Indigo Flight ನಲ್ಲಿ ಕಾಣಿಸಿಕೊಂಡ ಹೊಗೆ.!

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನ (Indigo Flight) ದಲ್ಲಿ ಹೊಗೆ ಕಾಣಿಸಿಕೊಂಡಿದೆ. ನಿನ್ನೆ ಸಂಜೆ ಬೆಂಗಳೂರಿನಿಂದ ಚೆನ್ನೈಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ವಿಮಾನದಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ.
ಬೆಚ್ಚಿಬಿದ್ದ ಪ್ರಯಾಣಿಕರು – ತುರ್ತು ಸ್ಥಳಾಂತರ
ವಿಮಾನದಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದ್ದರಿಂದ ಪ್ರಯಾಣಿಕರು ಭಯಭೀತರಾಗಿ ಆತಂಕಕ್ಕೆ ಒಳಗಾಗಿದ್ದಾರೆ. ತಕ್ಷಣ ಎಚ್ಚೆತ್ತ ಸಿಬ್ಬಂದಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿಸಿ, ಎಮರ್ಜೆನ್ಸಿ ಡೋರ್ ಮೂಲಕ ಪ್ರಯಾಣಿಕರನ್ನು ಹೊರಗೆ ಕಳುಹಿಸಿದ್ದಾರೆ.
ಇದನ್ನು ಓದಿ : Indigo ವಿಮಾನ ಹಾರಾಟ ರದ್ದು –ಇತರೆ ಏರ್ಲೈನ್ಸ್ಗಳ ಟಿಕೆಟ್ ದರ ಏರಿಕೆ!

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ವಿಮಾನದಲ್ಲಿ ಹೊಗೆ ಕಾಣಿಸಿಕೊಳ್ಳಲು ನಿಖರ ಕಾರಣವೇನು?
ಘಟನೆಯ ವೇಳೆ ಕೆಲಕಾಲ ಏರ್ಪೋರ್ಟ್ನಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಸದ್ಯ ವಿಮಾನದಲ್ಲಿ ಹೊಗೆ ಕಾಣಿಸಿಕೊಳ್ಳಲು ನಿಖರ ಕಾರಣ ಏನು ಅನ್ನೋದು ಇನ್ನಷ್ಟೇ ತಿಳಿದುಬರಬೇಕಿದ್ದು, ತಾಂತ್ರಿಕ ದೋಷ ಶಂಕೆ ವ್ಯಕ್ತವಾಗಿದೆ.

ಇದನ್ನು ನೋಡಿ : DELHIಯಲ್ಲಿ CONGRESS MARATHAN MEETING – DKS ಫುಲ್ ಗರಂ ಆಗಿದ್ದು ಯಾಕೆ?




