
HASSAN : ಹಿಟ್ ಆ್ಯಂಡ್ ರನ್ನಲ್ಲಿ ಮಗನ ಸಾವು: ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಪೋಷಕರು
ಮಗನನ್ನು ಕಳೆದುಕೊಂಡ ನೋವಿನ ನಡುವೆಯೂ ಪೋಷಕರು ತೆಗೆದುಕೊಂಡ ಮಾನವೀಯ ನಿರ್ಧಾರವೊಂದು ಎಲ್ಲರ ಗಮನ ಸೆಳೆದಿದೆ. ಹೌದು.. ಅಪಘಾತದಲ್ಲಿ ಮೃತಪಟ್ಟ 31 ವರ್ಷದ ಪುತ್ರನ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಹೊಳೆನರಸೀಪುರ ತಾಲೂಕಿನ ಚಾಕೇನಹಳ್ಳಿ ಕಟ್ಟೆ ಗ್ರಾಮದ ಪೋಷಕರು ಮಾನವೀಯತೆ ಮೆರೆದಿದ್ದಾರೆ.
ಹಿಟ್ ಆ್ಯಂಡ್ ರನ್ನಲ್ಲಿ ಮಗನ ಸಾವು
ಚಾಕೇನಹಳ್ಳಿ ಕಟ್ಟೆ ಗ್ರಾಮದ 31 ವರ್ಷದ ರವಿ ಮೂರು ತಿಂಗಳ ಹಿಂದೆ ಪಾರಸನಹಳ್ಳಿ ಗ್ರಾಮದ ಬಳಿ ನಡೆದ ಹಿಟ್ ಆ್ಯಂಡ್ ರನ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸುಮಾರು ಮೂರು ತಿಂಗಳ ಕಾಲ ಚಿಕಿತ್ಸೆ ಮುಂದುವರಿದಿದ್ದು, ಇಂದು ರವಿ ಮೃತಪಟ್ಟಿದ್ದಾರೆ.
READ THIS : ಮೃತಪಟ್ಟ ಬಳಿಕ ಅಂಗಾಂಗ ದಾನ – ಸಾವಿನಲ್ಲೂ ಸಾರ್ಥಕತೆ ಮೆರೆದ ಯುವತಿ!

HASSAN – ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಪೋಷಕರು
ಮಗನನ್ನು ಉಳಿಸಿಕೊಳ್ಳಲು ಕುಟುಂಬಸ್ಥರು ಸಾಕಷ್ಟು ಪ್ರಯತ್ನ ಪಟ್ರೂ ಚಿಕಿತ್ಸೆ ಫಲಕಾರಿಯಾಗದೆ ರವಿ ಮೃತಪಟ್ಟಿದ್ದಾರೆ. ಮಗನ ಸಾವಿನ ಆಘಾತದ ನಡುವೆಯೇ ಮತ್ತೊಬ್ಬರ ಬದುಕಿಗೆ ನೆರವಾಗಬೇಕು ಅನ್ನೋ ಉದ್ದೇಶದಿಂದ ರವಿಯ ಅಂಗಾಂಗಗಳನ್ನು ದಾನ ಮಾಡಲು ಪೋಷಕರು ಮುಂದಾಗಿದ್ದಾರೆ.
ರವಿಯವರು ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಹೋಲುವ ರೀತಿಯಲ್ಲಿ ಕಾಣಿಸುತ್ತಿದ್ದರು ಎಂದು ಸ್ಥಳೀಯರು ಹೇಳುತ್ತಾರೆ. ಇದೀಗ ರವಿಯ ಅಂಗಾಂಗ ದಾನದ ನಿರ್ಧಾರವು ಅವರ ಕುಟುಂಬದ ಮಾನವೀಯ ನಡೆಗೆ ಸಾಕ್ಷಿಯಾಗಿದೆ.

MUST WATCH : ನೈಸ್ ರೋಡಲ್ಲಿ ರೈತರೊಂದಿಗೆ ಕುಮಾರಣ್ಣ – ಭೂ ಸಂತ್ರಸ್ತರಿಂದ ಅಹವಾಲು ಸ್ವೀಕಾರ.!




