ಕರ್ನಾಟಕ ಹೈಕೋರ್ಟ್ನ 6 ನೂತನ ಹೆಚ್ಚುವರಿ ನ್ಯಾಯಾಧೀಶರಿಂದ ಪ್ರಮಾಣ ವಚನ ಸ್ವೀಕಾರ

ಕರ್ನಾಟಕ ಉಚ್ಚ ನ್ಯಾಯಾಲಯದ (ಹೈಕೋರ್ಟ್) ನೂತನ ಹೆಚ್ಚುವರಿ ನ್ಯಾಯಾಧೀಶರಾಗಿ ಪ್ರಮಾಣವಚನ ಸ್ವೀಕರಿಸುವ ಕಾರ್ಯಕ್ರಮವು ರಾಜಭವನದ (ಲೋಕಭವನ) ಸಭಾಂಗಣದಲ್ಲಿ ಭಾನುವಾರ ಅದ್ಧೂರಿಯಾಗಿ ನೆರವೇರಿತು.
ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋಟ್ ಅವರ ಸಮ್ಮುಖದಲ್ಲಿ ಹಾಗೂ ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ವಿಭು ಬಖ್ರು ಅವರು ನೂತನ ಹೆಚ್ಚುವರಿ ನ್ಯಾಯಾಧೀಶರಿಗೆ ಹುದ್ದೆ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು.
ಇದನ್ನು ಓದಿ : CM ಡಿಕೆಶಿಗೆ ಮುಗಿಯದ ಖಾತೆ ಹಂಚಿಕೆ ಸಂಕಷ್ಟ.!

ಪ್ರಮಾಣವಚನ ಸ್ವೀಕರಿಸಿದ ನೂತನ ನ್ಯಾಯಾಧೀಶರು:
- ರಾಘವೇಂದ್ರ ಸೀತಾರಾಮ್ ಶ್ರೀವತ್ಸಹೇಮಾ ಕುಲಕರ್ಣಿ
- ಹೇಮಾ ಕುಲಕರ್ಣಿ
- ಸುಬ್ರಮಣ್ಯ ರಂಗರಾವ್
- ತಡಗವಾಡಿ ಪ್ರಕಾಶ್ ವಿವೇಕಾನಂದ
- ಬಕ್ಕೇಶ್ವರ ಪ್ರಮೋದ್
- ಹೊಂಬೇಗೌಡ ಶಾಂತಿ ಭೂಷಣ್
ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯ ಸರ್ಕಾರದ ಪ್ರತಿನಿಧಿಗಳು ಹಾಗೂ ಹಲವು ಸಚಿವರು ಭಾಗವಹಿಸಿ ನೂತನ ನ್ಯಾಯಾಧೀಶರಿಗೆ ಶುಭ ಹಾರೈಸಿದರು.
ಕರ್ನಾಟಕ ಹೈಕೋರ್ಟ್ನ ಹಿರಿಯ ನ್ಯಾಯಮೂರ್ತಿಗಳು, ಅಡ್ವೊಕೇಟ್ ಜನರಲ್, ಹೈಕೋರ್ಟ್ ವಕೀಲರ ಸಂಘದ ಪದಾಧಿಕಾರಿಗಳು, ನ್ಯಾಯಾಂಗ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ನೂತನ ನ್ಯಾಯಾಧೀಶರ ಕುಟುಂಬಸ್ಥರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಬಾಕಿ ಇರುವ ಪ್ರಕರಣಗಳ ಶೀಘ್ರ ವಿಲೇವಾರಿಗೆ ಮತ್ತಷ್ಟು ವೇಗ
ನೂತನ 6 ನ್ಯಾಯಾಧೀಶರ ಸೇರ್ಪಡೆಯಿಂದಾಗಿ ಹೈಕೋರ್ಟ್ನಲ್ಲಿ ಬಾಕಿ ಇರುವ ಪ್ರಕರಣಗಳ ಶೀಘ್ರ ವಿಲೇವಾರಿಗೆ ಮತ್ತಷ್ಟು ವೇಗ ಸಿಗಲಿದ್ದು, ನ್ಯಾಯಾಂಗ ವ್ಯವಸ್ಥೆಯ ಕಾರ್ಯಕ್ಷಮತೆ ಮತ್ತಷ್ಟು ಬಲಗೊಳ್ಳಲಿದೆ ಎಂದು ಆಶಿಸಲಾಗಿದೆ.
ಇದನ್ನು ನೋಡಿ : ಕನ್ನಡವನ್ನ ಉಳಿಸಿ ಬೆಳೆಸಿ ಅಂತ ಹೇಳೋದಲ್ಲಾ – ಹೀಗ್ಯಾಕಂದ್ರು ಮಾಜಿ ಸಚಿವ ಕೆ.ಎನ್. ರಾಜಣ್ಣ




