Hassan ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ತಿರುಮಲಾಪುರದಲ್ಲಿ ಜಾಂಡೀಸ್ ಮತ್ತು ತೀವ್ರ ಜ್ವರದಿಂದ ಬಳಲುತ್ತಿದ್ದ ಬಿಸಿಎ ವಿದ್ಯಾರ್ಥಿನಿ ಪ್ರೀತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾಳೆ.

ಹಾಸನ (Hassan) ಜಿಲ್ಲೆಯ ಹೊಳೆನರಸೀಪುರ (Holenarasipura) ತಾಲೂಕಿನ ತಿರುಮಲಾಪುರದಲ್ಲಿ ಜಾಂಡೀಸ್ (Jaundice) ಮತ್ತು ತೀವ್ರ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಈ ಘಟನೆ ಕುಟುಂಬಸ್ಥರು ಹಾಗೂ ಕಾಲೇಜು ವಲಯದಲ್ಲಿ ತೀವ್ರ ದುಃಖವನ್ನುಂಟು ಮಾಡಿದೆ.
ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಸಾವು
ಮೃತ ವಿದ್ಯಾರ್ಥಿನಿಯನ್ನು ಪ್ರೀತಿ (20) ಎಂದು ಗುರುತಿಸಲಾಗಿದೆ. ಅವರು ಕೆಎಸ್ಆರ್ಟಿಸಿ ಬಸ್ ಚಾಲಕ ಲೋಕೇಶ್ ಟಿ.ಕೆ. ಮತ್ತು ಶೋಭಾ ದಂಪತಿಯ ಹಿರಿಯ ಪುತ್ರಿಯಾಗಿದ್ದರು.
ಪ್ರೀತಿ ಹಾಸನದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಸಿಎ ವ್ಯಾಸಂಗ ಮಾಡುತ್ತಿದ್ದರು. ಕಳೆದ ಕೆಲ ದಿನಗಳಿಂದ ತೀವ್ರ ಜ್ವರ ಮತ್ತು ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಆದರೆ, ವೈದ್ಯರ ಚಿಕಿತ್ಸೆಗೆ ಸ್ಪಂದಿಸದೇ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
MUST READ : Mantralaya ದಲ್ಲಿ ಜೋರು ಮಳೆ – ರಾತ್ರಿಯಿಡೀ ಪರದಾಡಿದ ರಾಯರ ಭಕ್ತರು..!!

ಕುಟುಂಬ ಹಾಗೂ ಕಾಲೇಜು ವಲಯದಲ್ಲಿ ಶೋಕ
ಪ್ರೀತಿಯ ಅಕಾಲಿಕ ನಿಧನದಿಂದ ಕುಟುಂಬದಲ್ಲಿ ಆಘಾತದ ವಾತಾವರಣ ನಿರ್ಮಾಣವಾಗಿದೆ. ಮುದ್ದಿನ ಪುತ್ರಿಯನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಸಂಬಂಧಿಕರು ಮತ್ತು ಗ್ರಾಮಸ್ಥರು ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ಇದೇ ವೇಳೆ, ವಿದ್ಯಾರ್ಥಿನಿಯ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕಾಲೇಜಿನ ಶಿಕ್ಷಕರು ಹಾಗೂ ಸಹಪಾಠಿಗಳು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
MUST WATCH : ಮಧುಗಿರಿಯಲ್ಲಿ ರಾಜಣ್ಣ- ಸೋಮಣ್ಣ ಸಮಾಗಮ ಪರಸ್ಪರ ಒಬ್ಬರಿಗೊಬ್ಬರು ಹೊಗಳಿಕೊಂಡ ನಾಯಕರು




