Suicide : ಶಿಕ್ಷಕಿ ಬೈದಿದಕ್ಕೆ ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ನೇಣಿಗೆ ಶರಣು!

ಬೆಂಗಳೂರಲ್ಲಿ ಶಿಕ್ಷಕಿ ಬೈದಿದಕ್ಕೆ 8ನೇ ತರಗತಿ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮರಸೂರು ಮಡಿವಾಳದ ಮನೆಯಲ್ಲಿ ನಡೆದಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಮರಸೂರು ಮಡಿವಾಳದ ಮನೆಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಮಧುಶ್ರೀ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾಳೆ.
8ನೇ ತರಗತಿ ವಿದ್ಯಾರ್ಥಿನಿ ಸೂಸೈಡ್!
ಮೃತ ವಿದ್ಯಾರ್ಥಿನಿಯನ್ನು ಮಧುಶ್ರೀ ಎಂದು ಗುರುತಿಸಲಾಗಿದೆ. ಪೋಷಕರು ಬೆಳಿಗ್ಗೆ ಎದ್ದು ನೋಡಿದಾಗ ನೇಣಿಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ. ನನ್ನ ವಿರುದ್ಧ ಇಲ್ಲಸಲ್ಲದ ಅಪವಾದವನ್ನು ಹೊರಿಸಿದ್ದಾರೆ. ಅವಮಾನ ಸಹಿಸಿಕೊಂಡು ನನಗೆ ಬದುಕಲು ಆಗುತ್ತಿಲ್ಲ. ಮನಸ್ಸಿಗೆ ಹೆಚ್ಚು ನೋವಾಗಿದ್ದರಿಂದ ಈ ನಿರ್ಧಾರ ಕೈಗೊಂಡಿದ್ದೇನೆ.
ಇದನ್ನು ಓದಿ : PUC ಪರೀಕ್ಷೆಯಲ್ಲಿ ನಿರೀಕ್ಷಿತ ಫಲಿತಾಂಶ ಬಾರದಿದ್ದಕ್ಕೆ ವಿದ್ಯಾರ್ಥಿನಿ Suicide!

ಡೆಟ್ನೋಟ್ನಲ್ಲಿ ಏನಿದೆ?
ಅಲ್ಲದೆ, ತನ್ನ ಸಾವಿಗೆ ತಾಯಿ, ಅಕ್ಕ, ತಂಗಿ ಹಾಗೂ ತಮ್ಮ ಯಾರೂ ಕಾರಣರಲ್ಲ ಎಂದು ಸ್ಪಷ್ಟಪಡಿಸಿರುವ ಮಧುಶ್ರೀ, “ಅಮ್ಮನನ್ನು ಯಾರೂ ಬೈಯ್ಯಬೇಡಿ. ಈ ಭೂಮಿಯ ಮೇಲೆ ಬದುಕುವ ಅರ್ಹತೆ ನನಗಿಲ್ಲ. ಎಲ್ಲರೂ ನನ್ನನ್ನು ಕ್ಷಮಿಸಿ” ಎಂದು ಬರೆದಿರುವುದು ಮನಕಲಕುವಂತಿದೆ.
Suicide – ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಘಟನೆ ಸಂಬಂಧ ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡೆತ್ ನೋಟ್ ಹಾಗೂ ಇತರ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತನಿಖೆಯಿಂದಷ್ಟೇ ಸ್ಪಷ್ಟವಾಗಬೇಕಿದೆ.

ಇದನ್ನು ನೋಡಿ : ಮಂತ್ರಿಗಿರಿ ಸಿಗುವ ಆಸೆಯಲ್ಲಿ ಬೇಳೂರು ಗೋಪಾಲಕೃಷ್ಣ – ನಿಮ್ಮ ಬಾಯಿಗೆ ಸಕ್ಕರೆ ಹಾಕಾ ಎಂದ ಶಾಸಕ




