ಇನ್ಮುಂದೆ ರಾಜ್ಯದಲ್ಲಿ ಹೈಟೆಕ್ ‘108’ ಸೇವೆ: ಕಮಾಂಡ್ ಸೆಂಟರ್ಗೆ CM ಹಸಿರು ನಿಶಾನೆ.

ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕಮಾಂಡ್ ಸೆಂಟರ್ಗೆ CM ಹಸಿರು ನಿಶಾನೆ
ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ “108 ಆರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ”ವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಅವರು, ಇದು ದೇಶದಲ್ಲಿಯೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಆರಂಭವಾಗಿರುವ ವ್ಯವಸ್ಥೆಯಾಗಿದ್ದು, ತುರ್ತು ವೈದ್ಯಕೀಯ ಸೇವೆಗಳನ್ನು ವೇಗವಾಗಿ ಮತ್ತು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವ ಉದ್ದೇಶ ಹೊಂದಿದೆ ಎಂದು ಹೇಳಿದರು.

18 ವರ್ಷಗಳಿಂದ 108 ಆ್ಯಂಬುಲೆನ್ಸ್ ಸೇವೆ
ರಾಜ್ಯದಲ್ಲಿ ಕಳೆದ 18 ವರ್ಷಗಳಿಂದ 108 ಆ್ಯಂಬುಲೆನ್ಸ್ ಸೇವೆ ಕಾರ್ಯನಿರ್ವಹಿಸುತ್ತಿದ್ದು, 2025-26ರ ಬಜೆಟ್ ಘೋಷಣೆಯಂತೆ ಈಗ ಈ ಸೇವೆಯನ್ನು ಮತ್ತಷ್ಟು ಬಲಪಡಿಸಲಾಗಿದೆ.
ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ಲಭಿಸುವಂತಾಗುವುದು ಮುಖ್ಯ. ಸರ್ಕಾರದ ಗುಣಮಟ್ಟದ ಆರೋಗ್ಯ ಸೇವೆಯಿಂದ ಜನರ ವಿಶ್ವಾಸ ಹೆಚ್ಚುತ್ತದೆ ಎಂದರು.

‘ಗೋಲ್ಡನ್ ಅವರ್’ – ಜೀವ ಉಳಿಸುವ ಮಂತ್ರ
ರಸ್ತೆ ಅಪಘಾತಗಳು, ಹೆರಿಗೆ, ಹೃದಯರೋಗಿ ಸೇರಿದಂತೆ ಹಲವು ಕ್ಲಿಷ್ಟ ಸಂದರ್ಭಗಳಲ್ಲಿ ತುರ್ತು ಚಿಕಿತ್ಸೆಯ ಅತ್ಯವಶ್ಯವಾಗಿದ್ದು, ಆ ಗೋಲ್ಡನ್ ಅವರ್ ನಲ್ಲಿ ಚಿಕಿತ್ಸೆ ದೊರೆತರೆ, ರೋಗಿಗಳು ಬದುಕುವ ಸಾಧ್ಯತೆ ಹೆಚ್ಚಿರುತ್ತದೆ. ಗೋಲ್ಡನ್ ಅವರ್ ನಲ್ಲಿ ದೊರೆತ ಚಿಕಿತ್ಸೆಯಲ್ಲಿ ಸುಮಾರು ಶೇ.80 ರಷ್ಟು ಜನರು ಬದುಕುಳಿದಿದ್ದಾರೆ. ಜೀವನ್ಮರಣದ ಹೋರಾಟದಲ್ಲಿ ತುರ್ತು ಚಿಕಿತ್ಸೆ ಹೆಚ್ಚಿನ ಮಹತ್ವವನ್ನು ಹೊಂದಿದೆ. ಬೆಂಗಳೂರು ನಗರದಲ್ಲಿ 65 ರಿಂದ 70 ಆ್ಯಂಬುಲೆನ್ಸ್ ಗಳಿದ್ದು, ತುರ್ತು ಚಿಕಿತ್ಸೆಗೆ ನೆರವಾಗಿವೆ. 108 ಆ್ಯಂಬುಲೆನ್ಸ್ ವ್ಯವಸ್ಥೆ ಖಾಸಗಿಯವರ ಕೈಯಲ್ಲಿದ್ದಾಗ, ಅವರ ಹೊಣೆಗಾರಿಕೆಯನ್ನು ಪ್ರಶ್ನಿಸುವಂತಿರಲಿಲ್ಲ. ಆದರೆ ಪ್ರಸ್ತುತ ಈ ವ್ಯವಸ್ಥೇ ಸರ್ಕಾರದ ಅಧೀನದಲ್ಲಿರುವುದರಿಂದ ಈ ಸೇವೆಯ ಹೊಣೆಗಾರಿಕೆ ಹೆಚ್ಚಿದೆ ಎಂದರು.
READ THIS : ಪರ ಪುರುಷನ ಜೊತೆ ಅಕ್ರಮ ಸಂಬಂಧ ಶಂಕೆ – ಅಕ್ಕನ ಕತ್ತು ಸೀಳಿ ಕೊಂದ ತಮ್ಮ..!!

ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಬದ್ಧ
ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಪುನರುಚ್ಚರಿಸಿದ CM , ಜನರು ಖಾಸಗಿ ಆಸ್ಪತ್ರೆಗಳ ಬದಲು ಸರ್ಕಾರಿ ಆಸ್ಪತ್ರೆಗಳ ಸೇವೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸಬೇಕು ಎಂದು ಕರೆ ನೀಡಿದರು.
ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಗುಣಮಟ್ಟದ ಚಿಕಿತ್ಸೆ ಲಭ್ಯವಿದ್ದು,ಕ್ಯಾನ್ಸರ್ ಸೇರಿದಂತೆ ಹಲವು ಗಂಭೀರ ಕಾಯಿಲೆಗಳಿಗೂ ಚಿಕಿತ್ಸೆ ದೊರೆಯುತ್ತಿದೆ ಎಂದರು.

MUST WATCH : ಅಕ್ರಮ ಸಂಬಂಧ ಶಂಕೆ ಹಿನ್ನೆಲೆ – ಅಕ್ಕನನ್ನೇ ಮಚ್ಚಿನಿಂದ ಕೊ* ಕೊ*




