ಖರ್ಗೆ ನಂತರ Siddaramaiah ವಿರೋಧ ಪಕ್ಷದ ನಾಯಕರೇ ಆಗಬಹುದು: ಶಿವಲಿಂಗೇಗೌಡ ಭವಿಷ್ಯ

ಮಲ್ಲಿಕಾರ್ಜುನ ಖರ್ಗೆ ಬಳಿಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರೇ ಆಗಬಹುದು ಎಂದು ಶಾಸಕ ಶಿವಲಿಂಗೇಗೌಡ ಭವಿಷ್ಯ ನುಡಿದಿದ್ದಾರೆ.
ವಿರೋಧ ಪಕ್ಷದ ನಾಯಕರೇ ಆಗಬಹುದು
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಸಕ್ರಿಯ ರಾಜಕಾರಣದಿಂದ ದೂರ ಆಗುತ್ತೇನೆ ಎಂದು ಹೇಳಿಲ್ಲ. ಚುನಾವಣೆಯಲ್ಲಿ ಸ್ಪರ್ಧಿಸದಿದ್ದರೆ ರಾಜ್ಯಸಭೆಗೆ ಆಯ್ಕೆಯಾಗಬಹುದು. ಖರ್ಗೆ ಬಿಟ್ಟ ಮೇಲೆ ಅವರು ವಿರೋಧ ಪಕ್ಷದ ನಾಯಕರೇ ಆಗಬಹುದು. ಒಂದು ದೊಡ್ಡ ಸ್ಥಾನಕ್ಕೆ ಹೋಗಬಹುದು ಎಂದರು.
ಇದನ್ನಯು ಓದಿ : ಶರಣು ಸಲಗರ ಪತ್ನಿ ಕುರಿತು ಹೇಳಿಕೆ – Shivlinge Gowda ವಿಷಾದ..!

Siddaramaiah – ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತರುವ ಕೆಲಸ
ಸಿದ್ದರಾಮಯ್ಯ ಅವರು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದಷ್ಟೇ ಹೇಳಿದ್ದು, ಸಕ್ರಿಯ ರಾಜಕಾರಣದಿಂದ ದೂರ ಉಳಿಯುವುದಾಗಿ ಹೇಳಿಲ್ಲ. ದೇಶದ ರಾಜಕಾರಣಕ್ಕೆ ಹೋಗಬಹುದು, ಅಥವಾ 2028 ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತರುವ ಕೆಲಸ ಮಾಡಬಹುದು. ಅವರಿಗೆ ಇನ್ನೊಂದು ಚುನಾವಣೆಯಲ್ಲಿ ಸ್ಪರ್ಧೆ ಮಾಡುವಂತೆ ಕೇಳುತ್ತೇವೆ ಎಂದರು.
ಸಚಿವ ಸಂಪುಟ ವಿಸ್ತರಣೆ ಬಗ್ಗೆ ಶಿವಲಿಂಗೇಗೌಡ ಏನಂದ್ರು?
ಸಚಿವ ಸಂಪುಟ ವಿಸ್ತರಣೆ ಕುರಿತು ಮಾತನಾಡಿದ ಶಿವಲಿಂಗೇಗೌಡ, ಅನಿವಾರ್ಯ ಕಾರಣಗಳಿಂದ ಪ್ರಕ್ರಿಯೆ ಸ್ವಲ್ಪ ಮುಂದೂಡಿಕೆಯಾಗಿದೆ ಎಂದು ಹೇಳಿದರು. ಇನ್ನೆರಡು-ಮೂರು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ ನಡೆಯುವ ವಿಶ್ವಾಸವಿದೆ. ಹಾಗಾಗಿ ದೆಹಲಿಗೆ ತೆರಳಿ ಪಕ್ಷದ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲಿದ್ದೇನೆ. ನಾನು ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಆದರೆ ಯಾವ ಖಾತೆಗೂ ಬೇಡಿಕೆ ಇಟ್ಟಿಲ್ಲ ಎಂದು ತಿಳಿಸಿದರು.

ಇದನ್ನು ನೋಡಿ : ಮತದಾರರ ಜಾಗೃತಿಗೆ JDS ಹೊಸಹೆಜ್ಜೆ- ತಿಪಟೂರಲ್ಲಿ SIR ಅಭಿಯಾನಕ್ಕೆ ಚಾಲನೆ




