ಗೆಳೆಯನಿಗೆ ಕೊನೇ ಮೆಸೇಜ್ ಮಾಡಿ ಸ್ಯಾಂಕಿ ಕೆರೆಗೆ ಬಿದ್ದು ವಿದ್ಯಾರ್ಥಿನಿ Suicide

20 ವರ್ಷದ ವಿದ್ಯಾರ್ಥಿನಿಯೊಬ್ಬಳು ಬೆಂಗಳೂರಿನ ಸದಾಶಿವನಗರದ ಸ್ಯಾಂಕಿ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ವಿದ್ಯಾರ್ಥಿನಿ ತೇಜು ಆತ್ಮಹತ್ಯೆ
ಮೃತ ವಿದ್ಯಾರ್ಥಿನಿಯನ್ನು ಚಿಕ್ಕಬಾಣಾವರ ಮೂಲದ ತೇಜು ಎಂದು ಗುರುತಿಸಲಾಗಿದೆ. ಇಂದು ಬೆಳಗಿನ ಜಾವ ಸ್ಯಾಂಕಿ ಕೆರೆಯಲ್ಲಿ ಮೃತದೇಹ ಪತ್ತೆಯಾದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಇನ್ನು ಘಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಇದನ್ನು ಓದಿ : ಮದುವೆಗೆ ಮುನ್ನ ದುರಂತ – ಒಂದೇ ಕುಟುಂಬದ ಮೂವರು Suicide

ಪ್ರೀತಿ ವಿಚಾರಕ್ಕೆ Suicide ಶಂಕೆ
ಪ್ರೀತಿ ವಿಚಾರವೇ ಈ ಘಟನೆಗೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆತ್ಮಹತ್ಯೆಗೂ ಮುನ್ನ ತೇಜು ತನ್ನ ಗೆಳೆಯನಿಗೆ “ನನಗೆ ಜೀವನ ಸಾಕಾಗಿದೆ” ಎಂದು ಮೆಸೇಜ್ ಕಳುಹಿಸಿದ್ದಾಳೆ ಎನ್ನಲಾಗಿದೆ. ನಂತರ ತನ್ನ ಮೊಬೈಲ್ ಫೋನ್ ಅನ್ನು ಸ್ವಿಚ್ ಆಫ್ ಮಾಡಿಕೊಂಡಿದ್ದಳು ಎಂದು ತಿಳಿದುಬಂದಿದೆ.
ಬೆಳಗಿನ ಜಾವ ಮೃತದೇಹ ಪತ್ತೆ!
ಇಂದು ಬೆಳಗಿನ ಜಾವ ಮೃತದೇಹ ಪತ್ತೆಯಾದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಪರಿಶೀಲನೆ ನಡೆಸಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನು ನೋಡಿ : NGO ಕಚೇರಿಯಲ್ಲಿ SIR ನಡೆಸ್ತಿದ್ದ BLO – ಪ್ರಶ್ನಿಸಿದ್ದಕ್ಕೆ ಸ್ಕೂಟಿ ಹತ್ತಿ BLO ESCAPE




