Siddaramaiah : ಸಿಎಂ ಸಿದ್ದರಾಮಯ್ಯ ಅವರು ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದ ‘ಅಶೋಕ ಜನಮನ – 2025’ ಎಂಬ ಸಾರ್ವಜನಿಕ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಈ ಕಾರ್ಯಕ್ರಮವನ್ನು ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ ಮತ್ತು ಚಾರಿಟೇಬಲ್ ಟ್ರಸ್ಟ್ ಆಯೋಜಿಸಿತ್ತು. ದೀಪಾವಳಿ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ತಟ್ಟೆ ಮತ್ತು ವಸ್ತ್ರ ಹಂಚಿಕೆ ಮಾಡುವ ಉದ್ದೇಶ ಇತ್ತು. ಆದರೆ, ಕ್ರೀಡಾಂಗಣದ ಸಾಮರ್ಥ್ಯಕ್ಕಿಂತ ಹೆಚ್ಚಾಗಿ ಜನರು ಬಂದ ಕಾರಣ ಬೃಹತ್ ನೂಕುನುಗ್ಗಲು ಉಂಟಾಗಿ ಕೆಲವರು ಆಮ್ಲಜನಕ ಕೊರತೆಯಿಂದಾಗಿ ಅಸ್ವಸ್ಥರಾಗಿದ್ದಾರೆ.
ಇದನ್ನು ಓದಿ : ವರದಾ ನದಿಗೆ ಹಾರಿ ತಾಯಿ-ಮಗಳು ಆತ್ಮಹತ್ಯೆ

ಇನ್ನು ಮೈದಾನದಲ್ಲಿ ಕೆಸರು ತುಂಬಿದ್ದು, ಕುಡಿಯುವ ನೀರಿನ ಕೊರತೆ ಕೂಡ ಜನರನ್ನು ಕಿರಿಕಿರಿ ಮಾಡಿತು. ಮಕ್ಕಳು, ಮಹಿಳೆಯರು ಸೇರಿದಂತೆ ಹಲವರು ತೊಂದರೆ ಅನುಭವಿಸಿದ್ದಾರೆ. ಇನ್ನು ಅಸ್ವಸ್ಥರಾದವರನ್ನು ಪುತ್ತೂರು ತಾಲೂಕು ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗಿದೆ.
ಈ ಅವ್ಯವಸ್ಥೆಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಭದ್ರತಾ ವ್ಯವಸ್ಥೆಯಲ್ಲಿನ ಕೊರತೆ ಮತ್ತು ಅವ್ಯವಸ್ಥೆಯು ಮತ್ತೆಷ್ಟು ಚರ್ಚೆಗೆ ಗ್ರಾಸವಾಗಿದೆ.

ಇದನ್ನು ನೋಡಿ : ಸಿದ್ದರಾಮಯ್ಯ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ನೂಕುನುಗ್ಗಲು




