BENGALURU | ಬೀದಿ ನಾಯಿಯನ್ನು ಮರಕ್ಕೆ ನೇತುಹಾಕಿ ಮನಸೋಇಚ್ಛೆ ಕ್ರೂರವಾಗಿ ಹಲ್ಲೆ!
ಮೂಕಪ್ರಾಣಿಯ ಮೇಲೂ ಕರುಣೆ ಇಲ್ವಾ..? ಬೀದಿ ನಾಯಿಯನ್ನು ಮರಕ್ಕೆ ನೇತುಹಾಕಿ ಕ್ರೂರವಾಗಿ ಹಲ್ಲೆ ಮಾಡಿದ್ದೀರಲ್ಲಾ..? ನೀವು ಮನುಷ್ಯರಾ..? ಮೃಗಗಳಾ..? ಆ ಶ್ವಾನದ ಮೇಲೆ ಮನಬಂದಂತೆ ಹಲ್ಲೆ ನಡೆಸಿದ ಪರಿಣಾಮ ನಾಯಿ ಅಲ್ಲೇ ಸಾವನ್ನಪ್ಪಿದೆ. ಈ ಅಮಾನವೀಯ ಕೃತ್ಯದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪ್ರಾಣಿ ಪ್ರಿಯರು ಹಾಗೂ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
READ THIS : ಸ್ಟಿಂಗ್ ಆಪರೇಷನ್ ಕೋಲಾಹಲ – ಸಿದ್ದರಾಮಯ್ಯ ಮೌನವೇಕೆ?
ವರ್ತೂರು ಪೊಲೀಸರಿಂದ ಆರೋಪಿಗಳ ವಿಚಾರಣೆ
ಇನ್ನು ಘಟನೆಗೆ ಸಂಬಂಧಿಸಿದಂತೆ ವರ್ತೂರು ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಹಲ್ಲೆ ನಡೆಸಿದ ಆರೋಪದ ಮೇಲೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕೃತ್ಯದ ಹಿಂದಿನ ಕಾರಣವೇನು? ಘಟನೆ ಹೇಗೆ ನಡೆದಿದೆ? ಎಂಬುದರ ಕುರಿತು ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

BENGALURU – ಕ್ರೌರ್ಯ ಎಸಗಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ
ಮೂಕಪ್ರಾಣಿಗಳ ಮೇಲಿನ ಇಂತಹ ಕ್ರೌರ್ಯಕ್ಕೆ ಕಡಿವಾಣ ಹಾಕಬೇಕು. ಪ್ರಾಣಿಗಳಿಗೂ ನೋವು, ಜೀವ ಹಾಗೂ ಬದುಕುವ ಹಕ್ಕಿದೆ ಎಂಬುದನ್ನು ಮರೆಯಬಾರದು. ಈ ಘಟನೆಯಲ್ಲಿ ತಪ್ಪಿತಸ್ಥರೆಂದು ಸಾಬೀತಾದವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರಾಣಿ ಪ್ರಿಯರು ಆಗ್ರಹಿಸುತ್ತಿದ್ದಾರೆ
MUST WATCH : ದಲಿತ ಸಚಿವರನ್ನ ತಡೆದಿದ್ಯಾಕೆ… ಸರ್ಕಾರ ಅಷ್ಟು ವೀಕ್ ಆಗಿದ್ಯಾ




