ಮೈಸೂರಿನಲ್ಲಿ ಮಾಜಿ CM ಸಿದ್ದರಾಮಯ್ಯಗೆ ಭವ್ಯ ಸ್ವಾಗತ

ಮೂರು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಉತ್ತಮ ಆಡಳಿತ ನೀಡಿರುವ ಸಿದ್ದರಾಮಯ್ಯ ಅವರು ಸಿಎಂ ಕುರ್ಚಿಯನ್ನು ಡಿ.ಕೆ ಶಿವಕುಮಾರ್ ಅವರಿಗೆ ಬಿಟ್ಟುಕೊಟ್ಟಿದ್ರು. ಸಿದ್ದರಾಮಯ್ಯ ಪದತ್ಯಾಗ ಮಾಡಿದ ಬಳಿಕ ಸಿದ್ದು ಹೋದಲ್ಲಿ ಬಂದಲ್ಲಿ ಜನರಿಂದ ಭರ್ಜರಿ ರೆಸ್ಪಾನ್ಸ್ ಸಿಗ್ತಾ ಇದೆ. ನಿನ್ನೆ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಾದ ಮೈಸೂರಿಗೆ ಬೇಟಿ ನೀಡಿದ್ದು, ಜನರಿಂದ ಅದ್ಧೂರಿ ಸ್ವಾಗತ ಸಿಕ್ಕಿದೆ.

ಮಾಜಿ CM ಸಿದ್ದರಾಮಯ್ಯಗೆ ಭವ್ಯ ಸ್ವಾಗತ
ಸಿದ್ದರಾಮಯ್ಯ ಪದತ್ಯಾಗದ ನಂತರ ಮೊದಲ ಬಾರಿಗೆ ಹುಟ್ಟೂರಿಗೆ ಸಿದ್ದರಾಮಯ್ಯ ಭೇಟಿ ನೀಡಿದ್ದು, ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು, ಕಾರ್ಯಕರ್ತರು ಜಮಾಯಿಸಿದ್ದು ಸಿದ್ದುಗೆ ಭವ್ಯ ಸ್ವಾಗತವನ್ನು ಕೋರಿದ್ರು. ಮೈಸೂರಿನಲ್ಲಿ ಜನರಿಂದ ಸಿಕ್ಕ ಭವ್ಯ ಸ್ವಾಗತ ಕಂಡು ಸಿದ್ದರಾಮಯ್ಯ ಎಮೋಷನಲ್ ಆಗಿದ್ದು, ಸಿಎಂ ಕುರ್ಚಿ ಬಿಟ್ಟು ಕೊಟ್ಟ ಬಗ್ಗೆ ಸಿದ್ದು ಭಾವುಕ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಅಧಿಕಾರ, ಸಂಪತ್ತು ನಶ್ಚರ ಎಂದು ಭಾವುಕರಾಗಿ ಪೋಸ್ಟ್ ಮಾಡಿದ್ದಾರೆ.
ಇದನ್ನು ಓದಿ : ಸಿದ್ದು ಮುನಿಸನ್ನು ತಣ್ಣಗಾಗಿಸಲು ಜಮೀರ್ ಕಸರತ್ತು

ಸಿದ್ದು ಪೋಸ್ಟ್ನಲ್ಲಿ ಏನಿದೆ..?
ಇನ್ನು ಪೋಸ್ಟ್ ನಲ್ಲಿ ಮುಖ್ಯಮಂತ್ರಿಯ ಪದತ್ಯಾಗ ಮಾಡಿದ ದಿನದಿಂದ ಹೋದಲ್ಲಿ, ಬಂದಲ್ಲಿ ಜನತೆ ವ್ಯಕ್ತಪಡಿಸುತ್ತಿರುವ ಪ್ರೀತಿ, ಅಭಿಮಾನ, ವಿಶ್ವಾಸವನ್ನು ನೋಡಿದರೆ ಅಧಿಕಾರವನ್ನು ಬಳಸಿಕೊಂಡು ಜಗಮೆಚ್ಚುವ ರೀತಿಯಲ್ಲಿ ಜನಸೇವೆ ಮಾಡಿದ್ದೇನೆ ಎಂಬ ಸಾರ್ಥಕ್ಯದ ಭಾವನೆ ಮೂಡಿದೆ.
ಅಧಿಕಾರ, ಸಂಪತ್ತು ಕಾಲ ಬದಲಾದಂತೆ ಕಳೆದು ಹೋಗಬಹುದು, ಜನರ ಪ್ರೀತಿ ನಿರಂತರ. ನನ್ನ ಸಾರ್ವಜನಿಕ ಬದುಕಿನಲ್ಲಿ ನನ್ನನ್ನು ಪ್ರೀತಿಸುವ ದೊಡ್ಡ ಜನಸಮೂಹವನ್ನೇ ಸಂಪಾದಿಸಿದ್ದೇನೆ ಎನ್ನುವ ಹೆಮ್ಮೆ ನನ್ನದು. ಮುಖ್ಯಮಂತ್ರಿಯ ಸಿಂಹಾಸನ ನಶ್ವರ, ಜನತೆಯ ಹೃದಯಸಿಂಹಾಸನ ಶಾಶ್ವತ. ಅಲ್ಲಿಂದ ನನ್ನನ್ನು ಯಾರೂ ಕೆಳಗಿಳಿಸಲಾರರು. ನಾಡಿನ ಉದ್ದಗಲಕ್ಕೂ ಯಾವ ನಿರೀಕ್ಷೆಯೂ ಇಲ್ಲದೆ ಪ್ರೀತಿ – ಅಕ್ಕರೆ ತೋರುತ್ತಿರುವ ಪ್ರೀತಿಯ ಬಂಧುಗಳ ಸೇವೆಗೆ ನಾನು ಸದಾ ಬದ್ಧ. ಮತ್ತೊಮ್ಮೆ ಎಲ್ಲರಿಗೂ ನನ್ನ ತುಂಬು ಹೃದಯದ ಕೃತಜ್ಞತೆಗಳು ಎಂದು ಸಿದ್ದರಾಮಯ್ಯ ಭಾವುಕ ಪೋಸ್ಟ್ ಮಾಡಿದ್ದಾರೆ.

ಇದನ್ನು ನೋಡಿ : ದೇವಸ್ಥಾನದಲ್ಲಿ ಊಟ ಸೇವಿಸಿ ಭಕ್ತರು ಅಸ್ವಸ್ಥ- ಅಸ್ವಸ್ಥರ ಆರೋಗ್ಯ ವಿಚಾರಿಸಿದ ಶಾಸಕ H.V.VENKATESH




