
SUICIDE : ಹಾಸ್ಟೆಲ್ನಲ್ಲಿ ನೇಣಿಗೆ ಶರಣಾದ ಡಿಪ್ಲೊಮಾ ವಿದ್ಯಾರ್ಥಿ! ಕಾರಣ ನಿಗೂಢ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣದಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಹಾಸ್ಟೆಲ್ನಲ್ಲಿ 18 ವರ್ಷದ ಡಿಪ್ಲೊಮಾ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.
ಡಿಪ್ಲೊಮಾ ವಿದ್ಯಾರ್ಥಿ ನಿಗೂಢ ಸಾವು!
ಮೃತ ವಿದ್ಯಾರ್ಥಿಯನ್ನು ಬೆಂಗಳೂರಿನ ವಿಜಯನಗರ ನಿವಾಸಿ ಜೋಹೆಲ್ (18) ಎಂದು ಗುರುತಿಸಲಾಗಿದೆ. ಹಾಸ್ಟೆಲ್ ಕೊಠಡಿಯಲ್ಲೇ ಜೋಹೆಲ್ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
READ THIS : ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ನೇಣು ಬಿಗಿದುಕೊಂಡು Suicide

ಪೊಲೀಸರು ಭೇಟಿ, ಪರಿಶೀಲನೆ
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಚನ್ನರಾಯಪಟ್ಟಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
SUICIDE ಮಾಡಿಕೊಳ್ಳಲು ನಿಖರ ಕಾರಣವೇನು?
ಜೋಹೆಲ್ ಸೂಸೈಡ್ ಮಾಡಿಕೊಳ್ಳಲು ಕಾರಣವೇನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಈ ಕುರಿತು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

MUST WATCH : ಹುಟ್ಟಿದ ಮಗುವಿಗೆ ಚಿನ್ನದ ಉಂಗುರ – VIJAY ಸರ್ಕಾರದ GOLD RING GIFT




