
BOLLYWOOD ನಟ ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ ಕೇಸ್ – ಮತ್ತೆ ಇಬ್ಬರು ಅರೆಸ್ಟ್, ಬಂಧಿತರ ಸಂಖ್ಯೆ 10ಕ್ಕೆ ಏರಿಕೆ
ಬಾಲಿವುಡ್ ನಟ ಟೈಗರ್ ಶ್ರಾಫ್ ಕಾರಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಮತ್ತೆ ಇಬ್ಬರು ಅರೆಸ್ಟ್, ಬಂಧಿತರ ಸಂಖ್ಯೆ 10ಕ್ಕೆ ಏರಿಕೆ
ಹರಿಯಾಣದ ಸೋನಿಪತ್ನಲ್ಲಿ ಸಮೀರ್ ಮತ್ತು ಜತಿನ್ ಎಂಬ ಆರೋಪಿಗಳನ್ನು ಮುಂಬೈ ಪೊಲೀಸರ ಅಪರಾಧ ವಿಭಾಗ ಬಂಧಿಸಿದೆ. ಪ್ರಕರಣದಲ್ಲಿ ಶಸ್ತ್ರಾಸ್ತ್ರಗಳನ್ನು ಪೂರೈಸಿದ ಆರೋಪ ಇವರ ಮೇಲಿದೆ. ಈ ಇಬ್ಬರ ಬಂಧನದೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
READ THIS : ಬಾಲಿವುಡ್ ನಟ ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ!

BOLLYWOOD ನಟ ಟೈಗರ್ ಶ್ರಾಫ್ ಮೇಲೆ ದಾಳಿ – ಹರಿಯಾಣದಲ್ಲಿ ಸಮೀರ್, ಜತಿನ್ ಬಂಧನ
ಗುಂಡಿನ ದಾಳಿ ಪ್ರಕರಣದಲ್ಲಿ ಬಳಸಲಾಗಿದೆ ಎನ್ನಲಾದ ಶಸ್ತ್ರಾಸ್ತ್ರಗಳ ಪೂರೈಕೆಯಲ್ಲಿ ಸಮೀರ್ ಮತ್ತು ಜತಿನ್ ಪ್ರಮುಖ ಪಾತ್ರ ವಹಿಸಿದ್ದಾರೆ. ಸದ್ಯ ಇಬ್ಬರ ಬಂಧನಕ್ಕೆ ಸಂಬಂಧಿಸಿದ ಕಾನೂನು ಪ್ರಕ್ರಿಯೆ ನಡೆಯುತ್ತಿದೆ.
ಆರೋಪಿಗಳನ್ನು ಸೋನಿಪತ್ ನ್ಯಾಯಾಲಯಕ್ಕೆ ಹಾಜರುಪಡಿಸಿ ಟ್ರಾನ್ಸಿಟ್ ರಿಮಾಂಡ್ ಪಡೆಯಲು ಪೊಲೀಸರು ಮುಂದಾಗಿದ್ದಾರೆ.

MUST WATCH : VIJAYENDRA, NIRANI ಜೊತೆ ಮಾತು – ಶಾಸಕ YATHNAL ಹೇಳಿದ್ದೇನು ಗೊತ್ತಾ..?



