ಪ್ರಚೋದನಾಕಾರಿ ಭಾಷಣ ಆರೋಪ – ಪ್ರತಾಪ್ ಸಿಂಹ ವಿರುದ್ಧ FIR ದಾಖಲು

ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವರ ವಿರುದ್ಧ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಆಗಿದ್ದೇನು..?
ಹೌದು.. ಟಿ.ನರಸೀಪುರದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳ ಸೂಚನೆಗೆ ಸವಾಲಾಗಿ ನಡೆದ ಶೋಭಾಯಾತ್ರೆ ಸಂದರ್ಭದಲ್ಲಿ ಪ್ರತಾಪ್ ಸಿಂಹ ಅವರು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
READ THIS : ಮೈಸೂರಲ್ಲಿ Rape ಅಂಡ್ Murder | ಸರ್ಕಾರದ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ

ಪ್ರತಾಪ್ ಸಿಂಹ ವಿರುದ್ಧ FIR
ಪ್ರತಾಪ್ ಸಿಂಹ ಹಾಗೂ ಇತರರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS)ಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸೆಕ್ಷನ್ 132, 191, 194, 196(1)(ಎ)(ಬಿ), 299, 353(1)(ಬಿ)(ಸಿ) ಹಾಗೂ 190ರ ಅಡಿಯಲ್ಲಿ FIR ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಮಾತಿನ ಭರಾಟೆಯಲ್ಲಿ ಎಡವಟ್ಟು ಮಾಡಿಕೊಂಡ್ರಾ?
ಸಾರ್ವಜನಿಕ ಸೇವಕರು ಹಾಗೂ ಪೊಲೀಸರ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪ, ಗುಂಪುಗಳು ಹಾಗೂ ಜಾತಿಗಳ ನಡುವೆ ದ್ವೇಷ ಉತ್ತೇಜಿಸಿದ ಆರೋಪ, ಧಾರ್ಮಿಕ ನಂಬಿಕೆಗಳಿಗೆ ಅವಮಾನ ಮಾಡಿದ ಆರೋಪ, ಪ್ರಚೋದನಕಾರಿ ಭಾಷಣ ಹಾಗೂ ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

MUST WATCH : 20 ವರ್ಷವಾದ್ರೂ ಅರ್ಜಿ ವಿಲೇವಾರಿ ಆಗಿಲ್ಲ – ಅಧಿಕಾರಿಗಳ ವಿರುದ್ಧ ಸುರೇಶ್ ಗೌಡ ಕೆಂಡ




