Yatindra ಗೆ ಪ್ರಮುಖ ಸಚಿವ ಸ್ಥಾನ ಸಿಗುವ ಸಾಧ್ಯತೆ!

ರಾಜ್ಯ ಕಾಂಗ್ರೆಸ್ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪಟ್ಟಾಭಿಷೇಕದ ಬೆನ್ನಲ್ಲೇ ಇದೀಗ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆಯ ಕಸರತ್ತು ತೀವ್ರಗೊಂಡಿದೆ. ಯಾರಿಗೆ ಸಚಿವ ಸ್ಥಾನ ನೀಡಬೇಕು ಮತ್ತು ಯಾರನ್ನು ಕೈಬಿಡಬೇಕು ಎನ್ನುವುದು ಕಾಂಗ್ರೆಸ್ ಹೈಕಮಾಂಡ್ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಆಡಳಿತ ಪಕ್ಷದಲ್ಲಿ ಸಚಿವ ಸ್ಥಾನಕ್ಕಾಗಿ ಒಳಗೊಳಗೇ ಭಾರಿ ಪೈಪೋಟಿ ಶುರುವಾಗಿದೆ.

ರಾಜಧಾನಿ ಬೆಂಗಳೂರಿನಿಂದ ದೆಹಲಿಯವರೆಗೂ ಲಾಬಿ
ಸಚಿವ ಸಂಪುಟದಲ್ಲಿ ಸ್ಥಾನ ಪಡೆಯಲು ಹಿರಿಯ ನಾಯಕರು, ಹಲವು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಜನಪ್ರತಿನಿಧಿಗಳು ಮತ್ತು ವಿವಿಧ ಬಣಗಳ ನಾಯಕರು ಭಾರೀ ಲಾಬಿ ನಡೆಸುತ್ತಿದ್ದಾರೆ. ಹಿರಿತನ ಹಾಗೂ ರಾಜಕೀಯ ಅನುಭವದ ಆಧಾರದ ಮೇಲೆ ಸಚಿವ ಸ್ಥಾನ ನೀಡಬೇಕು ಎಂದು ಹಲವು ಶಾಸಕರು ಪಕ್ಷದ ವರಿಷ್ಠರ ಮೇಲೆ ಒತ್ತಡ ಹೇರುತ್ತಿದ್ದಾರೆ. ಈ ಹಿನ್ನಲೆ ರಾಜಧಾನಿ ಬೆಂಗಳೂರಿನಿಂದ ದೆಹಲಿಯವರೆಗೂ ಲಾಬಿ ತಲುಪಿದೆ.
ಎಂಎಲ್ಸಿಗಳಿಗೂ ಸಚಿವ ಸ್ಥಾನ ಬೇಡಿಕೆ
ವಿಧಾನಸಭೆ ಸದಸ್ಯರಷ್ಟೇ ಅಲ್ಲದೆ, ಇದೀಗ ವಿಧಾನ ಪರಿಷತ್ ಸದಸ್ಯರು ಸಹ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯಕ್ಕಾಗಿ ಪಟ್ಟು ಹಿಡಿದಿದ್ದಾರೆ. ಪರಿಷತ್ ಸದಸ್ಯರ ಕೋಟಾದಡಿ ಕನಿಷ್ಠ ಮೂರು ಸಚಿವ ಸ್ಥಾನಗಳನ್ನು ಮೀಸಲಿಡಬೇಕು ಎಂದು ಎಂಎಲ್ಸಿಗಳು ಹೈಕಮಾಂಡ್ ಮುಂದೆ ಬೇಡಿಕೆ ಇಟ್ಟಿದ್ದಾರೆ. ಇದರಿಂದ ಸಚಿವ ಸಂಪುಟ ರಚನೆಯ ಸಮೀಕರಣಗಳು ಇನ್ನಷ್ಟು ಸಂಕೀರ್ಣಗೊಂಡಿವೆ.
ಇದನ್ನು ಓದಿ : DCM ಪ್ರಸ್ತಾವನೆ ಇನ್ನೂ ಬಂದಿಲ್ಲ – ಜೂನ್ 3ರ ಸಭೆಯಲ್ಲಿ ಅಂತಿಮ ತೀರ್ಮಾನ ಎಂದ Kharge..!!

ಯತೀಂದ್ರ ಸಿದ್ದರಾಮಯ್ಯಗೆ ಅವಕಾಶ?
ರಾಜಕೀಯ ವಲಯದಲ್ಲಿ ಹರಿದಾಡುತ್ತಿರುವ ಮಾಹಿತಿಯ ಪ್ರಕಾರ, ಸಿದ್ದರಾಮಯ್ಯ ಅವರ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ Yatindra ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗುತ್ತಿದೆ.
ಈ ಮೂಲಕ ಮುಖ್ಯಮಂತ್ರಿ ಬಣಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡುವ ಬಗ್ಗೆ ಹೈಕಮಾಂಡ್ ಚಿಂತನೆ ನಡೆಸಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಯುವ ಕಾಂಗ್ರೆಸ್ಗೆ ಆದ್ಯತೆ ನೀಡುವಂತೆ ಒತ್ತಾಯ
ಇನ್ನೊಂದೆಡೆ, ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಅವರು ಯುವ ನಾಯಕರಿಗೆ ಸಚಿವ ಸಂಪುಟದಲ್ಲಿ ಅವಕಾಶ ಕಲ್ಪಿಸುವಂತೆ ಹೈಕಮಾಂಡ್ಗೆ ಮನವಿ ಮಾಡಿದ್ದಾರೆ. ಕೇರಳ ಮಾದರಿಯಲ್ಲಿ ಯುವ ಕಾಂಗ್ರೆಸ್ ಮುಖಂಡರಿಗೆ ಆದ್ಯತೆ ನೀಡಬೇಕು ಎಂಬ ಸಲಹೆಯನ್ನು ಅವರು ಮುಂದಿಟ್ಟಿದ್ದಾರೆ.
ಈ ಹಿನ್ನೆಲೆ ಯುವ ಕಾಂಗ್ರೆಸ್ ಕೋಟಾದಡಿ ಕೆಲವು ಹೊಸ ಮುಖಗಳಿಗೆ ಅವಕಾಶ ಸಿಗುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ನಡೆಯುತ್ತಿವೆ.
ಪಕ್ಷದ ಯುವ ನಾಯಕತ್ವವನ್ನು ಬಲಪಡಿಸುವ ನಿಟ್ಟಿನಲ್ಲಿ ಹೊಸ ಪ್ರಯೋಗಕ್ಕೆ ಹೈಕಮಾಂಡ್ ಮುಂದಾಗಬಹುದು ಎಂಬ ನಿರೀಕ್ಷೆಯೂ ಇದೆ.

ಬೋಸರಾಜು ಲಾಬಿ ಜೋರು
ಮತ್ತೊಂದೆಡೆ, ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಯುವ ಕಾಂಗ್ರೆಸ್ ಕೋಟಾದಡಿ ಯುವಕರಿಗೆ ಆದ್ಯತೆ ನೀಡಬೇಕು ಎಂದು ಹೈಕಮಾಂಡ್ ತಲುಪಿದ್ದಾರೆ.
ಕೇರಳ ಮಾದರಿಯನ್ನು ಅನುಸರಿಸಿ ಯುವ ಕಾಂಗ್ರೆಸ್ ನಾಯಕರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಈ ಕೋಟಾದಡಿ ಡಿ.ಕೆ. ಶಿವಕುಮಾರ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಯುವ ನಾಯಕ ಬಸನಗೌಡ ಬಾದರ್ಲಿ ಅವರ ಹೆಸರು ಮುಂಚೂಣಿಗೆ ಬಂದಿದೆ.
ಇದನ್ನು ನೋಡಿ : ಶಾಲಾ ಕಾಲೇಜುಗಳಿಗೆ ಬಿಜೆಪಿಯವ್ರು ಕೇಸರಿ ಶಾಲು ಹಂಚ್ತಾರಂತೆ ಸರ್.!?





