ಕಲ್ಲು ಕ್ವಾರಿ ದುರಂತದಲ್ಲಿ Yadgiri ಕಾರ್ಮಿಕ ದಾರುಣ ಸಾವು

ಉದ್ಯೋಗ ಅರಸಿ ಬೆಂಗಳೂರಿಗೆ ವಲಸೆ ಬಂದಿದ್ದ ಯಾದಗಿರಿ ಮೂಲದ ಕಾರ್ಮಿಕನೊಬ್ಬ ಕಲ್ಲು ಕ್ವಾರಿ ದುರಂತದಲ್ಲಿ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.
ಬದುಕು ಕಟ್ಟಿಕೊಳ್ಳಲು ಬಂದಿದ್ದ ಕಾರ್ಮಿಕ
ಮೃತ ಕಾರ್ಮಿಕನನ್ನು Yadgiri ಜಿಲ್ಲೆಯ ಶಹಾಪುರ ತಾಲೂಕಿನ ನಡಿಹಾಳ ದೇವಸು ನಾಯಕ ತಾಂಡಾದ ನಿವಾಸಿ 45 ವರ್ಷದ ರಾಮು ನಾಯಕ ಎಂದು ಗುರುತಿಸಲಾಗಿದೆ. ನಾಲ್ಕು ವರ್ಷಗಳ ಹಿಂದೆ ಜೀವನೋಪಾಯಕ್ಕಾಗಿ ರಾಮು ನಾಯಕ ಬೆಂಗಳೂರಿಗೆ ವಲಸೆ ಬಂದಿದ್ದರು.
ಇದನ್ನು ಓದಿ : Bengaluru ಮೆಟ್ರೋ ಕಾಮಗಾರಿ ವೇಳೆ ಕಾರ್ಮಿಕ ಸಾವು..!!

ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವು
ಇಂದು ಜುಲೈ 2ರಂದು ಮಾದಪಟ್ಟಣದ ಕಲ್ಲು ಕ್ವಾರಿಯಲ್ಲಿ ಬಿಹಾರ ಮೂಲದ ಕಾರ್ಮಿಕರೊಂದಿಗೆ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಬಂಡೆ ಕುಸಿದಿದೆ. ಈ ವೇಳೆ ಅದರಡಿ ಸಿಲುಕಿದ ರಾಮು ನಾಯಕ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕುಟುಂಬಸ್ಥರು Yadgiri ಯಿಂದ ಬೆಂಗಳೂರಿನತ್ತ ಪ್ರಯಾಣ
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ರಾಮು ನಾಯಕ ಅವರ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ದುರಂತದಿಂದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಇದನ್ನು ನೋಡಿ : ಕ್ಷುಲ್ಲಕ ವಿಚಾರಕ್ಕೆ ಮಾರಾಮಾರಿ ಹಲ್ಲೆಗೊಳಗಾದ ವ್ಯಾಪಾರಿ ಸಾ*




