 2ರಿಂದ 3 ಲಕ್ಷ ಕೆಜಿ ತ್ಯಾಜ್ಯ ಉತ್ಪತ್ತಿಯಾಗುತ್ತದೆ ಎನ್ನಲಾಗಿದೆ. ಪ್ರತಿ ಚಿಕನ್ ಅಂಗಡಿಯಿಂದ ಸರಾಸರಿ 30 ಕೆಜಿ ತ್ಯಾಜ್ಯ ಸಂಗ್ರಹವಾಗುವುದರಿಂದ, ಹೊಸ ದರದ ಪ್ರಕಾರ ಅಂಗಡಿ ಮಾಲೀಕರು ತ್ಯಾಜ್ಯ ವಿಲೇವಾರಿಗೆ ಪ್ರತಿ ದಿನ ಸುಮಾರು ₹150 ಪಾವತಿಸಬೇಕಾಗುತ್ತದೆ. ತಿಂಗಳಿಗೆ ಈ ಮೊತ್ತ ₹4,000ಕ್ಕೂ ಅಧಿಕವಾಗಲಿದೆ.
ಈ ಹೆಚ್ಚುವರಿ ಶುಲ್ಕ ಸಣ್ಣ ಪ್ರಮಾಣದಲ್ಲಿ ವ್ಯಾಪಾರ ನಡೆಸುತ್ತಿರುವ ಚಿಕನ್ ಅಂಗಡಿ ಮಾಲೀಕರಿಗೆ ಆರ್ಥಿಕ ಹೊರೆಯಾಗಲಿದೆ ಎಂದು ಸಂಘಟನೆ ಆರೋಪಿಸಿದೆ.

ಹೊಸ ದರ ಹಿಂಪಡೆಯಲು ಆಗ್ರಹ
ಚಿಕನ್ ತ್ಯಾಜ್ಯ ವಿಲೇವಾರಿಗೆ ನಿಗದಿಪಡಿಸಿರುವ ಪ್ರತಿ ಕೆಜಿಗೆ ₹5 ಶುಲ್ಕದ ನೀತಿಯನ್ನು ಕೂಡಲೇ ಹಿಂಪಡೆಯಬೇಕು ಎಂದು ಪೌಲ್ಟ್ರಿ ಟ್ರೇಡರ್ಸ್ ಅಸೋಸಿಯೇಷನ್ ಆಗ್ರಹಿಸಿದೆ.
ತ್ಯಾಜ್ಯ ನಿರ್ವಹಣೆಯ ಹೊಣೆಗಾರಿಕೆಯನ್ನು ವ್ಯಾಪಾರಿಗಳ ಮೇಲೆ ಹೆಚ್ಚುವರಿ ಆರ್ಥಿಕ ಹೊರೆಯಾಗಿ ಹೇರಬಾರದು. ಸಣ್ಣ ವ್ಯಾಪಾರಿಗಳ ಹಿತದೃಷ್ಟಿಯಿಂದ ಹೊಸ ಶುಲ್ಕ ನೀತಿಯನ್ನು ಮರುಪರಿಶೀಲಿಸಬೇಕು ಎಂದು ಸಂಘಟನೆ ಒತ್ತಾಯಿಸಿದೆ.
ಎರಡು ದಿನ ಚಿಕನ್ ಅಭಾವ ಸಾಧ್ಯತೆ
ಚಿಕನ್ ಅಂಗಡಿ ಮಾಲೀಕರು ಗುರುವಾರ ಮತ್ತು ಶುಕ್ರವಾರ ವ್ಯಾಪಾರ ಸ್ಥಗಿತಗೊಳಿಸಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಚಿಕನ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ.
ಇದರಿಂದ ಮಾಂಸ ಪ್ರಿಯರಿಗೆ ಮಾತ್ರವಲ್ಲದೆ, ಚಿಕನ್ ಮೇಲೆ ಅವಲಂಬಿತವಾಗಿರುವ ಹೋಟೆಲ್ಗಳು, ರೆಸ್ಟೋರೆಂಟ್ಗಳು ಹಾಗೂ ಇತರೆ ಆಹಾರ ಉದ್ಯಮಗಳಿಗೂ ತೊಂದರೆಯಾಗುವ ಸಾಧ್ಯತೆಯಿದೆ.

MUST WATCH : ಬಿಜೆಪಿಗರು ನಿರುದ್ಯೋಗಿಗಳಾಗಿದ್ದಾರೆ – ಉದ್ಯೋಗ ಹುಡುಕಿ ಪಾದಯಾತ್ರೆ ಹೊರಟವ್ರೆ



